ದೇಶ

ಮಹಾರಾಷ್ಟ್ರ CM ಫಡ್ನವೀಸ್​ರಿಂದ 7.69 ಲಕ್ಷ ಕೋಟಿ ರೂ ಬಜೆಟ್ ಮಂಡನೆ; 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ

ತಮ್ಮ ಬಜೆಟ್ ವರ್ಷದ ಅಭಿವೃದ್ಧಿಗೆ ಮಾರ್ಗಸೂಚಿ ಮಾತ್ರವಲ್ಲದೆ 2047 ರ ವೇಳೆಗೆ ರಾಜ್ಯದ ಆರ್ಥಿಕತೆಯನ್ನು ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಪರಿವರ್ತಿಸುವ ದೃಷ್ಟಿಕೋನವನ್ನು ಹೊಂದಿದೆ ಎಂದು ಮುಖ್ಯಮಂತ್ರಿ ಫಡ್ನವೀಸ್ ಹೇಳಿದ್ದಾರೆ.

ಮಹಾರಾಷ್ಟ್ರ CM ಫಡ್ನವೀಸ್​ರಿಂದ 7.69 ಲಕ್ಷ ಕೋಟಿ ರೂ ಬಜೆಟ್ ಮಂಡನೆ; 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್
Published On :

ಮುಂಬೈ: ಹಣಕಾಸು ಖಾತೆಯನ್ನು ಹೊಂದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಶುಕ್ರವಾರ 7,69,467 ಕೋಟಿ ರೂ. ಮೊತ್ತದ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದರು. ಈ ಬಜೆಟ್ ನ ಹಣಕಾಸು ಕೊರತೆ ಶೇ. 2.7 ರಷ್ಟಿದೆ.

ದೇವೇಂದ್ರ ಫಡ್ನವೀಸ್ ಅವರು ರಾಜ್ಯದ ಇತಿಹಾಸದಲ್ಲಿ ಮುಖ್ಯಮಂತ್ರಿಯಾಗಿ ಬಜೆಟ್ ಮಂಡಿಸಿದ ಮೂರನೇ ಮುಖ್ಯಮಂತ್ರಿ ಎಂಬ ಗೌರವಕ್ಕೆ ಪಾತ್ರರಾದರು. ಇದಕ್ಕೂ ಮೊದಲು, ಮಹಾರಾಷ್ಟ್ರದ ಮೊದಲ ಮುಖ್ಯಮಂತ್ರಿ ಯಶವಂತರಾವ್ ಚವಾಣ ಮತ್ತು ನಂತರ ವಸಂತರಾವ್ ನಾಯಕ್ ಅವರು ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರಾಗಿ ರಾಜ್ಯ ಬಜೆಟ್ ಅನ್ನು ಮಂಡಿಸಿದ್ದರು.

ತಮ್ಮ ಬಜೆಟ್ ವರ್ಷದ ಅಭಿವೃದ್ಧಿಗೆ ಮಾರ್ಗಸೂಚಿ ಮಾತ್ರವಲ್ಲದೆ 2047 ರ ವೇಳೆಗೆ ರಾಜ್ಯದ ಆರ್ಥಿಕತೆಯನ್ನು ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಪರಿವರ್ತಿಸುವ ದೃಷ್ಟಿಕೋನವನ್ನು ಹೊಂದಿದೆ ಎಂದು ಮುಖ್ಯಮಂತ್ರಿ ಫಡ್ನವೀಸ್ ಹೇಳಿದ್ದಾರೆ.

ತಮ್ಮ ಬಜೆಟ್ ಪ್ರಗತಿಪರ, ಶಾಶ್ವತ, ಸಮಗ್ರ ಮತ್ತು ಉತ್ತಮ ಆಡಳಿತವನ್ನು ಉತ್ತೇಜಿಸುವ ನಾಲ್ಕು ವಿಷಯಾಧಾರಿತ ಸ್ತಂಭಗಳನ್ನು ಆಧರಿಸಿದೆ ಎಂದು ಸಿಎಂ ತಿಳಿಸಿದರು.

"ರಾಜ್ಯ ಕೃಷಿ ಜಿಡಿಪಿ 2047 ರ ವೇಳೆಗೆ 55 ಬಿಲಿಯನ್ ಡಾಲರ್‌ಗಳಿಂದ 500 ಬಿಲಿಯನ್ ಡಾಲರ್‌ಗೆ ಹೆಚ್ಚಾಗುವ ನಿರೀಕ್ಷೆಯಿದೆ. ಕೃಷಿ ವಲಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆ ಆರಂಭವಾಗಿದೆ ಮತ್ತು ಇಂದಿನವರೆಗೆ, 30 ಲಕ್ಷಕ್ಕೂ ಹೆಚ್ಚು ರೈತರು ರಾಜ್ಯ AI ವೇದಿಕೆಯ ಮೂಲಕ ನಿಖರವಾದ ಮಾಹಿತಿ ಮತ್ತು ಬೆಳೆ ಸಲಹೆಯನ್ನು ಪಡೆಯುತ್ತಿದ್ದಾರೆ ಎಂದರು.

ರೈತರಿಗೆ ಗುರುತಿನ ಚೀಟಿ(ID) ಗಳನ್ನು ಒದಗಿಸುವಲ್ಲಿ ಮಹಾರಾಷ್ಟ್ರ ದೇಶದಲ್ಲಿಯೇ ಪ್ರಮುಖ ರಾಜ್ಯವಾಗಿದೆ ಮತ್ತು ಇಲ್ಲಿಯವರೆಗೆ, 1.31 ಕೋಟಿ ರೈತರು ತಮ್ಮ ರೈತ ID ಗಳನ್ನು ಪಡೆದಿದ್ದಾರೆ. ಈ ID ಗಳನ್ನು ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಬಳಸಲಾಗುತ್ತದೆ" ಎಂದು ಫಡ್ನವೀಸ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.