ದೇಶ

ಹೈದರಾಬಾದ್: ಯೂಟ್ಯೂಬರ್ ಬರ್ಬರ ಹತ್ಯೆ; ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ!

ಹಲ್ಲೆಯ ಸಮಯದಲ್ಲಿ ಕಬ್ಬಿಣದ ರಾಡ್‌ಗಳು ಮತ್ತು ಜಿಮ್ ಉಪಕರಣಗಳನ್ನು ಸಹ ಬಳಸಲಾಗಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಸೂದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹೈದರಾಬಾದ್: ಯೂಟ್ಯೂಬರ್ ಬರ್ಬರ ಹತ್ಯೆ; ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ!
ಚಾಂಡಿ ಮಸೂದ್
Published On :

ಹೈದರಾಬಾದ್: ಹೈದರಾಬಾದ್‌ನ ಗೋಲ್ಕೊಂಡ ಪ್ರದೇಶದಲ್ಲಿ ಶುಕ್ರವಾರ ನಡೆದ ಆಘಾತಕಾರಿ ಕೊಲೆಯಲ್ಲಿ, 30 ವರ್ಷದ ಯೂಟ್ಯೂಬರ್ ಒಬ್ಬರನ್ನು ಅವರ ಮನೆಯೊಳಗೆ ಭೀಕರವಾಗಿ ಕೊಲೆ ಮಾಡಲಾಗಿದೆ.

ಕೊಲೆಯಾದ ವ್ಯಕ್ತಿಯನ್ನು ಶೈಕ್ ಮಹಬೂಬ್ ಅಲಿಯಾಸ್ ಚಾಂಡಿ ಮಸೂದ್ ಎಂದು ಗುರುತಿಸಲಾಗಿದ್ದು, ಗೋಲ್ಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯ ಕುಮಾರ್‌ವಾಡಿಯಲ್ಲಿ ನಿನ್ನೆ ಮಧ್ಯಾಹ್ನ 3:20 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಸೂದ್ ಶುಕ್ರವಾರದ ಪ್ರಾರ್ಥನೆಯ ನಂತರ ಮನೆಗೆ ಮರಳಿದಾಗ ಜನರ ಗುಂಪೊಂದು ತನ್ನನ್ನು ಹಿಂಬಾಲಿಸುತ್ತಿರುವುದನ್ನು ಗಮನಿಸಿದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದಾಗ್ಯೂ, ದಾಳಿಕೋರರು ಬಲವಂತವಾಗಿ ನಿವಾಸಕ್ಕೆ ನುಗ್ಗಿ ಹಲವಾರು ಬಾರಿ ಇರಿದಿದ್ದಾರೆ.

ಪ್ರಮುಖ ಆರೋಪಿ, ಶೇಕ್ ಸೊಹೈಲ್, ಮಸೂದ್‌ನ ಪತ್ನಿಯ ಸಹೋದರನಾಗಿದ್ದು, ಸೊಹೈಲ್ ಜೊತೆಯಲ್ಲಿ ಅಫು ಮತ್ತು ಜಬೀರ್ ಎಂದು ಗುರುತಿಸಲಾದ ಆತನ ಸಹಚರರು ಈ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಮಸೂದ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಹಲ್ಲೆಯ ಸಮಯದಲ್ಲಿ ಕಬ್ಬಿಣದ ರಾಡ್‌ಗಳು ಮತ್ತು ಜಿಮ್ ಉಪಕರಣಗಳನ್ನು ಸಹ ಬಳಸಲಾಗಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಸೂದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪೊಲೀಸರು ಈ ಕೊಲೆಗೆ ದೀರ್ಘಕಾಲದ ಕೌಟುಂಬಿಕ ಕಲಹಗಳೇ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮಸೂದ್ ಸುಮಾರು ಒಂದೂವರೆ ವರ್ಷಗಳ ಹಿಂದೆ ಕೆಲವು ಕುಟುಂಬ ಸದಸ್ಯರ ವಿರೋಧದ ನಡುವೆಯೂ ಪ್ರೇಮ ವಿವಾಹವಾಗಿದ್ದ. ದಂಪತಿಗೆ ಒಂದು ಮಗು ಇದೆ. ಆದರೆ ಮಸೂದ್ ಮತ್ತು ಆತನ ಅತ್ತೆ-ಮಾವನ ನಡುವೆ ಜಗಳ ಮುಂದುವರೆದಿತ್ತು. ಇದು ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಕೊಲೆಯ ಹಿಂದಿನ ನಿಖರವಾದ ಕಾರಣವನ್ನು ತಿಳಿಯಲು ಪೊಲೀಸರು ಎಲ್ಲಾ ಸಂಗತಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ಪಡೆಯುತ್ತಿದ್ದಾರೆ ಎಂದು ಹೆಚ್ಚುವರಿ ಡಿಸಿಪಿ ಕೃಷ್ಣ ಗೌಡ್ ಅವರು ಹೇಳಿದ್ದಾರೆ.

ಕೊಲೆಯಲ್ಲಿ ಭಾಗಿಯಾಗಿರುವ ಎಲ್ಲರನ್ನು ಪತ್ತೆಹಚ್ಚಿ ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.