ಕಾಂಗ್ರೆಸ್-ರಾಹುಲ್ ಗಾಂಧಿ 'BJPಯ ಬಿ-ಟೀಮ್': ಕೇರಳ ಸಿಎಂ ಪಿಣರಾಯಿ ವಿಜಯನ್
ಕಾಂಗ್ರೆಸ್ ತುಷ್ಟೀಕರಣ ರಾಜಕೀಯ ಮಾಡುತ್ತಿದ್ದು, ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಕೋಮುವಾದದಲ್ಲಿ ತೊಡಗಿರುವ ಗುಂಪುಗಳ ಬೆಂಬಲವನ್ನು ಪಡೆಯಲು ಪ್ರಯತ್ನಿಸುತ್ತಿದೆ. CPI(M) ನೇತೃತ್ವದ ಎಲ್ಡಿಎಫ್ ಸರ್ಕಾರ ಯಾವುದೇ ರೀತಿಯ ಸಮುದಾಯವಾದ ರಾಜಕೀಯಕ್ಕೆ ವಿರೋಧವಾಗಿದೆ.

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.
PTIಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಕೇಂದ್ರ ತನಿಖಾ ಸಂಸ್ಥೆಗಳು ದೇಶದ ಇತರ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸುತ್ತಿವೆ, ಆದರೆ ಕೇರಳ ಮುಖ್ಯಮಂತ್ರಿಯನ್ನು ವಿಚಾರಣೆಗೆ ಕರೆದಿಲ್ಲ ಎಂಬ ರಾಹುಲ್ ಗಾಂಧಿಯವರ ಅವರ ಇತ್ತೀಚಿನ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಕಾಂಗ್ರೆಸ್ ಮತ್ತು ಅದರ ನಾಯಕರು ಬಿಜೆಪಿಗೆ ಪರೋಕ್ಷವಾಗಿ ಸಹಕಾರ ನೀಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಬಿ ಟೀಮ್ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ತುಷ್ಟೀಕರಣ ರಾಜಕೀಯ ಮಾಡುತ್ತಿದ್ದು, ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಕೋಮುವಾದದಲ್ಲಿ ತೊಡಗಿರುವ ಗುಂಪುಗಳ ಬೆಂಬಲವನ್ನು ಪಡೆಯಲು ಪ್ರಯತ್ನಿಸುತ್ತಿದೆ. CPI(M) ನೇತೃತ್ವದ ಎಲ್ಡಿಎಫ್ ಸರ್ಕಾರ ಯಾವುದೇ ರೀತಿಯ ಸಮುದಾಯವಾದ ರಾಜಕೀಯಕ್ಕೆ ವಿರೋಧವಾಗಿದ್ದು, ಇಂತಹ ಸಂಘಟನೆಗಳ ಬೆಂಬಲವನ್ನು ಬೇಡುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಇದೇ ವೇಳೆ ಶಬರಿಮಲೆ ಚಿನ್ನ ಕಳ್ಳತನ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಈ ಪ್ರಕರಣದ ತನಿಖೆಯನ್ನು ಕೇರಳ ಹೈಕೋರ್ಟ್ ಮೇಲ್ವಿಚಾರಣೆ ಮಾಡುತ್ತಿದೆ. ತನಿಖೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ನ್ಯಾಯಾಲಯವೇ ಹೇಳಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮಾಡುತ್ತಿರುವ ಆರೋಪಗಳು ಅಸತ್ಯವಾಗಿದ್ದು, ಏಪ್ರಿಲ್ 9ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಮೇಲೆ ಇದರಿಂದ ಯಾವುದೇ ಪರಿಣಾಮ ಇರುವುದಿಲ್ಲ ಎಂದರು.
ಇದಲ್ಲದೆ, ಕೇರಳದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳನ್ನು ತರಲಾಗಿದ್ದು, ರಾಜ್ಯದ ಶಿಕ್ಷಣ ಸಂಸ್ಥೆಗಳನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಹೇಳಿದರು,
ಬಳಿಕ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಕೇಂದ್ರ ಸರ್ಕಾರವು ಕೇರಳದ ವಿರುದ್ಧ ವೈಮನಸ್ಸಿನ ನಿಲುವು ತಾಳುತ್ತಿದೆ ಎಂದು ಆರೋಪಿಸಿದರು,
ಪ್ರಮುಖವಾಗಿ ವಯನಾಡು ಪುನರ್ವಸತಿ ನೆರವು ವಿಷಯದಲ್ಲಿ ಕೇಂದ್ರದಿಂದ ಸಮರ್ಪಕ ಸಹಾಯ ಸಿಕ್ಕಿಲ್ಲ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವಪ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಹಳ ಸಹಾಯ ಮಾಡಿದೆ ಎಂಬ ಹೇಳಿಕೆಯನ್ನು ‘ಅಸಂಬದ್ಧ’ ಎಂದು ತಿರಸ್ಕರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



