ಜಾತಿ ಕಾರಣಕ್ಕೆ ಮದುವೆಗೆ ನಿರಾಕರಿಸಿದ ಪ್ರಿಯಕರ: ಮನನೊಂದು ಯುವತಿ ಆತ್ಮಹತ್ಯೆ
ಯುವತಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವಳಾಗಿದ್ದರೆ, ಯುವಕ ಅತ್ಯಂತ ಹಿಂದುಳಿದ ವರ್ಗಕ್ಕೆ ಸೇರಿದವನಾಗಿದ್ದಾನೆ. ಇತ್ತೀಚೆಗೆ ಯುವಕ ಜಾತಿ ವಿಚಾರ ಪ್ರಸ್ತಾಪಿಸಿ, ಮದುವೆಗೆ ನಿರಾಕರಿಸಿದ್ದಾನೆ.

ಸೇಲಂ: ಜಾತಿ ಭೇದ ಕಾರಣ ನೀಡಿ ಪ್ರಿಯಕರನೊಬ್ಬ ಮದುವೆಗೆ ನಿರಾಕರಿಸಿದ್ದರಿಂದ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.
ಮೃತ ಯುವತಿ ಖಾಸಗಿ ಕಾಲೇಜಿನ ಮೂರನೇ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಈಕೆ ದಿನಗೂಲಿ ಕೆಲಸಗಾರ ಕಾರ್ತಿಕೇಯನ್ ಎಂಬಾತನನ್ನು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದಳು.
ಇಬ್ಬರ ಜಾತಿ ಬೇರೆಯಾಗಿದೆ. ಯುವತಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವಳಾಗಿದ್ದರೆ, ಯುವಕ ಅತ್ಯಂತ ಹಿಂದುಳಿದ ವರ್ಗಕ್ಕೆ ಸೇರಿದವನಾಗಿದ್ದಾನೆ. ಇತ್ತೀಚೆಗೆ ಯುವಕ ಜಾತಿ ವಿಚಾರ ಪ್ರಸ್ತಾಪಿಸಿ, ಮದುವೆಗೆ ನಿರಾಕರಿಸಿದ್ದಾನೆ.
ಇದರಿಂದ ಮನನೊಂದಿದ್ದ ಯುವತಿ ಫೆಬ್ರವರಿ 21ರಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಸರ್ಕಾರಿ ಮೋಹನ್ ಕುಮಾರಮಂಗಲಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾಳೆ.
ಯುವತಿಯ ಸಾವಿನ ನಂತರ ಕುಟುಂಬದವರು ಮೃತದೇಹ ಸ್ವೀಕರಿಸಲು ನಿರಾಕರಿಸಿ, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂಬಂಧ ಅಟ್ಟಯಂಪಟ್ಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಯುವಕನನ್ನು ಬಂಧನಕ್ಕೊಳಪಡಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



