Video ಮುಂಬೈನಲ್ಲಿ ಭಾರೀ ಮಳೆ: ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ; ಓರ್ವ ವಿದ್ಯಾರ್ಥಿ ಸಾವು, 10 ಮಂದಿಗೆ ಗಾಯ
ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವರದಿ ಮಾಡಿರುವ ಪ್ರಕಾರ, ಯೂನಿವರ್ಸಲ್ ಹೈಸ್ಕೂಲ್ ವ್ಯಾನ್ ನಲ್ಲಿ 15 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದಾಗ ಮರ ವಾಹನದ ಮೇಲೆ ಬಿದ್ದಿದೆ.

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಚೆಂಬೂರ್ ಪ್ರದೇಶದಲ್ಲಿ 18 ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಬಿದ್ದಿದ್ದು, ಘಟನೆಯಲ್ಲಿ 11 ವರ್ಷದ ವಿದ್ಯಾರ್ಥಿ ಮೃತಪಟ್ಟಿದ್ದಾರೆ ಮತ್ತು 10 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಲವಾರು ವರದಿಗಳು ತಿಳಿಸಿವೆ.
ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವರದಿ ಮಾಡಿರುವ ಪ್ರಕಾರ, ಯೂನಿವರ್ಸಲ್ ಹೈಸ್ಕೂಲ್ ವ್ಯಾನ್ ನಲ್ಲಿ 15 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದಾಗ ಮರ ವಾಹನದ ಮೇಲೆ ಬಿದ್ದಿದೆ.
11 ವರ್ಷದ ವಿಹಾನ್ ಶ್ರೀವಾಸ್ತವ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ವರದಿ ಪ್ರಕಾರ, ಇಂದು ಮಧ್ಯಾಹ್ನ 2:50 ರ ಸುಮಾರಿಗೆ ತಿಲಕ್ ನಗರದ ಯೂನಿವರ್ಸಲ್ ಶಾಲೆಗೆ ಸೇರಿದ ಬಸ್ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ. ತಕ್ಷಣ ರಕ್ಷಣಾ ತಂಡಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಗೊಂಡ ಮಕ್ಕಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.
ಏತನ್ಮಧ್ಯೆ, ಮಹಾರಾಷ್ಟ್ರದಾದ್ಯಂತ ಮಳೆ ಹೆಚ್ಚಾಗಲಿದ್ದು, ಮುಂಬೈನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಪೂರ್ವ ಕರಾವಳಿಯಲ್ಲಿ ಸ್ವಲ್ಪ ಸಮಯ ಸ್ಥಗಿತಗೊಂಡಿದ್ದ ನೈಋತ್ಯ ಮಾನ್ಸೂನ್, ಕಳೆದ 24 ಗಂಟೆಗಳಲ್ಲಿ ಮತ್ತೆ ವೇಗ ಪಡೆದುಕೊಂಡಿದೆ ಎಂದು ವರದಿಯೊಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



