PM-Kisan: ರೈತರಿಗೆ ಗುಡ್ ನ್ಯೂಸ್, ನಾಳೆ 23ನೇ ಕಂತಿನ ಹಣ ಬಿಡುಗಡೆ; ಕರ್ನಾಟಕದ ಎಷ್ಟು ರೈತರಿಗೆ ನೆರವು ಸಿಗಲಿದೆ?
ಈ ಯೋಜನೆಯಡಿ ಕರ್ನಾಟಕ ರಾಜ್ಯದ ಒಟ್ಟು 41,54,160 ಫಲಾನುಭವಿ ರೈತರಿಗೆ ಕೇಂದ್ರ ಸರ್ಕಾರದಿಂದ ಒಟ್ಟಾರೆ ರೂ. 830.832 ಕೋಟಿಗಳ ಆರ್ಥಿಕ ನೆರವು ನೇರ ನಗದು ವರ್ಗಾವಣೆ (DBT) ಮೂಲಕ ಜಮೆಯಾಗಲಿದೆ.

ಬೆಂಗಳೂರು: ರೈತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 23ನೇ ಕಂತಿನ ಆರ್ಥಿಕ ನೆರವನ್ನು ನಾಳೆ ಬಿಡುಗಡೆ ಮಾಡಲಾಗುತ್ತಿದೆ.
ಪ್ರಧಾನ ಮಂತ್ರಿಗಳು 2026 ನೇ ಜೂನ್ 20 ರಂದು ಪಶ್ಚಿಮ ಬಂಗಾಳ ರಾಜ್ಯದ ತಾರಕೇಶ್ವರ್, ಹೂಗ್ಲಿಯಲ್ಲಿ ಸಂಜೆ 4:00 ಗಂಟೆಗೆ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ದೇಶದ ರೈತರ ಖಾತೆಗಳಿಗೆ ಅಧಿಕೃತವಾಗಿ ಹಣ ವರ್ಗಾವಣೆ ಮಾಡಲಿದ್ದಾರೆ. ಈ ವಿಶೇಷ ದಿನವನ್ನು "ಪಿ.ಎಂ. ಕಿಸಾನ್ ಉತ್ಸವ ದಿವಸ್" ಎಂದು ಆಚರಿಸಲಾಗುತ್ತಿದೆ.
ಕರ್ನಾಟಕದ ರೈತರಿಗೆ ರೂ. 830.832 ಕೋಟಿ ಅನುದಾನ: ಈ ಯೋಜನೆಯಡಿ ಕರ್ನಾಟಕ ರಾಜ್ಯದ ಒಟ್ಟು 41,54,160 ಫಲಾನುಭವಿ ರೈತರಿಗೆ ಕೇಂದ್ರ ಸರ್ಕಾರದಿಂದ ಒಟ್ಟಾರೆ ರೂ. 830.832 ಕೋಟಿಗಳ ಆರ್ಥಿಕ ನೆರವು ನೇರ ನಗದು ವರ್ಗಾವಣೆ (DBT) ಮೂಲಕ ಜಮೆಯಾಗಲಿದೆ.
ಯೋಜನೆಯ ಹಿನ್ನೆಲೆ ಮತ್ತು ಪ್ರಯೋಜನಗಳು: ವಾರ್ಷಿಕ ನೆರವು: ಅರ್ಹ ರೈತ ಕುಟುಂಬಗಳಿಗೆ ಕೃಷಿ ಚಟುವಟಿಕೆಗಳ ನಿರ್ವಹಣೆ ಹಾಗೂ ಉತ್ತಮ ಇಳುವರಿ ಪಡೆಯಲು ನೆರವಾಗುವಂತೆ ವಾರ್ಷಿಕವಾಗಿ ಒಟ್ಟು ರೂ. 6,000/- ಗಳ ಆರ್ಥಿಕ ಸಹಾಯ ನೀಡಲಾಗುತ್ತದೆ.
ಕಂತುಗಳ ವಿವರ: ಈ ಮೊತ್ತವನ್ನು ತಲಾ ರೂ. 2,000/- ಗಳಂತೆ ಮೂರು ಸಮಾನ ಕಂತುಗಳಲ್ಲಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ.
ಅರ್ಹತೆ: ಕರ್ನಾಟಕದಲ್ಲಿ ಫೆಬ್ರವರಿ 2019 ರಿಂದ ಈ ಯೋಜನೆ ಜಾರಿಯಲ್ಲಿದ್ದು, ದಿನಾಂಕ: 01.02.2019 ರ ಅನ್ವಯ ಸಾಗುವಳಿ ಭೂಮಿ ಹೊಂದಿರುವ ಅರ್ಹ ರೈತ ಕುಟುಂಬಗಳು (ಗಂಡ, ಹೆಂಡತಿ ಮತ್ತು ಅಪ್ರಾಪ್ತ ಮಕ್ಕಳು) ಇದರ ಪ್ರಯೋಜನ ಪಡೆಯುತ್ತಿದ್ದಾರೆ.
ಪ್ರಧಾನ ಮಂತ್ರಿಗಳ ಈ ನೇರ ನಗದು ವರ್ಗಾವಣೆ ಪ್ರಕ್ರಿಯೆಯಿಂದಾಗಿ ರಾಜ್ಯದ ಲಕ್ಷಾಂತರ ರೈತ ಕುಟುಂಬಗಳ ಕೃಷಿ ವೆಚ್ಚಕ್ಕೆ ಸಕಾಲದಲ್ಲಿ ಆರ್ಥಿಕ ಆಸರೆ ಸಿಕ್ಕಂತಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



