NEET UG 2026ಗೆ ಮತ್ತೊಂದು ಬಲಿ; ಮರು ಪರೀಕ್ಷೆಗೂ ಮುನ್ನ 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ
ಜೂನ್ 19 ರಂದು ಲಖನೌನಲ್ಲಿ 17 ವರ್ಷದ ನೀಟ್ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಖನೌ: ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಉತ್ತರ ಪ್ರದೇಶದ ಲಖನೌನಲ್ಲಿ ಶುಕ್ರವಾರ 17 ವರ್ಷದ ವಿದ್ಯಾರ್ಥಿನಿಯೊಬ್ಬರು ಸಾವಿಗೆ ಶರಣಾಗಿದ್ದಾರೆ. ಇದು ನೀಟ್ ಪರೀಕ್ಷೆ ರದ್ದತಿ ಮತ್ತು ಮರು ಪರೀಕ್ಷೆಯಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಅಪಾರ ಒತ್ತಡವನ್ನು ಎತ್ತಿ ತೋರಿಸುತ್ತದೆ.
ಜೂನ್ 19 ರಂದು ಲಖನೌನಲ್ಲಿ 17 ವರ್ಷದ ನೀಟ್ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೂನ್ 21 ರಂದು ನೀಟ್ ಮರು ಪರೀಕ್ಷೆ ನಿಗದಿಯಾಗಿದ್ದು, ಪರೀಕ್ಷೆಗೆ ಕೇವಲ ಎರಡು ದಿನ ಇರುವಾಗಲೇ ಸುಹಾನಿ ಯಾದವ್ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ವಿದ್ಯಾರ್ಥಿನಿ ತನ್ನ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಬಜಾರ್ ಖಾಲಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಬ್ರಿಜೇಶ್ ಸಿಂಗ್ ತಿಳಿಸಿದ್ದಾರೆ. ಆದರೆ ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ.
ಮೇ 3 ರಂದು ನಡೆದ ನೀಟ್-ಯುಜಿ ಪರೀಕ್ಷೆಯಲ್ಲಿ ಆಕೆ ಉತ್ತಮವಾಗಿ ಬರೆದಿದ್ದಳು. ಅದರಲ್ಲಿ ಉತ್ತೀರ್ಣಳಾಗುವ ಭರವಸೆಯಲ್ಲಿದ್ದಳು. ಆದರೆ ಆ ಪರೀಕ್ಷೆಯನ್ನು ರದ್ದುಗೊಳಿಸಲಾಯಿತು ಎಂದು ಮೃತಳ ಕುಟುಂಬ ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ.
"ಸುಹಾನಿ ಕಳೆದ ಮೂರು ನಾಲ್ಕು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದಳು. ನಂತರ ಅವಳು ಮತ್ತೆ ಪರೀಕ್ಷೆಗೆ ತಯಾರಿ ಆರಂಭಿಸಿದಳು. ಆದರೆ ಪರೀಕ್ಷೆಯಿಂದಾಗಿ ಅವಳು ತೀವ್ರ ಒತ್ತಡಕ್ಕೆ ಸಿಲುಕಿದ್ದಳು ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ" ಎಂದು ಸಿಂಗ್ ತಿಳಿಸಿದ್ದಾರೆ.
ಹುಡುಗಿಯ ಕುಟುಂಬ ಮೂಲತಃ ಪಾಟ್ನಾದವರಾಗಿದ್ದು, ಆಕೆಯ ತಂದೆ ಭಾರತೀಯ ರೈಲ್ವೆಯಲ್ಲಿ ಟಿಕೆಟ್ ಪರೀಕ್ಷಕರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



