LPG 'ಗ್ಯಾಸ್ ಸಿಲಿಂಡರ್ ಬುಕ್ಕಿಂಗ್' ನಿಯಮಗಳಲ್ಲಿ ಬದಲಾವಣೆ!
ಈ ಹಿಂದೆ 55 ದಿನಗಳಲ್ಲಿ ಬುಕ್ಕಿಂಗ್ ಮಾಡುತ್ತಿದ್ದ ಜನರು ಈಗ 15 ದಿನಗಳಲ್ಲಿ ಸಿಲಿಂಡರ್‌ಗಳನ್ನು ಬುಕ್ ಮಾಡಲು ಪ್ರಾರಂಭಿಸಿದ್ದಾರೆ ಎನ್ನಲಾಗಿದೆ. LPG ಉತ್ಪಾದನೆ ಹೆಚ್ಚಿಸಲು ಸರ್ಕಾರವು ಸಂಸ್ಕರಣಾಗಾರಗಳಿಗೆ ಆದೇಶಿಸಿದೆ.

ನವದೆಹಲಿ: LPG ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ನಿಯಮಗಳಲ್ಲಿ ಬದಲಾವಣೆಯಾಗಿದ್ದು, ಒಂದು ಸಿಲಿಂಡರ್ ಪಡೆದ ನಂತರ ಮುಂದಿನ ಬುಕ್ಕಿಂಗ್‌ಗೆ ಕನಿಷ್ಠ 21 ರಿಂದ 25 ದಿನಗಳ ಕಡ್ಡಾಯ ಅವಧಿಯನ್ನು ವಿಧಿಸಲಾಗಿದೆ.
ಕಾಳಸಂತೆ ಮತ್ತು ಬ್ಲಾಕ್ ಮಾರ್ಕೆಟಿಂಗ್ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಈ ಹಿಂದೆ 55 ದಿನಗಳಲ್ಲಿ ಬುಕ್ಕಿಂಗ್ ಮಾಡುತ್ತಿದ್ದ ಜನರು ಈಗ 15 ದಿನಗಳಲ್ಲಿ ಸಿಲಿಂಡರ್‌ಗಳನ್ನು ಬುಕ್ ಮಾಡಲು ಪ್ರಾರಂಭಿಸಿದ್ದಾರೆ ಎನ್ನಲಾಗಿದೆ. LPG ಉತ್ಪಾದನೆ ಹೆಚ್ಚಿಸಲು ಸರ್ಕಾರವು ಸಂಸ್ಕರಣಾಗಾರಗಳಿಗೆ ಆದೇಶಿಸಿದೆ.
ವಾಣಿಜ್ಯ ಸಂಪರ್ಕಗಳಿಗಿಂತ ದೇಶೀಯ LPG ಗೆ ಆದ್ಯತೆ ನೀಡಲು ಸೂಚಿಸಿದೆ. ದೇಶೀಯ ಗ್ರಾಹಕರು ಯಾವಾಗಲೂ ಆದ್ಯತೆಯಾಗಿರುತ್ತದೆ ಎಂದು ಮೂಲಗಳು ಪುನರುಚ್ಚರಿಸಿವೆ.
ಅಲ್ಜೀರಿಯಾ, ಆಸ್ಟ್ರೇಲಿಯಾ, ಕೆನಡಾ, ನಾರ್ವೆಯಂತಹ ದೇಶಗಳು ಭಾರತಕ್ಕೆ ಎಲ್‌ಪಿಜಿ ಮಾರಾಟ ಮಾಡಲು ಮುಂದಾಗಿವೆ. ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 130 ಡಾಲರ್ ಗೆ ಹೆಚ್ಚಾಗುವವರೆಗೂ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚಾಗುವ ಸಾಧ್ಯತೆಯಿಲ್ಲ.
ಭಾರತದಲ್ಲಿ ಸಾಕಷ್ಟು ದಾಸ್ತಾನು ಇರುವುದರಿಂದ ಇಂಧನ ಬೆಲೆಗಳು ಹೆಚ್ಚಾಗುವ ಸಾಧ್ಯತೆಯಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



