2 ಲಕ್ಷ ಕೋಟಿ ರೂ ಪೂರಕ ಬಜೆಟ್ ಗೆ ಲೋಕಸಭೆ ಅನುಮೋದನೆ; ಕಲಾಪ ನಾಳೆಗೆ ಮುಂದೂಡಿಕೆ
ಪೂರಕ ಬಜೆಟ್ ಮೂಲಕ, ಕೇಂದ್ರ ಸರ್ಕಾರವು ಪ್ರಸಕ್ತ ಹಣಕಾಸು ವರ್ಷದಲ್ಲಿ ಒಟ್ಟು 2.81 ಲಕ್ಷ ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಖರ್ಚು ಮಾಡಲು ಲೋಕಸಭೆಯ ಅನುಮೋದನೆ ಕೋರಿತ್ತು.

ನವದೆಹಲಿ: 2026ನೇ ಸಾಲಿನ ಎರಡನೇ ಹಂತದ ಅನುದಾನದ ಪೂರಕ ಬಜೆಟ್ ಅನ್ನು ಶುಕ್ರವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ ಸರ್ಕಾರಕ್ಕೆ ಹೆಚ್ಚುವರಿಯಾಗಿ 2.01 ಲಕ್ಷ ಕೋಟಿ ರೂ. ಖರ್ಚು ಮಾಡಲು ಅವಕಾಶ ಮಾಡಿಕೊಟ್ಟಿದೆ.
ಪೂರಕ ಬಜೆಟ್ ಮೂಲಕ, ಕೇಂದ್ರ ಸರ್ಕಾರವು ಪ್ರಸಕ್ತ ಹಣಕಾಸು ವರ್ಷದಲ್ಲಿ ಒಟ್ಟು 2.81 ಲಕ್ಷ ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಖರ್ಚು ಮಾಡಲು ಲೋಕಸಭೆಯ ಅನುಮೋದನೆ ಕೋರಿತ್ತು. ಈ ಪೂರಕದಲ್ಲಿ ಪ್ರಸಕ್ತ ಹಣಕಾಸು ವರ್ಷಕ್ಕೆ ಅಂದಾಜು 80,000 ಕೋಟಿ ರೂ.ಗಳ ಹೆಚ್ಚುವರಿ ಸ್ವೀಕೃತಿಯೊಂದಿಗೆ, ನಿವ್ವಳ ಹೆಚ್ಚುವರಿ ನಗದು ವೆಚ್ಚವು 2.01 ಲಕ್ಷ ಕೋಟಿ ರೂ.ಗಳಾಗಿರುತ್ತದೆ.
ಹೆಚ್ಚುವರಿ ವೆಚ್ಚದ ಹೊರತಾಗಿಯೂ, ಪ್ರಸಕ್ತ ಹಣಕಾಸು ವರ್ಷದ(2025-26) ಹಣಕಾಸಿನ ಕೊರತೆಯು ಪರಿಷ್ಕೃತ ಅಂದಾಜುಗಳ(RE) ಒಳಗೆ ಇರುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಚರ್ಚೆಯ ವೇಳೆ ಹೇಳಿದರು.
ಪ್ರತಿಪಕ್ಷಗಳ ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಧ್ವನಿ ಮತದ ಮೂಲಕ ಪೂರಕ್ ಬಜೆಟ್ ಅನ್ನು ಅಂಗೀಕರಿಸಲಾಯಿತು. ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಮಧ್ಯೆ ದೇಶದಲ್ಲಿ ಎಲ್ಪಿಜಿ ಲಭ್ಯತೆಯ ಬಗ್ಗೆ ವಿರೋಧ ಪಕ್ಷದ ಸದಸ್ಯರು ತೀವ್ರ ಪ್ರತಿಭಟನೆ ನಡೆಸುತ್ತಿದ್ದರು.
ಪೂರಕ ಬಜೆಟ್ ಅಂಗೀಕಾರದ ನಂತರ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



