ಆನ್ ಲೈನ್ ನಲ್ಲಿ ISIS ಜೊತೆ ಸಂಪರ್ಕ: 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿ ಬಂಧನ
2 ವರ್ಷದ ಬಿಡಿಎಸ್ ವಿದ್ಯಾರ್ಥಿಯಾಗಿರುವ ಈತ, ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳು, ಡಿಸ್ಕಾರ್ಡ್‌ನಂತಹ ಎನ್‌ಕ್ರಿಪ್ಟ್ ಮಾಡಿದ ಅಪ್ಲಿಕೇಶನ್‌ಗಳ ಮೂಲಕ ಐಸಿಸ್ ನಿರ್ವಾಹಕರ ಜೊತೆ ಸಂಪರ್ಕ ಹೊಂದಿದ್ದಾನೆ.

ಲಕ್ನೋ: ಉತ್ತರ ಪ್ರದೇಶದ ಭಯೋತ್ಪಾದನಾ ವಿರೋಧಿ ದಳ ಭಾರಿ ಕಾರ್ಯಾಚರಣೆಯೊಂದನ್ನು ನಡೆಸಿ, ನಿಷೇಧಿತ ಭಯೋತ್ಪಾದಕ ಸಂಘಟನೆ 'ಐಸಿಸ್' ಜೊತೆಗೆ ಸಂಪರ್ಕ ಹೊಂದಿದ್ದ 19 ವರ್ಷದ ದಂತವೈದ್ಯಕೀಯ ವಿದ್ಯಾರ್ಥಿಯನ್ನು ಬಂಧಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಸಹರಾನ್‌ಪುರ ಜಿಲ್ಲೆಯ ನಿವಾಸಿ ಹರಿಶ್ ಅಲಿ ಬಂಧಿತ ಆರೋಪಿ. ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಆನ್‌ಲೈನ್ ಮಾಡ್ಯೂಲ್‌ನೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಮೊರಾದಾಬಾದ್‌ನಲ್ಲಿ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಈತನನ್ನು ಬಂಧಿಸಿದೆ.
ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಸಿಸ್ ಸಂಬಂಧಿತ ಆನ್‌ಲೈನ್ ನೆಟ್‌ವರ್ಕ್‌ಗಳ ಚಟುವಟಿಕೆಗಳ ಕುರಿತು ನಡೆಯುತ್ತಿರುವ ತನಿಖೆಯ ಸಂದರ್ಭದಲ್ಲಿ ಈತನನ್ನು ಅರೆಸ್ಟ್ ಮಾಡಲಾಗಿದೆ. ಎರಡನೇ ವರ್ಷದ ಬಿಡಿಎಸ್ ವಿದ್ಯಾರ್ಥಿಯಾಗಿರುವ ಈತ, ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳು, ಡಿಸ್ಕಾರ್ಡ್‌ನಂತಹ ಎನ್‌ಕ್ರಿಪ್ಟ್ ಮಾಡಿದ ಅಪ್ಲಿಕೇಶನ್‌ಗಳ ಮೂಲಕ ಐಸಿಸ್ ನಿರ್ವಾಹಕರ ಜೊತೆ ಸಂಪರ್ಕ ಹೊಂದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈತ 'ಅಲ್ ಇತ್ತಿಹಾದ್ ಮೀಡಿಯಾ ಫೌಂಡೇಶನ್' ಎಂಬ ಹೆಸರಿನಲ್ಲಿ ಪ್ರತ್ಯೇಕ ಗ್ರೂಪ್ ನಡೆಸುತ್ತಿದ್ದನು. ಇದರ ಮೂಲಕ ಐಸಿಸ್ ಸಿದ್ಧಾಂತಗಳನ್ನು ಪ್ರಚಾರ ಮಾಡುವುದು ಮತ್ತು ಇಸ್ಲಾಮಿಕ್ ಕ್ಯಾಲಿಫೇಟ್ ಸ್ಥಾಪನೆಯ ಕುರಿತು ಉಗ್ರಗಾಮಿ ಸಾಹಿತ್ಯವನ್ನು ಹಂಚಿಕೊಳ್ಳುತ್ತಿದ್ದನು ಎಂಬ ಆರೋಪ ಕೇಳಿಬಂದಿದೆ.
ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್ (VPN) ಬಳಸಿ ತನ್ನ ಗುರುತನ್ನು ಮರೆಮಾಚುತ್ತಿದ್ದ ಹ್ಯಾರಿಸ್, ಭಾರತದಲ್ಲಿ ಸಂಘಟನೆಯನ್ನು ಬಲಪಡಿಸಲು ಮತ್ತು ಸಮಾನ ಮನಸ್ಕ ಯುವಕರನ್ನು ಉಗ್ರಗಾಮಿ ಚಟುವಟಿಕೆಗಳಿಗೆ ಸೆಳೆಯಲು ಪ್ರಯತ್ನಿಸುತ್ತಿದ್ದನು.
ಉತ್ತರ ಪ್ರದೇಶ ಮತ್ತು ದೇಶದ ಇತರ ಭಾಗಗಳಲ್ಲಿ ಕೆಲವರು ಷರಿಯಾ ಆಧಾರಿತ ಖಲೀಫತ್ ವ್ಯವಸ್ಥೆಯನ್ನು ಸ್ಥಾಪಿಸುವ ಗುರಿ ಹೊಂದಿರುವ ಐಸಿಸ್ ಸಿದ್ಧಾಂತವನ್ನು ಪ್ರಚಾರ ಮಾಡಲು ಆನ್‌ಲೈನ್ ಗ್ರೂಪ್‌ಗಳನ್ನು ರಚಿಸುತ್ತಿದ್ದಾರೆ. ಭಾರತದಲ್ಲಿ ಭಯೋತ್ಪಾದಕ ಸಂಘಟನೆಯನ್ನು ಬಲಪಡಿಸಲು ಜನರನ್ನು ನೇಮಿಸಿಕೊಳ್ಳುತ್ತಿದ್ದಾರೆ ಎಂದು ಗುಪ್ತಚರ ಮಾಹಿತಿಗಳು ಎಚ್ಚರಿಸಿವೆ.
ಲಕ್ನೋದ ಎಟಿಎಸ್ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಬಿಎನ್‌ಎಸ್ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಸಮಾನ ಮನಸ್ಕ ವ್ಯಕ್ತಿಗಳನ್ನು ನೇಮಿಸಿಕೊಳ್ಳಲು ಮತ್ತು ಐಸಿಸ್ ಬಗ್ಗೆ ಪ್ರಚಾರ ಮಾಡಲು ಹೆಸರುಗಳನ್ನು ಬದಲಾಯಿಸಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



