Jammu-Kashmir: ಪೂಂಚ್‌ನಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆ, ಸೇನೆಯ JCO ಹುತಾತ್ಮ
ಕೂಡಲೇ ಅವರನ್ನು ತಕ್ಷಣವೇ ಪೋಥಾದಲ್ಲಿರುವ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ವೈದ್ಯಕೀಯ ಪ್ರಯತ್ನಗಳ ಹೊರತಾಗಿಯೂ, JCO ಕರ್ತವ್ಯದಲ್ಲಿದ್ದಾಗಲೇ ಹುತಾತ್ಮರಾಗಿದ್ದಾರೆ

ಜಮ್ಮು-ಕಾಶ್ಮೀರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಶನಿವಾರ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಜ್ಯೂನಿಯರ್ ಕಮಿಷನ್ಡ್ ಆಫೀಸರ್ (JCO) ಹುತಾತ್ಮರಾಗಿದ್ದಾರೆ ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ ತಿಳಿಸಿದೆ.
ಆಪರೇಷನ್ ಶೇರಿ ಕಲಾನ್‌ನ ಭಾಗವಾಗಿ ಪೂಂಚ್‌ನ ಸಾಮಾನ್ಯ ಪ್ರದೇಶದಲ್ಲಿ ಸುದೀರ್ಘ ಕಾರ್ಯಾಚರಣೆಯ ಸಮಯದಲ್ಲಿ ಸವಾಲಿನ ಮತ್ತು ಒರಟಾದ ಭೂಪ್ರದೇಶದಲ್ಲಿ ಮಧ್ಯಾಹ್ನ 2.30 ರ ಸುಮಾರಿಗೆ, ಸುಬೇದಾರ್ ಸಂದೀಪ್ ಕುಮಾರ್ ಢಾಕಾ ಜಾರಿಬಿದಿದ್ದಾರೆ.
ಕೂಡಲೇ ಅವರನ್ನು ತಕ್ಷಣವೇ ಪೋಥಾದಲ್ಲಿರುವ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ವೈದ್ಯಕೀಯ ಪ್ರಯತ್ನಗಳ ಹೊರತಾಗಿಯೂ, JCO ಕರ್ತವ್ಯದಲ್ಲಿದ್ದಾಗಲೇ ಹುತಾತ್ಮರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸೇನೆ ಪೋಸ್ಟ್ ಮಾಡಿದೆ.
ಈ ತೀವ್ರವಾದ ದು:ಖದ ಸಂದರ್ಭದಲ್ಲಿ ಆಗಲಿದ ಯೋಧನ ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತೇವೆ. ಕೊನೆಯ ಉಸಿರಿನವರೆಗೂ ದೇಶಕ್ಕಾಗಿ ಸೇವೆ ಸಲ್ಲಿಸಿದ ಯೋಧನ ಸ್ಮರಣೆಯನ್ನು ಗೌರವಿಸುತ್ತೇವೆ" ಎಂದು ವೈಟ್ ನೈಟ್ ಕಾರ್ಪ್ಸ್ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



