IAF ಅಧಿಕಾರಿಯ ಪತ್ನಿ ಮೇಲೆ ಅತ್ಯಾಚಾರ, ಬೆದರಿಕೆ, ಮತಾಂತರಕ್ಕೆ ಯತ್ನ; Video ವೈರಲ್, ಇಬ್ಬರ ಬಂಧನ!
ಅಶ್ಲೀಲ ವಿಡಿಯೋಗಳನ್ನು ತೋರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಾ ನಿರಂತರವಾಗಿ ಲೈಂಗಿಕ ಶೋಷಣೆ ನಡೆಸಿದ್ದಲ್ಲದೆ, ಸುಮಾರು 3.09 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿದ್ದಾಗಿ ಸಂತ್ರಸ್ತೆ ಆರೋಪಿಸಿದ್ದಾರೆ.

ನಾಗ್ಪುರ: IAF ಅಧಿಕಾರಿಯ ಪತ್ನಿ ಮೇಲೆ ಅತ್ಯಾಚಾರ ಮಾಡಿ, ಮತಾಂತರಕ್ಕೆ ಯತ್ನಿಸಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ಮಾದಕ ದ್ರವ್ಯ ಸೇವಿಸಿದ ಮೂವರು ತನನ್ನು ಅತ್ಯಾಚಾರ, ಬೆದರಿಕೆ ಹಾಕುವ ಮೂಲಕ ಬಲವಂತದಿಂದ ಮತಾಂತರಕ್ಕೆ ಯತ್ನಿಸಿದ್ದಾರೆ ಎಂದು ಭಾರತೀಯ ವಾಯುಪಡೆಯ ಅಧಿಕಾರಿಯನ್ನು ಮದುವೆಯಾಗಿರುವ 24 ವರ್ಷದ ನಾಗ್ಪುರದ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಘಟನೆ ಹಿನ್ನೆಲೆಯಲ್ಲಿ ಇಬ್ಬರು ಪುರುಷರನ್ನು ಬಂಧಿಸಲಾಗಿದ್ದು, ದೂರಿನಲ್ಲಿ ಹೆಸರಿಸಲಾದ ಮೂರನೇ ವ್ಯಕ್ತಿಯ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ವೈರಲ್ ಆಗಿರುವ ವಿಡಿಯೋದಲ್ಲಿ ಆರೋಪಿ ಅಯ್ಯಾಜ್ ಮಹಿಳೆಯ ಕೈಗಳನ್ನು ಬಲವಂತವಾಗಿ ಹಿಡಿದುಕೊಂಡು ಧಾರ್ಮಿಕ ಶ್ಲೋಕಗಳನ್ನು ಪಠಿಸುತ್ತಾ ಆಕೆಯ ಮುಖಕ್ಕೆ ಊದುತ್ತಿರುವುದು ಮತ್ತು ಮಹಿಳೆಯು ತಡೆಯಲಾರದೆ "ನನ್ನನ್ನು ಬಿಟ್ಟುಬಿಡಿ" ಎಂದು ಜೋರಾಗಿ ಅಳುತ್ತಿರುವುದು ಕಂಡುಬಂದಿದೆ.
ಮತಾಂತರ ಪ್ರಕ್ರಿಯೆ ಮುಗಿದ ನಂತರ ಅಲ್ಲಿ ಆಕೆಯ ಮೇಲೆ ಮತ್ತೊಮ್ಮೆ ಅತ್ಯಾಚಾರ ಮಾಡಲು ಯತ್ನಿಸಲಾಗಿತ್ತು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಅಯ್ಯಾಜ್ ತನ್ನ ಒಪ್ಪಿಗೆಯಿಲ್ಲದೆ ತನ್ನನ್ನು ಧಾರ್ಮಿಕ ವಿಧಿವಿಧಾನಗಳಿಗೆ ಒಳಪಡಿಸಿದ್ದು, ಮತಾಂತರಕ್ಕೆ ಯತ್ನಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.
ಕಳೆದ ವರ್ಷದ ಫೆಬ್ರವರಿಯಲ್ಲಿ ಆಸ್ತಿ ಖರೀದಿಸುವ ನೆಪದಲ್ಲಿ ಆಕೆಯನ್ನು ಸಂಪರ್ಕಿಸಿದ ಸಹಪಾಠಿ ಅಯ್ಯಾಜ್ ತಾಜ್ ಮದಾರೆ, ವಾರ್ದಾ ರಸ್ತೆಯಲ್ಲಿನ ಹೋಟೆಲ್ ವೊಂದಕ್ಕೆ ಕರೆದೊಯ್ದಿದ್ದು, ಅಲ್ಲಿ ಜ್ಯೂಸ್‌ನಲ್ಲಿ ಮಾದಕ ದ್ರವ್ಯ ಬೆರೆಸಿ, ಆಕೆ ಪ್ರಜ್ಞೆ ತಪ್ಪಿದಾಗ ಅತ್ಯಾಚಾರ ಎಸಗಿದ್ದಲ್ಲದೆ, ಆ ದೃಶ್ಯಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದನು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಆ ಬಳಿಕ ಆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಾ ನಿರಂತರವಾಗಿ ಲೈಂಗಿಕ ಶೋಷಣೆ ನಡೆಸಿದ್ದಲ್ಲದೆ, ಸುಮಾರು 3.09 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿದ್ದಾಗಿ ಸಂತ್ರಸ್ತೆ ಆರೋಪಿಸಿದ್ದಾರೆ.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಪೊಲೀಸರು ಅತ್ಯಾಚಾರ, ಸುಲಿಗೆ, ಬಲವಂತದ ಮತಾಂತರ ಯತ್ನ ಹಾಗೂ ಮಹಾರಾಷ್ಟ್ರದ ಮಾಟಮಂತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ಅಯ್ಯಾಜ್ ಮದಾರೆ ಮತ್ತು ಅಮೀನ್ ಶೇಖ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ತಲೆಮರೆಸಿಕೊಂಡಿರುವ ಹಜರತ್ ಮೌಲಾನಾ ಪತ್ತೆಗಾಗಿ ವಿಶೇಷ ತಂಡ ರಚಿಸಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



