ದೇಶ

ಪಶ್ಚಿಮ ಬಂಗಾಳ ಚುನಾವಣೆ: 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ದೀದಿ; ಭುಗಿಲೆದ್ದ ಅಸಮಾಧಾನ

ಮಮತಾ ಬ್ಯಾನರ್ಜಿ ಅವರು ಮಂಗಳವಾರ 294 ವಿಧಾನಸಭಾ ಕ್ಷೇತ್ರಗಳ ಪೈಕಿ 291 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, 74 ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.

ಪಶ್ಚಿಮ ಬಂಗಾಳ ಚುನಾವಣೆ: 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ದೀದಿ; ಭುಗಿಲೆದ್ದ ಅಸಮಾಧಾನ
ಮಮತಾ ಬ್ಯಾನರ್ಜಿ- ಅಭಿಷೇಕ್ ಬ್ಯಾನರ್ಜಿ — online desk
Published On :

ಕೋಲ್ಕತ್ತಾ: ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ.

ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತಾ ಬ್ಯಾನರ್ಜಿ ಮತ್ತು ಬಂಗಾಳದ ಆಡಳಿತ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಮಂಗಳವಾರ 294 ವಿಧಾನಸಭಾ ಕ್ಷೇತ್ರಗಳ ಪೈಕಿ 291 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, 74 ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.

"ಟಿಕೆಟ್ ಸಿಗದವರು ತಪ್ಪಾಗಿ ಅರ್ಥಮಾಡಿಕೊಳ್ಳಬಾರದು. ಚುನಾವಣೆಯ ನಂತರ ಅವರಿಗೆ ಪಕ್ಷದಲ್ಲಿ ಇತರ ಜವಾಬ್ದಾರಿಗಳನ್ನು ನೀಡಲಾಗುವುದು" ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಅಭ್ಯರ್ಥಿಗಳ ಪಟ್ಟಿ ಘೋಷಣೆಯ ನಂತರ ಹೇಳಿದರು. ಆದಾಗ್ಯೂ, ಈ ಶಾಸಕರಲ್ಲಿ ಹಲವಾರು ಜನಕ್ಕೆ ಪಕ್ಷ ತಮಗೆ ದ್ರೋಹ ಮಾಡಿದ ಭಾವನೆ ಇದೆ.

ಜಲ್ಪೈಗುರಿಯ ರಾಜ್‌ಗಂಜ್‌ನಿಂದ ನಾಲ್ಕು ಬಾರಿ ತೃಣಮೂಲ ಕಾಂಗ್ರೆಸ್ ಶಾಸಕರಾಗಿರುವ ಖಗೇಶ್ವರ್ ರಾಯ್ ಅವರು ಟಿಕೆಟ್ ನಿರಾಕರಿಸಿದ ನಂತರ ಪಕ್ಷದ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಉತ್ತರ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ನ ದೀರ್ಘಕಾಲ ಸಂಘಟಕರಾಗಿರುವ ರಾಯ್ ಅವರ ಬದಲಿಗೆ 2018 ರ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತೆ ಸ್ವಪ್ನಾ ಬರ್ಮನ್ ಅವರಿಗೆ ಟಿಕೆಟ್ ನೀಡಲಾಗಿದೆ.

"ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ತೊರೆದು ತೃಣಮೂಲ ಕಾಂಗ್ರೆಸ್ ಸ್ಥಾಪಿಸಿದ ಸಮಯದಿಂದ ನಾನು ಅವರೊಂದಿಗಿದ್ದೇನೆ. ಇಂದು ನಾನು ಹಣ ಬಲದಿಂದ ಸೋಲನುಭವಿಸಿದ್ದೇನೆ. ಯಾರೋ ಹಣ ನೀಡಿರಬೇಕು, ಅದಕ್ಕಾಗಿಯೇ ನನ್ನ ಹೆಸರನ್ನು ಕೈಬಿಡಲಾಗಿದೆ" ಎಂದು ರಾಜೀನಾಮೆ ಘೋಷಿಸಿದ ನಂತರ ರಾಯ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆದರೆ, ಬೇರೆ ರಾಜಕೀಯ ಪಕ್ಷ ಸೇರಬೇಕೆ ಬೇಡವೇ ಎಂದು ಇನ್ನೂ ನಿರ್ಧರಿಸಿಲ್ಲ ಎಂದು ರಾಯ್ ಹೇಳಿದರು. "ನಾನು ಪಕ್ಷಕ್ಕೆ ರಾಜೀನಾಮೆ ಪತ್ರ ಕಳುಹಿಸಿದ್ದೇನೆ. ನಾಯಕತ್ವ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡೋಣ" ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.