ಅಯೋಧ್ಯೆ ದೇಣಿಗೆ ಲೂಟಿ: FIR ಬೆನ್ನಲ್ಲೇ ರಾಮ ಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್, ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ
ಅನುಕಲ್ಪ್ ಮಿಶ್ರಾ, ಲವ್‌ಕುಶ್ ಮಿಶ್ರಾ, ಅವಿನಾಶ್ ಶುಕ್ಲಾ, ಟಿನ್ನು ಯಾದವ್, ಮನೀಶ್ ಯಾದವ್ ಮತ್ತು ಇತರರು ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಗುರುವಾರ ಎಫ್‌ಐಆರ್ ದಾಖಲಿಸಿದ್ದು, ಇದರ ಬೆನ್ನಲ್ಲೇ ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರು ಶುಕ್ರವಾರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ.
ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸ್ವೀಕರಿಸಿದ ದೇಣಿಗೆಗಳ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಈಗ ಅಧಿಕೃತವಾಗಿ ಎಫ್ಐಆರ್ ದಾಖಲಿಸುವ ಮೂಲಕ ಆರೋಪಿಗಳನ್ನು ಹೆಸರಿಸಿದೆ.
ಉತ್ತರ ಪ್ರದೇಶ ಸರ್ಕಾರದ ನಿರ್ದೇಶನದ ಮೇರೆಗೆ ಭಾರತೀಯ ನ್ಯಾಯ ಸಂಹಿತಾ(ಬಿಎನ್‌ಎಸ್) ನ ಸೆಕ್ಷನ್ 306, 316(5), 317(4), 317(5), 61 ಮತ್ತು 3(5) ಸೇರಿದಂತೆ ಹಲವು ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅನುಕಲ್ಪ್ ಮಿಶ್ರಾ, ಲವ್‌ಕುಶ್ ಮಿಶ್ರಾ, ಅವಿನಾಶ್ ಶುಕ್ಲಾ, ಟಿನ್ನು ಯಾದವ್, ಮನೀಶ್ ಯಾದವ್ ಮತ್ತು ಇತರರು ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಅಯೋಧ್ಯೆಯ ಮಾಜಿ ಎಸ್‌ಪಿ ಶಾಸಕ ಪವನ್ ಪಾಂಡೆ ಅವರು ರಾಮ ಮಂದಿರದಲ್ಲಿ 7 ಕೋಟಿಯಿಂದ 7.5 ಕೋಟಿ ರೂ.ಗಳವರೆಗೆ ದೇಣಿಗೆ ದುರುಪಯೋಗವಾಗಿದೆ ಎಂದು ಆರೋಪಿಸಿದ ನಂತರ ಪ್ರಕರಣದ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಎಸ್ಐಟಿ ರಚನೆ ಮಾಡಿದೆ.
ಈ ಹಗರಣದ ಕುರಿತು ಸಾರ್ವಜನಿಕವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸನಾತನ ಮೌಲ್ಯಗಳು ಮತ್ತು ಸಾರ್ವಜನಿಕರ ಶ್ರದ್ಧೆಯೊಂದಿಗೆ ಆಟವಾಡಲು ಯತ್ನಿಸುವವರ ವಿರುದ್ಧ ನಮ್ಮ ಸರ್ಕಾರ ಶೂನ್ಯ ಸಹಿಷ್ಣುತೆ (Zero-tolerance) ನೀತಿಯನ್ನು ಅಳವಡಿಸಿಕೊಂಡಿದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ವಿಶೇಷ ತನಿಖಾ ತಂಡ (SIT) ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ತಕ್ಷಣವೇ ಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ ಎಂದು ಯೋಗಿ ಹೇಳಿದ್ದಾರೆ.
ಇಂದು ದೇವರಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಯೋಗಿ, ಅಯೋಧ್ಯೆಯ ಘನತೆಗೆ ಧಕ್ಕೆ ತರುವ ಯಾವುದೇ ವಿಷಯದಲ್ಲಿ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪುನರುಚ್ಚರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



