ದೇಶ

ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭೆಗೆ ಉಮರ್ ಖಾಲಿದ್‌ ನಾಮನಿರ್ದೇಶನ; ಮುಸ್ಲಿಂ ಸಂಘಟನೆಗಳ ಒತ್ತಾಯ!

ಜೂನ್‌ನಲ್ಲಿ ರಾಜಸ್ಥಾನದಿಂದ ಮೂರು ರಾಜ್ಯಸಭಾ ಸ್ಥಾನಗಳು ತೆರವಾಗಲಿವೆ. ಪ್ರಸ್ತುತ ವಿಧಾನಸಭೆಯ ಸದಸ್ಯ ಬಲದ ಪ್ರಕಾರ, ಬಿಜೆಪಿ ಎರಡು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಪಡೆದುಕೊಳ್ಳಬಹುದು.

ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭೆಗೆ ಉಮರ್ ಖಾಲಿದ್‌ ನಾಮನಿರ್ದೇಶನ; ಮುಸ್ಲಿಂ ಸಂಘಟನೆಗಳ ಒತ್ತಾಯ!
ಉಮರ್ ಖಾಲಿದ್‌
Published On :

ನವದೆಹಲಿ: 2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜೈಲಿನಲ್ಲಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲು ಪರಿಗಣಿಸಬೇಕು ಎಂದು ರಾಜಸ್ಥಾನದ ಕೆಲ ಮುಸ್ಲಿಂ ಸಂಘಟನೆಗಳು ಕಾಂಗ್ರೆಸ್ ಪಕ್ಷವನ್ನು ಒತ್ತಾಯಿಸಿವೆ.

ಜೂನ್‌ನಲ್ಲಿ ರಾಜಸ್ಥಾನದಿಂದ ಮೂರು ರಾಜ್ಯಸಭಾ ಸ್ಥಾನಗಳು ತೆರವಾಗಲಿವೆ. ಪ್ರಸ್ತುತ ವಿಧಾನಸಭೆಯ ಸದಸ್ಯ ಬಲದ ಪ್ರಕಾರ, ಬಿಜೆಪಿ ಎರಡು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಪಡೆದುಕೊಳ್ಳಬಹುದು.

"ಖಾಲಿದ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶಕ ಮಾಡುವುದರಿಂದ ಸಾಂವಿಧಾನಿಕ ಮೌಲ್ಯಗಳು ಮತ್ತು ಅಂತರ್ಗತ ರಾಜಕೀಯಕ್ಕೆ ಬದ್ಧತೆಯ ಸಂದೇಶವನ್ನು ರವಾನಿಸಿದಂತಾಗುತ್ತದೆ ಎಂದು ರಾಜಸ್ಥಾನ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮೊಹ್ಸಿನ್ ರಶೀದ್ ಟೋಂಕ್ ಸೋಮವಾರ ಅಖಿಲ ಭಾರತ ಕಾಂಗ್ರೆಸ್ ಸಮಿತಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

2023ರ ಅಸೆಂಬ್ಲಿ ಚುನಾವಣೆಯ ಚುನಾವಣಾ ಅಂಕಿಅಂಶಗಳನ್ನು ಟೋಂಕ್ ಉಲ್ಲೇಖಿಸಿದ್ದಾರೆ ಮತ್ತು ಮುಸ್ಲಿಂ ಮತದಾರರು ರಾಜ್ಯದಲ್ಲಿ ಕಾಂಗ್ರೆಸ್ ಗೆ ಮತ ನೀಡುವಲ್ಲಿ ಗಮನಾರ್ಹ ಪಾಲನ್ನು ಹೊಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮುಸ್ಲಿಂ ಪ್ರಗತಿಪರ ವೇದಿಕೆ ಅಧ್ಯಕ್ಷ ಅಬ್ದುಲ್ ಸಲಾಂ ಜೋಹರ್ ಮಾತನಾಡಿ, ಪಕ್ಷವು ಪ್ರಾತಿನಿಧ್ಯದ ಮೂಲಕ ಮುಸ್ಲಿಂ ಮತದಾರರ ಚುನಾವಣಾ ಪಾತ್ರವನ್ನು ಗುರುತಿಸಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.