ದೇಶ

ಬಹ್ರೇನ್ ರಾಜ, ಸೌದಿ ಕ್ರೌನ್ ಪ್ರಿನ್ಸ್ ಜತೆ ಪ್ರಧಾನಿ ಮೋದಿ ಮಾತುಕತೆ; ಇರಾನ್ ದಾಳಿ ಖಂಡಿಸಿದ ಭಾರತ

ಪ್ರಧಾನಿ ಮೋದಿ ಅವರು ಎರಡೂ ದೇಶಗಳಲ್ಲಿ ವಾಸಿಸುವ ಭಾರತೀಯ ಸಮುದಾಯದ ಯೋಗಕ್ಷೇಮದ ಬಗ್ಗೆಯೂ ಉಭಯ ದೇಶಗಳ ನಾಯಕರೊಂದಿಗೆ ಚರ್ಚಿಸಿದ್ದಾರೆ.

ಬಹ್ರೇನ್ ರಾಜ, ಸೌದಿ ಕ್ರೌನ್ ಪ್ರಿನ್ಸ್ ಜತೆ ಪ್ರಧಾನಿ ಮೋದಿ ಮಾತುಕತೆ; ಇರಾನ್ ದಾಳಿ ಖಂಡಿಸಿದ ಭಾರತ
ಪ್ರಧಾನಿ ಮೋದಿ
Published On :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬಹ್ರೇನ್ ರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಮತ್ತು ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಹಾಗೂ ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತನಾಡಿದ್ದು, ಪಶ್ಚಿಮ ಏಷ್ಯಾದಲ್ಲಿ ಪ್ರಸ್ತುತ ನಡೆಯುತ್ತಿರುವ ಸಂಘರ್ಷದಲ್ಲಿ ಈ ಎರಡೂ ದೇಶಗಳ ಮೇಲೆ ಇರಾನ್ ನಡೆಸಿದ ದಾಳಿಯನ್ನು ಖಂಡಿಸಿದ್ದಾರೆ.

ಪ್ರಧಾನಿ ಮೋದಿ ಅವರು ಎರಡೂ ದೇಶಗಳಲ್ಲಿ ವಾಸಿಸುವ ಭಾರತೀಯ ಸಮುದಾಯದ ಯೋಗಕ್ಷೇಮದ ಬಗ್ಗೆಯೂ ಉಭಯ ದೇಶಗಳ ನಾಯಕರೊಂದಿಗೆ ಚರ್ಚಿಸಿದ್ದಾರೆ.

"ಪ್ರಧಾನಿ ಮೋದಿ ಅವರು ಇಂದು ಇಬ್ಬರು ಪ್ರಮುಖ ನಾಯಕರೊಂದಿಗೆ ದೂರವಾಣಿ ಸಂಭಾಷಣೆಗಳನ್ನು ನಡೆಸಿದರು. ಅವರು ಬಹ್ರೇನ್ ರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರೊಂದಿಗೆ ಮತ್ತು ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಹಾಗೂ ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತನಾಡಿದರು. ಈ ಎರಡೂ ದೇಶಗಳ ಮೇಲಿನ ದಾಳಿಗಳನ್ನು ಪ್ರಧಾನಿ ಖಂಡಿಸಿದರು" ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ. ಬಳಿಕ ಇರಾನ್, ಇಸ್ರೇಲ್, ಬಹ್ರೇನ್ ಮತ್ತು ಸೌದಿ ಅರೇಬಿಯಾ ಸೇರಿದಂತೆ ಹಲವಾರು ಪಶ್ಚಿಮ ಏಷ್ಯಾದ ದೇಶಗಳ ಮೇಲೆ ಸರಣಿ ಕ್ಷಿಪಣಿಗಳನ್ನು ಹಾರಿಸಿದ ನಂತರ ಮೋದಿ ಈ ದೂರವಾಣಿ ಸಂಭಾಷಣೆ ನಡೆಸಿದ್ದಾರೆ.

ಇದಕ್ಕು ಮುನ್ನ ಯುಎಇ ಅಧ್ಯಕ್ಷರೊಂದಿಗೂ ಮಾತನಾಡಿದ್ದ ಪ್ರಧಾನಿ ಮೋದಿ, ಯುಎಇ (UAE) ಮೇಲಿನ ಇರಾನ್‌ ದಾಳಿಯನ್ನ ತೀವ್ರವಾಗಿ ಖಂಡಿಸಿದ್ದರು. ʻಯುಎಇ ಅಧ್ಯಕ್ಷ ನನ್ನ ಸಹೋದರ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತನಾಡಿದೆ. ಯುಎಇ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿದೆ ಮತ್ತು ಈ ದಾಳಿಯಲ್ಲಿನ ಜೀವಹಾನಿಗೆ ಸಂತಾಪ ಸೂಚಿಸಿದೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.