'ಅಶ್ಲೀಲ, ಅಸಹ್ಯ': ಬಂಗಾಳ ಶಾಲೆಯ 'ಟವೆಲ್ ಡ್ಯಾನ್ಸ್' ವಿಡಿಯೋ ವೈರಲ್, ವ್ಯಾಪಕ ಆಕ್ರೋಶ! Video
ಕೋಲ್ಕತ್ತಾದ ಜೀಬನ್ ಜ್ಯೋತಿ ಮಾಡೆಲ್ ಶಾಲೆ (Jeeban Jyoti Model School)ಯಲ್ಲಿ ಈ ಘಟನೆ ನಡೆದಿದೆ.

ಕೋಲ್ಕತಾ: ಪಶ್ಚಿಮ ಬಂಗಾಳದ ಶಾಲಾ ಸಾಂಸ್ಕೃತಿಕ ಕಾರ್ಯಕ್ರಮದ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಹುಡುಗಿಯರ ಗುಂಪೊಂದು ಟವೆಲ್ ಸುತ್ತಿಕೊಂಡು ಅಶ್ಲೀಲ ನೃತ್ಯ ಪ್ರದರ್ಶಿಸುತ್ತಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಕೋಲ್ಕತ್ತಾದ ಜೀಬನ್ ಜ್ಯೋತಿ ಮಾಡೆಲ್ ಶಾಲೆ (Jeeban Jyoti Model School)ಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಾರ್ಯಕ್ರಮವೊಂದರಲ್ಲಿ ಹುಡುಗಿಯರ ಗುಂಪೊಂದು ಟವೆಲ್ ಸುತ್ತಿಕೊಂಡು ನೃತ್ಯ ಪ್ರದರ್ಶಿಸುತ್ತಿರುವುದನ್ನು ಈ ಕ್ಲಿಪ್ ತೋರಿಸುತ್ತದೆ.
ಶಾಲೆಯ ವೇದಿಕೆಯ ಮೇಲೆ ವಿದ್ಯಾರ್ಥಿನಿಯರು ಮೈಮೇಲೆ ಕೇವಲ ಬಿಳಿ ಬಣ್ಣದ ಟವೆಲ್ ಸುತ್ತಿಕೊಂಡು ಬಾಲಿವುಡ್‌ನ ಪ್ರಸಿದ್ಧ ಹಾಡಿಗೆ ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ವೇದಿಕೆಯ ಹಿಂದಿನ ಬ್ಯಾನರ್‌ನಲ್ಲಿ ಶಾಲೆಯ ಹೆಸರು ಸ್ಪಷ್ಟವಾಗಿ ಗೋಚರಿಸುತ್ತದೆ.
ಆಘಾತಕಾರಿ ಅಂಶವೆಂದರೆ ಈ ಕಾರ್ಯಕ್ರಮದಲ್ಲಿ ಹಲವಾರು ಮಕ್ಕಳು ಪ್ರೇಕ್ಷಕರಲ್ಲಿ ಕುಳಿತು ಯುವತಿಯರ ಅಶ್ಲೀಲ ನೃತ್ಯ ಪ್ರದರ್ಶನವನ್ನು ವೀಕ್ಷಿಸುತ್ತಿರುವುದನ್ನು ಸಹ ಕಾಣಬಹುದು. ಅನೇಕ ವಿದ್ಯಾರ್ಥಿಗಳು ಹಾಜರಿದ್ದ ಶಾಲಾ ಸಾಂಸ್ಕೃತಿಕ ಕಾರ್ಯಕ್ರಮದ ಸಮಯದಲ್ಲಿ ಇಂತಹ ಪ್ರದರ್ಶನ ನಡೆದಿರುವುದು ಆಘಾತಕಾರಿಯಾಗಿದೆ.
ವ್ಯಾಪಕ ಆಕ್ರೋಶ
ಇನ್ನು ಶಾಲಾ ಮಕ್ಕಳು ಮತ್ತು ಪೋಷಕರು ಇರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಇಂತಹ "ಅಶ್ಲೀಲ" ಮತ್ತು "ಅಸಹ್ಯಕರ" ನೃತ್ಯ ಪ್ರದರ್ಶನ ಆಯೋಜಿಸಿರುವುದಕ್ಕೆ ನೆಟ್ಟಿಗರು ಶಾಲಾ ಆಡಳಿತ ಮಂಡಳಿಯ ವಿರುದ್ಧ ಕಿಡಿಕಾರಿದ್ದಾರೆ.
ಶಾಲಾ ಮಕ್ಕಳ ಸುತ್ತ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಈ ರೀತಿಯ ನೃತ್ಯವನ್ನು ಏಕೆ ಅನುಮತಿಸಲಾಗಿದೆ ಎಂದು ಹಲವಾರು ಪ್ರಶ್ನಿಸಿದ್ದಾರೆ. ಕಲಿಕೆ, ಶಿಸ್ತು ಮತ್ತು ಉತ್ತಮ ಮೌಲ್ಯಗಳನ್ನು ಉತ್ತೇಜಿಸುವ ಚಟುವಟಿಕೆಗಳ ಮೇಲೆ ಶಾಲೆಗಳು ಗಮನಹರಿಸಬೇಕು ಎಂದು ಕೆಲವರು ಕಿಡಿಕಾರಿದ್ದಾರೆ.
ಇದೇ ಮೊದಲೇನಲ್ಲ..
ಇದೇ ರೀತಿಯ ಮತ್ತೊಂದು ಘಟನೆಯಲ್ಲಿ, ಈ ಹಿಂದೆ ಮಾಡೆಲ್ ಒಬ್ಬರು ದೆಹಲಿಯ ಇಂಡಿಯಾ ಗೇಟ್ ಎದುರು ಟವೆಲ್ ಧರಿಸಿ ನೃತ್ಯ ಮಾಡಿದ್ದಾಗಲೂ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



