George Kurian: ಕೇಂದ್ರ ಸಚಿವ ಸ್ಥಾನಕ್ಕೆ ಜಾರ್ಜ್ ಕುರಿಯನ್ ರಾಜೀನಾಮೆ; ರಾಷ್ಟ್ರಪತಿಗಳಿಂದ ಅಂಗೀಕಾರ
ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಸಂವಿಧಾನದ 75ನೇ ವಿಧಿಯ ಷರತ್ತು (2) ರ ಅಡಿಯಲ್ಲಿ ಜಾರ್ಜ್ ಕುರಿಯನ್ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಇಂದು ಮಂಗಳವಾರ ರಾಜೀನಾಮೆ ನೀಡಿದ್ದಾರೆ.
ಅವರು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹಾಲು ಉತ್ಪಾದನೆ ಸಚಿವಾಲಯದಲ್ಲಿ ರಾಜ್ಯ ಸಚಿವರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.
ಪಿಟಿಐ ವರದಿ ಪ್ರಕಾರ, ಅವರು ಕೇಂದ್ರ ಸರ್ಕಾರದಲ್ಲಿ ಕ್ರೈಸ್ತ ಸಮುದಾಯಕ್ಕೆ ಸೇರಿದ ಏಕೈಕ ಸಚಿವರಾಗಿದ್ದರು. ಅವರ ರಾಜ್ಯಸಭಾ ಅವಧಿ ಮೊನ್ನೆ ಜೂನ್ 21 ರಂದು ಅಂತ್ಯಗೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಸಂವಿಧಾನದ 75ನೇ ವಿಧಿಯ ಷರತ್ತು (2) ರ ಅಡಿಯಲ್ಲಿ ಜಾರ್ಜ್ ಕುರಿಯನ್ ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.
ಜೂನ್ 18ರಂದು ನಡೆದ ರಾಜ್ಯಸಭಾ ಚುನಾವಣೆಗೆ ಅವರ ಜೊತೆಗೆ ಮತ್ತೊಬ್ಬ ಕೇಂದ್ರ ಸಚಿವ ರವ್ನೀತ್ ಸಿಂಗ್ ಬಿಟ್ಟು ಅವರನ್ನು ಕೂಡ ಮರುನಾಮಕರಣ ಮಾಡಲಾಗಿರಲಿಲ್ಲ, ಅವರ ಅವಧಿಯೂ ಅಂತ್ಯಗೊಂಡಿತ್ತು.
65 ವರ್ಷದ ಕುರಿಯನ್ 1980ರಲ್ಲಿ ಬಿಜೆಪಿ ಸ್ಥಾಪನೆಯಿಂದಲೇ ಪಕ್ಷದ ಸದಸ್ಯರಾಗಿದ್ದಾರೆ. ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯ, ಭಾರತೀಯ ಜನತಾ ಯುವ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಕೇರಳ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಸೇರಿದಂತೆ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ.
ಅವರು ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿಯೂ ಸೇವೆ ಸಲ್ಲಿಸಿದ್ದರು. 2024ರ ಜೂನ್ 9ರಂದು ಕೇಂದ್ರ ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇದಕ್ಕೂ ಮೊದಲು ಅವರು ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



