ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಒಂಬತ್ತು ಮಂದಿ ಸಜೀವ ದಹನ! Video
ಪಾಲಂನ ರಾಮ್ ಮಾರುಕಟ್ಟೆಯಲ್ಲಿರುವ ಬಟ್ಟೆ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ನೈಋತ್ಯ ದೆಹಲಿಯ ಪಾಲಂ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಒಂಬತ್ತು ಜನ ಸಜೀವ ದಹನವಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ದಳದ ಅಧಿಕಾರಿಗಳ ಪ್ರಕಾರ, ಪಾಲಂನಲ್ಲಿರುವ ಕಟ್ಟಡವೊಂದರ ಮನೆಯಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಕರೆ ಬಂದಿತು. ಬೆಂಕಿಯನ್ನು ನಂದಿಸಲು ಮತ್ತು ಜನರನ್ನು ರಕ್ಷಿಸಲು ಮೂವತ್ತೊಂದು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದವು.
ಪಾಲಂನ ರಾಮ್ ಮಾರುಕಟ್ಟೆಯಲ್ಲಿರುವ ಬಟ್ಟೆ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಮ್ ಚೌಕ್ ಮಾರುಕಟ್ಟೆಯ WZ-124A ನಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೆಲ ಮಹಡಿ ಮತ್ತು ಮೊದಲ ಮಹಡಿಯಲ್ಲಿ ರಾಜೇಂದರ್ ಕಶ್ಯಪ್ ಒಡೆತನದ ಬಟ್ಟೆ ಮತ್ತು ಸೌಂದರ್ಯವರ್ಧಕ ಶೋರೂಮ್ ಇತ್ತು. ಆದರೆ ಅವರ ಕುಟುಂಬ ಎರಡನೇ ಮತ್ತು ಮೂರನೇ ಮಹಡಿಯಲ್ಲಿ ವಾಸಿಸುತ್ತಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.
ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಹತ್ತು ಜನರನ್ನು ರಕ್ಷಿಸಿ ಆಂಬ್ಯುಲೆನ್ಸ್ಗಳ ಮೂಲಕ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಯಿತು. ಆದರೆ ಮಣಿಪಾಲ್ ಆಸ್ಪತ್ರೆಯಲ್ಲಿ, ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ - ಪ್ರವೇಶ್ (35), ಕಮಲ್ (40), ಆಶು (32), ಲಾಡೋ (70), ಹಿಮಾಂಶಿ (22), ಮತ್ತು 12 ವರ್ಷ, ಆರು ವರ್ಷ ಹಾಗೂ ಐದು ವರ್ಷ ವಯಸ್ಸಿನ ಮೂವರು ಅಪ್ರಾಪ್ತ ಬಾಲಕಿಯರು ಮೃತಪಟ್ಟಿದ್ದಾರೆ.
ಐಜಿಐ ಆಸ್ಪತ್ರೆಯಲ್ಲಿ 38 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಆದರೆ 40 ವರ್ಷದ ಪುರುಷ ಮತ್ತು ಎರಡು ವರ್ಷದ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದು, ಶೇ. 25 ರಷ್ಟು ಸುಟ್ಟ ಗಾಯಗಳಾಗಿರುವ ಮತ್ತೊಬ್ಬ ಯುವಕನನ್ನು ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಗ್ನಿಶಾಮಕ ಮತ್ತು ರಕ್ಷಣಾ ಕಾರ್ಯಾಚರಣೆಗಳ ನಂತರ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಲಾಗಿದೆ. ಪರಿಶೀಲನೆಗಾಗಿ ಎಫ್ಎಸ್ಎಲ್ ತಂಡವನ್ನು ಕರೆಯಲಾಗಿದೆ. ಸಂಬಂಧಪಟ್ಟ ಎಲ್ಲಾ ಸಂಸ್ಥೆಗಳು ಮತ್ತು ಸ್ಥಳೀಯ ಪೊಲೀಸರು ಸ್ಥಳದಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಏತನ್ಮಧ್ಯೆ, ಘಟನೆಯ ತನಿಖೆಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಹೇಳಿದ್ದಾರೆ
“ಪಾಲಂನಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಸಂಭವಿಸಿದ ದುರದೃಷ್ಟಕರ ಅಗ್ನಿ ಅವಘಡದ ಬಗ್ಗೆ ತಿಳಿದು ತೀವ್ರ ದುಃಖವಾಯಿತು. ಜಿಲ್ಲಾಡಳಿತ, ದೆಹಲಿ ಅಗ್ನಿಶಾಮಕ ಇಲಾಖೆ ಮತ್ತು ದೆಹಲಿ ಪೊಲೀಸರು ರಕ್ಷಣಾ ಕಾರ್ಯಾಚರಣೆಯನ್ನು ಮುನ್ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ” ಎಂದು ದೆಹಲಿ ಸಿಎಂ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



