ಗಲ್ಫ್ನಲ್ಲಿ ಸಿಲುಕಿರುವ ಭಾರತೀಯರಿಗೆ ಪ್ರಧಾನಿ ಮೋದಿ ಸಹಾಯದ ಭರವಸೆ; ಕೊಚ್ಚಿಯಲ್ಲಿ 'ವಿಕ್ಸಿತ್ ಕೇರಳಂ'ಗೆ ಚಾಲನೆ
ನಮ್ಮ ದೇಶವಾಸಿಗಳು ವಿದೇಶಗಳಲ್ಲಿ ತೊಂದರೆಯಲ್ಲಿದ್ದಾಗಲೆಲ್ಲಾ, ನಾವು ಅವರನ್ನು ಕೈಬಿಡುವುದಿಲ್ಲ. ನಮ್ಮ ಕಾರ್ಯಾಚರಣೆಗಳು ಮತ್ತು ರಾಯಭಾರ ಕಚೇರಿಗಳು 24/7 ಸಹಾಯವಾಣಿಗಳನ್ನು ನಿರ್ವಹಿಸುತ್ತಿವೆ.

ಕೊಚ್ಚಿ: ಪಶ್ಚಿಮ ಏಷ್ಯಾದ ಸಂಘರ್ಷದ ಪರಿಣಾಮ ಗಲ್ಪ್ ರಾಷ್ಟ್ರಗಳಲ್ಲಿ ಸಿಲುಕಿರುವ ಕೇರಳಿಗರಿಗೆ ಧೈರ್ಯ ತುಂಬಲು ಯತ್ನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸರ್ಕಾರವು ವಿದೇಶದಲ್ಲಿರುವ ಭಾರತೀಯರೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ಬುಧವಾರ ಭರವಸೆ ನೀಡಿದರು.
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕೊಚ್ಚಿಯ ಜವಾಹರಲಾಲ್ ನೆಹರು ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎನ್ಡಿಎ ಸಮಾವೇಶ ಉದ್ದೇಶಿಸಿ ಮಾತನಾಡಿದ ಮೋದಿ, ಗಲ್ಫ್ನಲ್ಲಿರುವ ದೊಡ್ಡ ಮಲಯಾಳಿ ವಲಸಿಗರನ್ನು ಉಲ್ಲೇಖಿಸಿ, ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯು ಕೇರಳದಲ್ಲಿರುವ ಕುಟುಂಬಗಳಲ್ಲಿ ತೀವ್ರ ಆತಂಕ ಉಂಟು ಮಾಡಿದೆ ಎಂದರು.
"ನಮ್ಮ ದೇಶವಾಸಿಗಳು ವಿದೇಶಗಳಲ್ಲಿ ತೊಂದರೆಯಲ್ಲಿದ್ದಾಗಲೆಲ್ಲಾ, ನಾವು ಅವರನ್ನು ಕೈಬಿಡುವುದಿಲ್ಲ. ನಮ್ಮ ಕಾರ್ಯಾಚರಣೆಗಳು ಮತ್ತು ರಾಯಭಾರ ಕಚೇರಿಗಳು 24/7 ಸಹಾಯವಾಣಿಗಳನ್ನು ನಿರ್ವಹಿಸುತ್ತಿವೆ. ನಾವು ಗಲ್ಫ್ನಲ್ಲಿರುವ ನಮ್ಮ ಜನರಿಗೆ ಎಲ್ಲಾ ರೀತಿಯ ಸಹಾಯವನ್ನು ಒದಗಿಸುತ್ತೇವೆ" ಎಂದು ಪ್ರಧಾನಿ ಹೇಳಿದರು.
ನವೀಕರಿಸಬಹುದಾದ ಇಂಧನ ಮೂಲಗಳನ್ನು ಹೆಚ್ಚಿಸುವ ಸರ್ಕಾರದ ಬದ್ಧತೆಯನ್ನು ಒತ್ತಿ ಹೇಳಿದ ಅವರು, ಭಾರತವು ಪಳೆಯುಳಿಕೆ ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತಿದೆ ಎಂದರು.
ಪಶ್ಚಿಮ ಏಷ್ಯಾ ಸಂಘರ್ಷದ ವಿಚಾರದಲ್ಲೂ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಯುವರಾಜನಿಗೆ ದೇಶದಲ್ಲಿನ ಅಭಿವೃದ್ಧಿಯ ಬಗ್ಗೆ ಅರಿವಿಲ್ಲ ಎಂದು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಮೋದಿ ವಾಗ್ದಾಳಿ ನಡೆಸಿದರು.
ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಲು ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಪ್ರಚೋದನಕಾರಿ ಮತ್ತು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದೆ. ಬಿಕ್ಕಟ್ಟಿನ ಸಂದರ್ಭದಲ್ಲಿ ಕಾಂಗ್ರೆಸ್ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿರುವುದು ದುರದೃಷ್ಟಕರ ವಿಷಯ ಎಂದ ಪ್ರಧಾನಿ ಮೋದಿ ಹೇಳಿದ್ದಾರೆ.
ಇದೇ ವೇಳೆ ಬಿಜೆಪಿಯ "ವಿಕ್ಷಿತ್ ಕೇರಳಂ" ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ, ಕೇರಳವನ್ನು ಪ್ರವಾಸೋದ್ಯಮ, ಪ್ರತಿಭೆ ಮತ್ತು ತಂತ್ರಜ್ಞಾನದ ಕೇಂದ್ರವನ್ನಾಗಿ ಪರಿವರ್ತಿಸುವ ಗುರಿಯನ್ನು ಪಕ್ಷ ಹೊಂದಿದೆ ಎಂದು ಹೇಳಿದರು.
ಕೇಂದ್ರವು ಹಲವಾರು ಪ್ರಮುಖ ಯೋಜನೆಗಳ ಮೂಲಕ ಕೇರಳದ ಮೂಲಸೌಕರ್ಯದ ಆಧುನೀಕರಣವನ್ನು ಬೆಂಬಲಿಸುತ್ತಿದೆ. ರಾಜ್ಯವನ್ನು ಕೃತಕ ಬುದ್ಧಿಮತ್ತೆ ಮತ್ತು ಭವಿಷ್ಯದ ತಂತ್ರಜ್ಞಾನಗಳ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಬಿಜೆಪಿ ಕೆಲಸ ಮಾಡುತ್ತದೆ. ಈ ಉಪಕ್ರಮಗಳು ಕೈಗಾರಿಕಾ ಬೆಳವಣಿಗೆ, ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಮತ್ತು ಕೇರಳದ ಜನರ ಜೀವನವನ್ನು ಸುಧಾರಿಸುತ್ತದೆ ಎಂದು ಒತ್ತಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



