ಯುದ್ಧ ಸಂಕಷ್ಟದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ರಾಯಭಾರಿಗಳ ಜೊತೆಗೆ ಮಾತುಕತೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಕನ್ನಡಿಗರು ಮಾತ್ರವಲ್ಲ ಭಾರತೀಯರನ್ನೆಲ್ಲ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಸರ್ವ ಸನ್ನದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ನವದೆಹಲಿ: ಇರಾನ್-ಇಸ್ರೇಲ್ ಯುದ್ಧ ಸನ್ನಿವೇಶದಲ್ಲಿ ಸಂಕಷ್ಟದಲ್ಲಿ ಸಿಲುಕಿದ ಎಲ್ಲಾ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸನ್ನದ್ಧವಾಗಿದೆ. ಅಲ್ಲಿನ ರಾಯಭಾರಿ ಕಚೇರಿಯ ಉನ್ನತ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಜಗತ್ತಿನ ಎಲ್ಲೇ ಆಗಲಿ ಕನ್ನಡಿಗರು ಸೇರಿದಂತೆ ಭಾರತೀಯರು ಸಂಕಷ್ಟಕ್ಕೆ ಸಿಲುಕಿದಾಗ ಕೇಂದ್ರ ಸರ್ಕಾರ ಸುರಕ್ಷಿತವಾಗಿ ಕರೆ ತಂದಿದೆ. ಹಿಂದೆ ಯುಕ್ರೇನ್ ಅಲ್ಲಿ ಸಿಲುಕಿದ್ದವರನ್ನು ಮರಳಿ ಕರೆ ತಂದಿದ್ದೇವೆ. ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಗೆ ಕೇಂದ್ರ ಸರ್ಕಾರ ಪ್ರಥಮ ಆದ್ಯತೆ ನೀಡುತ್ತದೆ ಎಂದಿದ್ದಾರೆ.
ಇರಾನ್-ಇಸ್ರೇಲ್ ಯುದ್ಧದ ಭೀಕರತೆಯಿಂದಾಗಿ ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ಸಂಕಷ್ಟ ಎದುರಿಸುತ್ತಿರುವ ಬಗ್ಗೆ ಮಾಹಿತಿಯಿದ್ದು, ಈ ಸಂಬಂಧ ಹಿರಿಯ ಸಚಿವರೊಂದಿಗೆ ತುರ್ತು ಚರ್ಚೆ ನಡೆಸಿದ್ದು, ಎಲ್ಲಾ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಕನ್ನಡಿಗರು ಆತಂಕ ಪಡಬೇಕಿಲ್ಲ: ಕನ್ನಡಿಗರು ಮಾತ್ರವಲ್ಲ ಭಾರತೀಯರನ್ನೆಲ್ಲ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಸರ್ವ ಸನ್ನದ್ಧವಾಗಿದೆ. ಈಗಾಗಲೇ ರಾಯಭಾರಿ ಅಧಿಕಾರಿಗಳ ಜತೆ ಮಾತುಕತೆ ನಡೆಸಲಾಗಿದೆ. ಯಾರೊಬ್ಬರೂ ಆತಂಕ ಪಡಬೇಕಿಲ್ಲ ಎಂದು ಸಚಿವರು, ಆತಂಕದಲ್ಲಿರುವ ಕುಟುಂಬಸ್ಥರಿಗೆ ಸ್ಥೈರ್ಯ ಹೇಳಿದ್ದಾರೆ.
ಯುದ್ಧಪೀಡಿತ ಪ್ರದೇಶಗಳಲ್ಲಿ ವಿಮಾನ ಸಂಚಾರ ಅಪಾಯಕಾರಿ ಆಗಿದ್ದು, ತಜ್ಞರ ಸಲಹೆ ಪಡೆಯಲಾಗುತ್ತಿದೆ. ಭಾರತೀಯರ ಸುರಕ್ಷತೆಯೇ ಸರ್ಕಾರದ ಮೊದಲ ಆದ್ಯತೆ ಎಂದಿರುವ ಸಚಿವರು, ವಿಧಾನಪರಿಷತ್ ಸದಸ್ಯ ಭೋಜೇಗೌಡರು ಸೇರಿದಂತೆ ಸಂಕಷ್ಟದಲ್ಲಿರುವ ಎಲ್ಲಾ ಕನ್ನಡಿಗರ ರಕ್ಷಣೆಗೆ ಶ್ರಮಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ದುಬೈ ವಿಮಾನ ನಿಲ್ದಾಣ ಬಂದ್: ಬಳ್ಳಾರಿ ಶಾಸಕ ಭರತ್ ರೆಡ್ಡಿ ಸೇರಿ 50ಕ್ಕೂ ಹೆಚ್ಚು ಪ್ರವಾಸಿಗರು ಸಂಕಷ್ಟದಲ್ಲಿ; Video
ದುಬೈನಲ್ಲಿ ಸಿಲುಕಿದ ಕನ್ನಡಿಗರನ್ನು ಕರೆತರುತ್ತೇವೆ ಇರಾನ್-ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ವೇಳೆ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ನಮ್ಮ ಆದ್ಯತೆಯಾಗಿದೆ. ಯಾರೂ ಆತಂಕಪಡಬೇಕಿಲ್ಲ. ಸದ್ಯ ದುಬೈನಿಂದ ಯಾವುದೇ ವಿಮಾನ ಹಾರಾಟ ನಡೆಯುತ್ತಿಲ್ಲ. ಅಲ್ಲಿರುವವರನ್ನು ವಾಪಸ್ ಕರೆತರುವ ಬಗ್ಗೆ ಗಂಭೀರವಾಗಿ ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


