ದೇಶ

ಚೆನ್ನೈನ ಅಮೆರಿಕ ಕಾನ್ಸಲ್ ಜನರಲ್ ಆಗಿ ಮರಿಯಾನಾ ನೈಶುಲರ್‌ ಅಧಿಕಾರ ಸ್ವೀಕಾರ

ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಕಾನ್ಸಲ್‌ ಜನರಲ್‌ ನೈಶುಲರ್‌ ಅವರು, ನಮ್ಮ ದ್ವಿಪಕ್ಷೀಯ ಸಂಬಂಧದ ನಿರ್ಣಾಯಕ ಘಟ್ಟದಲ್ಲಿ ದಕ್ಷಿಣ ಭಾರತದಲ್ಲಿ ಅಮೆರಿಕಾವನ್ನು ಪ್ರತಿನಿಧಿಸುತ್ತಿರುವುದು ನನಗೆ ಸಂದ ಗೌರವ ಎಂದೇ ಭಾವಿಸುತ್ತೇನೆ ಎಂದರು.

ಚೆನ್ನೈನ ಅಮೆರಿಕ ಕಾನ್ಸಲ್ ಜನರಲ್ ಆಗಿ ಮರಿಯಾನಾ ನೈಶುಲರ್‌ ಅಧಿಕಾರ ಸ್ವೀಕಾರ
ಮರಿಯಾನಾ ನೈಶುಲರ್‌
Published On :

ಚೆನ್ನೈ: ಚೆನ್ನೈನಲ್ಲಿರುವ ಯುನೈಟೆಡ್ ಸ್ಟೇಟ್ಸ್ ಕಾನ್ಸುಲೇಟ್ ಜನರಲ್‌ ಆಗಿ ಮರಿಯಾನಾ ಎಲ್. ನೈಶುಲರ್ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು.

ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಕಾನ್ಸಲ್‌ ಜನರಲ್‌ ನೈಶುಲರ್‌ ಅವರು, ನಮ್ಮ ದ್ವಿಪಕ್ಷೀಯ ಸಂಬಂಧದ ನಿರ್ಣಾಯಕ ಘಟ್ಟದಲ್ಲಿ ದಕ್ಷಿಣ ಭಾರತದಲ್ಲಿ ಅಮೆರಿಕಾವನ್ನು ಪ್ರತಿನಿಧಿಸುತ್ತಿರುವುದು ನನಗೆ ಸಂದ ಗೌರವ ಎಂದೇ ಭಾವಿಸುತ್ತೇನೆ ಎಂದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕಾರ್ಯದರ್ಶಿ ರೂಬಿಯೋ ಮತ್ತು ರಾಯಭಾರಿ ಗೋರ್ ಅವರ ನೇತೃತ್ವದಲ್ಲಿ, ಅಮೆರಿಕನ್ನರು ಮತ್ತು ಭಾರತೀಯರಿಬ್ಬರಿಗೂ ನೈಜ ಫಲಿತಾಂಶ ನೀಡುವ ಪಾಲುದಾರಿಕೆಯನ್ನು ಬಲಪಡಿಸುವತ್ತ ನಾವು ಗಮನ ಕೇಂದ್ರೀಕರಿಸಿದ್ದೇವೆ. ವ್ಯಾಪಾರ ಸಂಬಂಧಗಳನ್ನು ವಿಸ್ತರಿಸಲು, ಅಮೆರಿಕನ್ ಉದ್ಯಮಗಳನ್ನು ಬೆಂಬಲಿಸಲು ಮತ್ತು ನಮ್ಮ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು ಜನರ ನಡುವಿನ ಬಾಂಧವ್ಯಗಳನ್ನು ವೃದ್ಧಿಸಲು ಎದುರು ನೋಡುತ್ತಿದ್ದೇನೆ ಎಂದು ಅವರು ಹೇಳಿದರು.

ಚೆನ್ನೈಗೆ ಬರುವ ಮೊದಲು, ಕಾನ್ಸಲ್ ಜನರಲ್ ನೈಶುಲರ್ ತಾಷ್ಕೆಂಟ್‌ನಲ್ಲಿರುವ ಯುಎಸ್ ರಾಯಭಾರ ಕಚೇರಿಯಲ್ಲಿ ರಾಜಕೀಯ ಮತ್ತು ಆರ್ಥಿಕ ವ್ಯವಹಾರಗಳ ಕೌನ್ಸಿಲರ್ ಆಗಿ ಸೇವೆ ಸಲ್ಲಿಸಿದ್ದರು. ಅವರು ಈ ಹಿಂದೆ ಜೆರುಸಲೆಮ್ ಮತ್ತು ಆಮ್ಮನ್ ರಾಯಭಾರ ಕಚೇರಿಗಳಲ್ಲಿ ಉಪ ಆರ್ಥಿಕ ಕೌನ್ಸಿಲರ್ ಆಗಿ, ಹಾಗೆಯೇ ವಾಷಿಂಗ್ಟನ್ ಡಿ.ಸಿ., ದುಬೈ, ಸ್ಕೋಪೆ ಯೆ ಮತ್ತು ಮಾಸ್ಕೋಗಳಲ್ಲಿಯೂ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.