ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು; ವೈದ್ಯರು ಹೇಳಿದ್ದೇನು?
ಪ್ರಾಥಮಿಕ ಪರೀಕ್ಷೆಯಲ್ಲಿ ಹೊಟ್ಟೆ ಅಥವಾ ಮೂತ್ರನಾಳದ ಸೋಂಕಿನಿಂದ ಬಳಲುತ್ತಿರುವ ಸಾಧ್ಯತೆಯಿದೆ ಎನ್ನಲಾಗಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯವನ್ನು ನಿಗಾವಣೆ ಮಾಡುತ್ತಿದೆ

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಮಂಗಳವಾರ ತಡರಾತ್ರಿ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ 10.22ರ ಸುಮಾರಿಗೆ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕರೆತರಲಾಯಿತು.
ಪ್ರಾಥಮಿಕ ಪರೀಕ್ಷೆಯಲ್ಲಿ ಹೊಟ್ಟೆ ಅಥವಾ ಮೂತ್ರನಾಳದ ಸೋಂಕಿನಿಂದ ಬಳಲುತ್ತಿರುವ ಸಾಧ್ಯತೆಯಿದೆ ಎನ್ನಲಾಗಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯವನ್ನು ನಿಗಾವಣೆ ಮಾಡುತ್ತಿದೆ. ಅಂಟಿಬಯೋಟಿಕ್ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದಲ್ಲಿ ಯಾವುದೇ ಆತಂಕ ಇಲ್ಲ ಎಂದು ಮೂಲಗಳು ತಿಳಿಸಿವೆ.
ಸೋನಿಯಾ ಗಾಂಧಿಯವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರು ವೈದ್ಯಕೀಯ ನಿಗಾವಣೆಯಲ್ಲಿದ್ದು, ಅವರು ಹೊಟ್ಟೆ ಅಥವಾ ಮೂತ್ರನಾಳ ಸೋಂಕಿನಿಂದ ಬಳಲುತ್ತಿದ್ದಾರೆಯೇ ಎಂದು ನಿರ್ಧರಿಸಲು ವೈದ್ಯರು ಹೆಚ್ಚಿನ ತನಿಖೆಗಳನ್ನು ನಡೆಸುತ್ತಿದ್ದಾರೆ.
ವೈದ್ಯರ ತಂಡವು ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಅಂಟಿಬಯೋಟಿಕ್ ಸೇರಿದಂತೆ ಅಗತ್ಯ ಔಷಧಿಗಳನ್ನು ನೀಡಲಾಗಿದೆ ಎಂದು ಸರ್ ಗಂಗಾ ರಾಮ್ ಆಸ್ಪತ್ರೆಯ ಅಧ್ಯಕ್ಷ ಡಾ ಅಜಯ್ ಸ್ವರೂಪ್ ತಿಳಿಸಿದ್ದಾರೆ.
ಬಹುಶ: ಹವಾಮಾನದಲ್ಲಿನ ಇತ್ತೀಚಿನ ಬದಲಾವಣೆಯಿಂದ ಅಸ್ವಸ್ಥರಾಗಿದ್ದಾಗಿ ಸೋನಿಯಾ ಗಾಂಧಿ ಹೇಳಿಕೊಂಡಿದ್ದಾರೆ. ತದನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ವರದಿಗಳನ್ನು ಪರಿಶೀಲಿಸಿದ ನಂತರ ವೈದ್ಯರು ಮುಂದಿನ ಚಿಕಿತ್ಸೆ ಆರಂಭಿಸಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



