ದೇಶ

RSS ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ತನಿಖೆ ಆರಂಭ

ಪೊಲೀಸರ ಪ್ರಕಾರ, ಇಂದು ಬೆಳಗಿನ ಜಾವ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ತುಂಬಿದ ಸಾಸ್ ಬಾಟಲಿಗಳನ್ನು ಆರ್‌ಎಸ್‌ಎಸ್ ಕಚೇರಿ ಆವರಣಕ್ಕೆ ಎಸೆದಿದ್ದಾರೆ. ಆದರೆ ಎರಡೂ ಬಾಟಲಿಗಳು ಕಾಂಪೌಂಡ್ ಬಳಿ ಬಿದ್ದಿವೆ.

RSS ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ತನಿಖೆ ಆರಂಭ
RSS ಕಚೇರಿ
Published On :

ರಾಂಚಿ: ರಾಂಚಿಯಲ್ಲಿರುವ ಆರ್‌ಎಸ್‌ಎಸ್ ಕಚೇರಿಗೆ ಹಾನಿ ಮಾಡುವ ಉದ್ದೇಶದಿಂದ ಬುಧವಾರ ಬೆಳಗಿನ ಜಾವ ಇಬ್ಬರು ಅಪರಿಚಿತ ವ್ಯಕ್ತಿಗಳು ಪೆಟ್ರೋಲ್ ಬಾಂಬ್‌ಗಳನ್ನು ಎಸೆಯಲು ಪ್ರಯತ್ನಿಸಿದ್ದಾರೆ.

ಪೊಲೀಸರ ಪ್ರಕಾರ, ಇಂದು ಬೆಳಗಿನ ಜಾವ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ತುಂಬಿದ ಸಾಸ್ ಬಾಟಲಿಗಳನ್ನು ಆರ್‌ಎಸ್‌ಎಸ್ ಕಚೇರಿ ಆವರಣಕ್ಕೆ ಎಸೆದಿದ್ದಾರೆ. ಆದರೆ ಎರಡೂ ಬಾಟಲಿಗಳು ಕಾಂಪೌಂಡ್ ಬಳಿ ಬಿದ್ದಿವೆ. ಹೀಗಾಗಿ ಘಟನೆಯಲ್ಲಿ ಆರ್‌ಎಸ್‌ಎಸ್ ಕಚೇರಿಗೆ ಯಾವುದೇ ಹಾನಿಯಾಗಿಲ್ಲ.

ಏತನ್ಮಧ್ಯೆ, ರಾಂಚಿ ಪೊಲೀಸರು ಘಟನೆಯಲ್ಲಿ ಭಾಗಿಯಾಗಿರುವ ದಾಳಿಕೋರರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಈ ಸಂಬಂಧ ತನಿಖೆ ಆರಂಭಿಸಲಾಗಿದ್ದು, ದುಷ್ಕರ್ಮಿಗಳನ್ನು ಗುರುತಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಂಚಿ ನಗರ ಎಸ್‌ಪಿ ಪರಾಸ್ ರಾಣಾ ಹೇಳಿದ್ದಾರೆ.

"ಈ ಘಟನೆಯಲ್ಲಿ ಇಬ್ಬರು ಯುವಕರು ಭಾಗಿಯಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಸಿಕ್ಕಿದೆ. ಈ ವಿಷಯದ ತನಿಖೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ಘಟಕ ಸೇರಿದಂತೆ ಹಲವಾರು ತಂಡಗಳನ್ನು ನಿಯೋಜಿಸಲಾಗಿದೆ" ಎಂದು ನಗರ ಎಸ್‌ಪಿ ತಿಳಿಸಿದ್ದಾರೆ.

ಇಬ್ಬರು ದಾಳಿಕೋರರು ಆರ್‌ಎಸ್‌ಎಸ್ ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್‌ಗಳನ್ನು ಎಸೆಯಲು ಪ್ರಯತ್ನಿಸುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೃಶ್ಯಾವಳಿಗಳನ್ನು ಪಡೆದುಕೊಂಡಿರುವುದಾಗಿ ಅವರು ಹೇಳಿದ್ದಾರೆ.

ಎಸ್‌ಪಿ ಪ್ರಕಾರ, ಮೊದಲ ಬಾಟಲಿಯನ್ನು ಎಸೆದಾಗ, ಉರಿಯುತ್ತಿರುವ ಫ್ಯೂಸ್ ನೆಲದ ಮೇಲೆ ಬಿದ್ದಿದೆ. ಇದರಿಂದಾಗಿ ಪೆಟ್ರೋಲ್ ಬಾಂಬ್ ಸ್ಫೋಟಗೊಂಡಿಲ್ಲ. ನಂತರ ಎರಡನೇ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಆದರೆ ಅದು ಕಚೇರಿ ಕಟ್ಟಡವನ್ನು ತಲುಪಲು ವಿಫಲವಾಯಿತು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.