West Asia Conflict: ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ಇಂಧನ, ರಸಗೊಬ್ಬರಗಳು, ರಾಷ್ಟ್ರೀಯ ಭದ್ರತೆ ಮತ್ತು ಭಾರತದಲ್ಲಿನ ಇತರ ಕ್ಷೇತ್ರಗಳ ಮೇಲೆ ಹಾಗೂ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ವಾಸಿಸುವ ತನ್ನ ಪ್ರಜೆಗಳ ಬಗ್ಗೆ ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದರು.

ನವದೆಹಲಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಸರ್ಕಾರ ಬುಧವಾರ ಸರ್ವಪಕ್ಷ ಸಭೆ ಕರೆದಿದೆ ಎಂದು ಮೂಲಗಳು ತಿಳಿಸಿವೆ. ಪಶ್ಚಿಮ ಏಷ್ಯಾ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಮಾಡಿದ ಭಾಷಣದ ನಂತರ ಇದು ಬಂದಿದೆ.
ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾದ ಕಠಿಣ ಜಾಗತಿಕ ಪರಿಸ್ಥಿತಿಗಳು ದೀರ್ಘಕಾಲದವರೆಗೆ ಮುಂದುವರಿಯುವ ಸಾಧ್ಯತೆಯಿದೆ ಮತ್ತು ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ಒಟ್ಟಾಗಿ ನಿಂತಂತೆಯೇ ರಾಷ್ಟ್ರವು ಸಿದ್ಧರಾಗಿ ಮತ್ತು ಒಗ್ಗಟ್ಟಿನಿಂದ ಇರಬೇಕೆಂದು ಎಂದು ಪ್ರಧಾನಿ ಸೋಮವಾರ ಹೇಳಿದ್ದಾರೆ.
ಲೋಕಸಭೆಯಲ್ಲಿ ನೀಡಿದ ಹೇಳಿಕೆಯಲ್ಲಿ, ಇಂಧನ, ರಸಗೊಬ್ಬರಗಳು, ರಾಷ್ಟ್ರೀಯ ಭದ್ರತೆ ಮತ್ತು ಭಾರತದಲ್ಲಿನ ಇತರ ಕ್ಷೇತ್ರಗಳ ಮೇಲೆ ಹಾಗೂ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ವಾಸಿಸುವ ತನ್ನ ಪ್ರಜೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಮೋದಿ, 'ಸಾಮಾನ್ಯ ಕುಟುಂಬಗಳ ಮೇಲೆ ಉಂಟಾಗುವ ತೊಂದರೆಗಳನ್ನು ಸಾಧ್ಯವಾದಷ್ಟು ಕಡಿಮೆ ಮಾಡಲು ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ವಿವರಿಸಿದರು.
ಈ ಬಿಕ್ಕಟ್ಟಿನ ಬಗ್ಗೆ ಭಾರತದ ಸಂಸತ್ತು ಸರ್ವಾನುಮತದಿಂದ ಜಗತ್ತಿಗೆ ಸಂದೇಶ ನೀಡಬೇಕೆಂದು ಒತ್ತಾಯಿಸಿದ ಅವರು, ಮಾನವೀಯತೆ ಮತ್ತು ಶಾಂತಿಗೆ ಭಾರತದ ಅಚಲ ಬದ್ಧತೆಯನ್ನು ಪುನರುಚ್ಚರಿಸಿದರು. ಸಂವಾದ ಮತ್ತು ರಾಜತಾಂತ್ರಿಕತೆಯು ಯುದ್ಧ ನಿಲ್ಲಿಸಲು ಇರುವ ಏಕೈಕ ಮಾರ್ಗವಾಗಿದೆ. ಭಾರತದ ಪ್ರತಿಯೊಂದು ಪ್ರಯತ್ನವು ಉಲ್ಬಣಗೊಳ್ಳುವಿಕೆಯನ್ನು ಕಡಿಮೆ ಮಾಡುವುದು ಮತ್ತು ಯುದ್ಧವನ್ನು ನಿಲ್ಲಿಸುವುದೇ ಆಗಿದೆ ಎಂದು ಹೇಳಿದರು.
ಇರಾನ್ ಮೇಲೆ ನಡೆಯುತ್ತಿರುವ ಅಮೆರಿಕ-ಇಸ್ರೇಲ್ ವಾಯುದಾಳಿಗಳನ್ನು ಖಂಡಿಸದ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿತು. ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಲೋಕಸಭೆಯಲ್ಲಿ ಅವರ ಹೇಳಿಕೆಯನ್ನು ಟೀಕಿಸಿತು.
ತಮ್ಮ ಹೇಳಿಕೆಯಲ್ಲಿ ಪ್ರಧಾನಿ, ಸುಮಾರು ಒಂದು ಕೋಟಿ ಭಾರತೀಯರು ಗಲ್ಫ್ ದೇಶಗಳಲ್ಲಿ ವಾಸಿಸುತ್ತಿದ್ದಾರೆ ಮತ್ತು ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಪಶ್ಚಿಮ ಏಷ್ಯಾ ಭಾರತಕ್ಕೆ ಮುಖ್ಯವಾಗಿದೆ. ಈ ಸಮುದ್ರಗಳಲ್ಲಿ ಸಾಗುವ ವಾಣಿಜ್ಯ ಹಡಗುಗಳಲ್ಲಿ ಹೆಚ್ಚಿನ ಸಂಖ್ಯೆಯ ಭಾರತೀಯ ಸಿಬ್ಬಂದಿ ಕೆಲಸ ಮಾಡುತ್ತಾರೆ. ಈ ವೈವಿಧ್ಯಮಯ ಕಾರಣಗಳಿಂದಾಗಿ, ಭಾರತದ ಕಳವಳಗಳು ಸ್ವಾಭಾವಿಕವಾಗಿ ಹೆಚ್ಚಿವೆ. ಆದ್ದರಿಂದ, ಈ ಬಿಕ್ಕಟ್ಟಿನ ಕುರಿತು ಭಾರತದ ಸಂಸತ್ತಿನಿಂದ ಸರ್ವಾನುಮತದ ಮತ್ತು ಒಗ್ಗಟ್ಟಿನ ಧ್ವನಿ ಜಗತ್ತನ್ನು ತಲುಪುವುದು ಅತ್ಯಗತ್ಯ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



