ದೇಶ

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಖರ್ಗೆ; ಅರಾಜಕತೆ ಸೃಷ್ಟಿಸಲು ಪ್ರತಿಪಕ್ಷ ಯತ್ನಿಸುತ್ತಿದೆ ಎಂದ ಸರ್ಕಾರ!

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಮತ್ತು ಸದನದ ನಾಯಕ ಜೆ ಪಿ ನಡ್ಡಾ ಅವರು, ವಿರೋಧ ಪಕ್ಷವು "ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ" ಸರ್ಕಾರದೊಂದಿಗೆ ನಿಲ್ಲುವ ಬದಲು "ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ" ಎಂದು ಹೇಳಿದರು.

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಖರ್ಗೆ; ಅರಾಜಕತೆ ಸೃಷ್ಟಿಸಲು ಪ್ರತಿಪಕ್ಷ ಯತ್ನಿಸುತ್ತಿದೆ ಎಂದ ಸರ್ಕಾರ!
ಮಲ್ಲಿಕಾರ್ಜುನ ಖರ್ಗೆ
Published On :

ನವದೆಹಲಿ: ದೇಶದಲ್ಲಿ ಎಲ್‌ಪಿಜಿ ಕೊರತೆಯ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರವು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಯಲ್ಲಿ ಮಾರಾಟವನ್ನು ತಡೆಯಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಮತ್ತು ಸದನದ ನಾಯಕ ಜೆ ಪಿ ನಡ್ಡಾ ಅವರು, ವಿರೋಧ ಪಕ್ಷವು "ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ" ಸರ್ಕಾರದೊಂದಿಗೆ ನಿಲ್ಲುವ ಬದಲು "ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ" ಎಂದು ಹೇಳಿದರು.

ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕರೂ ಆಗಿರುವ ಖರ್ಗೆ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ದೇಶಾದ್ಯಂತ ಎಲ್‌ಪಿಜಿ ಬಿಕ್ಕಟ್ಟಿನಿಂದ ಜನ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದು ಬಡವರು ಮತ್ತು ದುರ್ಬಲರು, ಮಧ್ಯಮ ವರ್ಗ, ಸಾಮಾನ್ಯ ಮನೆಗಳು, ರೆಸ್ಟೋರೆಂಟ್‌ಗಳು, ಹಾಸ್ಟೆಲ್‌ಗಳು ಮತ್ತು ವಾಣಿಜ್ಯ ಬಳಕೆದಾರರ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಎಂದರು.

ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಉಲ್ಬಣಗೊಂಡಾಗ, ಸರ್ಕಾರವು ಭಾರತೀಯ ನಾಗರಿಕರಿಗೆ ಸಲಹೆ ನೀಡಿತ್ತು ಮತ್ತು ಅಂದಿನಿಂದ, ಇಂಧನ ಪೂರೈಕೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಸರ್ಕಾರಕ್ಕೆ ತಿಳಿದಿತ್ತು. ಆದರೆ ಇದರ ಹೊರತಾಗಿಯೂ, ಯಾವುದೇ ಸಿದ್ಧತೆಗಳನ್ನು ಸರ್ಕಾರ ಮಾಡಿಕೊಂಡಿಲ್ಲ. ಪರಿಣಾಮವಾಗಿ, ದೇಶದ ಅನೇಕ ವಲಯಗಳು ಸಮಸ್ಯೆಗಳನ್ನು ಎದುರಿಸುತ್ತಿವೆ ಎಂದರು.

ಈ ಬಿಕ್ಕಟ್ಟು ಸರ್ಕಾರದ ಕರುಣಾಜನಕ ನಿರ್ವಹಣೆ ಮತ್ತು ದೋಷಪೂರಿತ ವಿದೇಶಾಂಗ ನೀತಿಯನ್ನು ಬಹಿರಂಗಪಡಿಸಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.