ರಾಮ ಮಂದಿರ ದೇಣಿಗೆ ಲೂಟಿ: ಚಂಪತ್ ರಾಯ್ ಆಪ್ತ ಟಿನ್ನು ಯಾದವ್ ಸೇರಿ 8 ಮಂದಿ ಬಂಧನ
ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸ್ವೀಕರಿಸಿದ ದೇಣಿಗೆ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಗುರುವಾರ ಅಧಿಕೃತವಾಗಿ ಎಫ್ಐಆರ್ ದಾಖಲಿಸಿದ್ದು, 8 ಆರೋಪಿಗಳನ್ನು ಬಂಧಿಸಿದೆ.

ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಶುಕ್ರವಾರ ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ತಿನ್ನು ಯಾದವ್ ಸೇರಿದಂತೆ 8 ಜನರನ್ನು ಬಂಧಿಸಿದೆ.
ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸ್ವೀಕರಿಸಿದ ದೇಣಿಗೆ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಗುರುವಾರ ಅಧಿಕೃತವಾಗಿ ಎಫ್ಐಆರ್ ದಾಖಲಿಸಿದ್ದು, 8 ಆರೋಪಿಗಳನ್ನು ಬಂಧಿಸಿದೆ.
ಎಂಟು ಆರೋಪಿಗಳಲ್ಲಿ ಚಂಪತ್ ರಾಯ್ ಅವರ ಆಪ್ತ ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಯಾದವ್ ಸೇರಿದ್ದಾರೆ. ಇತರ ಆರೋಪಿಗಳೆಂದರೆ ಅನುಕಲ್ಪ್ ಮಿಶ್ರಾ, ಅವಿನಾಶ್ ಶುಕ್ಲಾ, ಕರುಣೇಶ್ ಪಾಂಡೆ, ಲವ್ ಕುಶ್ ಮಿಶ್ರಾ, ರಾಮ ಶಂಕರ್ ಮಿಶ್ರಾ ಮತ್ತು ಸುಭಾಷ್ ಶ್ರೀವಾಸ್ತವ ಅವರನ್ನು ಎಸ್ಐಟಿ ಬಂಧಿಸಿದೆ.
8 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆಯ ಭಾಗವಾಗಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಮುಂಬರುವ ದಿನಗಳಲ್ಲಿ ಇನ್ನಷ್ಟು ಆರೋಪಿಗಳನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ಸೂಚಿಸಿವೆ. ಆದರೆ, ಚಂಪತ್ ರಾಯ್ ಅಥವಾ ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ವಿರುದ್ಧ ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಆದರೆ ಈ ಇಬ್ಬರು ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ರಾಮ ಮಂದಿರ ದೇಣಿಗೆ ಲೂಟಿ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ನಿರ್ದೇಶನದ ಮೇರೆಗೆ ಭಾರತೀಯ ನ್ಯಾಯ ಸಂಹಿತಾ(ಬಿಎನ್‌ಎಸ್) ನ ಸೆಕ್ಷನ್ 306, 316(5), 317(4), 317(5), 61 ಮತ್ತು 3(5) ಸೇರಿದಂತೆ ಹಲವು ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅಯೋಧ್ಯೆಯ ಮಾಜಿ ಎಸ್‌ಪಿ ಶಾಸಕ ಪವನ್ ಪಾಂಡೆ ಅವರು ರಾಮ ಮಂದಿರದಲ್ಲಿ 7 ಕೋಟಿಯಿಂದ 7.5 ಕೋಟಿ ರೂ.ಗಳವರೆಗೆ ದೇಣಿಗೆ ದುರುಪಯೋಗವಾಗಿದೆ ಎಂದು ಆರೋಪಿಸಿದ ನಂತರ ಪ್ರಕರಣದ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಎಸ್ಐಟಿ ರಚನೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



