ಗಂಗಾ ನದಿಯಲ್ಲಿ ಚಿಕನ್ ಬಿರಿಯಾನಿ ತಿಂದ 14 ಜನ ಜೈಲು ಪಾಲು!
ಕಳೆದ ಮಂಗಳಾರ ಪವಿತ್ರ ಗಂಗಾ ನದಿಯಲ್ಲಿ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ 14 ಜನರನ್ನು ಬಂಧಿಸಿಲಾಗಿತ್ತು.

ವಾರಣಾಸಿ: ಗಂಗಾ ನದಿಯಲ್ಲಿ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಮತ್ತು ಚಿಕನ್ ಬಿರಿಯಾನಿ ತಿಂದಿದ್ದ 14 ಜನರನ್ನು ವಾರಣಾಸಿ ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪ್ರಕರಣದ ವಕೀಲರೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಕಳೆದ ಮಂಗಳಾರ ಪವಿತ್ರ ಗಂಗಾ ನದಿಯಲ್ಲಿ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ 14 ಜನರನ್ನು ಬಂಧಿಸಿಲಾಗಿತ್ತು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶ(ಸೀನಿಯರ್ ವಿಭಾಗ)/ಎಸಿಜೆಎಂ ಅಮಿತ್ ಕುಮಾರ್ ಯಾದವ್ ಅವರು ಗುರುವಾರ ಆರೋಪಿಗಳ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ನಂತರ ಎಲ್ಲಾ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.
ದೂರುದಾರ ರಜತ್ ಜೈಸ್ವಾಲ್ ಪರ ವಕೀಲ ಶಶಾಂಕ್ ಶೇಖರ್ ತ್ರಿಪಾಠಿ ಅವರ ಪ್ರಕಾರ, ಆರೋಪಿಯು ದೋಣಿ ಚಾಲಕನಿಗೆ ಬೆದರಿಕೆ ಹಾಕಿ ಬಲವಂತವಾಗಿ ಕರೆದುಕೊಂಡು ಹೋಗಿ ನದಿಯಲ್ಲಿ ಆತನ ದೋಣಿಯಲ್ಲಿ ಪಾರ್ಟಿ ಮಾಡಿದ್ದಾರೆ.
ಸೋಮವಾರ ಘಟನೆಯ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ 14 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ಅದೇ ದಿನ ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಮುಖ್ಯಸ್ಥ ಜೈಸ್ವಾಲ್ ಅವರು ಲಿಖಿತ ದೂರು ದಾಖಲಿಸಿದ್ದರು.
ದೋಣಿ ಚಾಲಕನ ಹೇಳಿಕೆ ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಉಲ್ಲೇಖಿಸಿ ಪೊಲೀಸರು ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದ್ದರು. ಪರಿಣಾಮವಾಗಿ, ಆರೋಪಿಗಳ ವಿರುದ್ಧ ಅಪಹರಣ ಸೇರಿದಂತೆ ಹಲವಾರು ಹೆಚ್ಚುವರಿ ಆರೋಪಗಳನ್ನು ಸೇರಿಸಲು ಅರ್ಜಿ ಸಲ್ಲಿಸಲಾಯಿತು. ಜೈಸ್ವಾಲ್ ಅವರ ದೂರಿನ ಮೇರೆಗೆ, ಪೂಜಾ ಸ್ಥಳವನ್ನು ಅಪವಿತ್ರಗೊಳಿಸಿದ ಮತ್ತು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



