ಮಂಡಿಯೂರಿದ ಕೇಂದ್ರ: ಜೋಧಪುರ ಜೈಲಿನಿಂದ ಸೋನಮ್ ವಾಂಗ್ಚುಕ್ ಬಿಡುಗಡೆ
ತಕ್ಷಣದಿಂದ ಜಾರಿಗೆ ಬರುವಂತೆ ಸೋನಮ್ ವಾಂಗ್ಚುಕ್ ಅವರನ್ನು ಬಂಧಮುಕ್ತಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಆದೇಶಿಸಿದ ಹಿನ್ನೆಲೆಯಲ್ಲಿ ಇಂದು ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಜೋಧಪುರ: ರಾಷ್ಟ್ರೀಯ ಭದ್ರತಾ ಕಾಯ್ದೆಯಡಿಯಲ್ಲಿ ಲಭ್ಯವಿರುವ ಅಧಿಕಾರವನ್ನು ಬಳಸಿಕೊಂಡು ಬಂಧಿಸಲಾಗಿದ್ದ ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ಶನಿವಾರ ಜೋಧ್‌ಪುರ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಯಿತು.
ತಕ್ಷಣದಿಂದ ಜಾರಿಗೆ ಬರುವಂತೆ ಸೋನಮ್ ವಾಂಗ್ಚುಕ್ ಅವರನ್ನು ಬಂಧಮುಕ್ತಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಆದೇಶಿಸಿದ ಹಿನ್ನೆಲೆಯಲ್ಲಿ ಇಂದು ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಲೇಹ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಹೊರಡಿಸಿದ ಆದೇಶದ ಪ್ರಕಾರ ವಾಂಗ್‌ಚುಕ್ ಅವರನ್ನು ಕಳೆದ ವರ್ಷ ಸೆಪ್ಟೆಂಬರ್ 26 ರಂದು ರಾಷ್ಟ್ರೀಯ ಭದ್ರತಾ ಕಾಯ್ದೆ(ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಗಿತ್ತು.
ಕಾಯ್ದೆಯಡಿಯಲ್ಲಿ ನಿಗದಿಪಡಿಸಿದ ಬಂಧನ ಅವಧಿಯ ಅರ್ಧದಷ್ಟು ಭಾಗವನ್ನು ಅವರು ಈಗಾಗಲೇ ಜೈಲಿನಲ್ಲಿ ಅನುಭವಿಸಿದ್ದಾರೆ.
"ಕೇಂದ್ರ ಸರ್ಕಾರದ ಆದೇಶದ ನಂತರ ಸೋನಮ್ ವಾಂಗ್ಚುಕ್ ಅವರನ್ನು ಇಂದು ಮಧ್ಯಾಹ್ನ 1.30 ರ ಸುಮಾರಿಗೆ ಜೈಲಿನಿಂದ ಬಿಡುಗಡೆ ಮಾಡಲಾಯಿತು" ಎಂದು ರತನಾಡ ಪೊಲೀಸ್ ಠಾಣೆಯ ಎಸ್‌ಎಚ್‌ಒ ದಿನೇಶ್ ಲಖವತ್ ಅವರು ತಿಳಿಸಿದ್ದಾರೆ.
ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ಸಂವಿಧಾನದ ಆರನೇ ಶೆಡ್ಯೂಲ್ ಅಡಿಯಲ್ಲಿ ಅದನ್ನು ಸೇರಿಸಬೇಕು ಎಂದು ಆಗ್ರಹಿಸಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ನಂತರ, ಸೆಪ್ಟೆಂಬರ್ 26, 2025 ರಂದು ವಾಂಗ್‌ಚುಕ್ ಅವರನ್ನು ಬಂಧಿಸಿ, ರಾಜಸ್ಥಾನದ ಜೋಧ್‌ಪುರ ಜೈಲಿಗೆ ಕಳುಹಿಸಲಾಗಿತ್ತು.
ಹಿಂಸಾತ್ಮಕ ಪ್ರತಿಭಟನೆಯಲ್ಲಿ 22 ಪೊಲೀಸರು ಸೇರಿದಂತೆ 45 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



