ಶ್ರೀನಗರ-ಲೇಹ್ ಹೆದ್ದಾರಿಯ ಝೋಜಿಲಾ ಪಾಸ್ ನಲ್ಲಿ ಭಾರಿ ಹಿಮಪಾತ: ಏಳು ಮಂದಿ ದುರ್ಮರಣ, ಐವರಿಗೆ ಗಾಯ! Video
ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಭಾರಿ ಹಿಮಪಾತದ ಅವಶೇಷಗಳಿಂದ ಸಂತ್ರಸ್ತರನ್ನು ಹೊರತೆಗೆಯಲು ಕಾರ್ಯಾಚರಣೆ ಆರಂಭಿಸಿದ್ದು, ಏಳು ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ-ಲೇಹ್ ಹೆದ್ದಾರಿಯ ಝೋಜಿಲಾ ಪಾಸ್ನಲ್ಲಿ ಶುಕ್ರವಾರ ಭಾರಿ ಹಿಮಪಾತ ಸಂಭವಿಸಿದ್ದು, ಅನೇಕ ಪ್ರಯಾಣಿಕ ವಾಹನಗಳು ಡಿಕ್ಕಿ ಹೊಡೆದುಕೊಂಡ ಪರಿಣಾಮ ಏಳು ಜನರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ.
ಮಧ್ಯಾಹ್ನ 2.45ರ ಸುಮಾರಿಗೆ ಪಾಸ್ನಲ್ಲಿ ಚಲಿಸುತ್ತಿದ್ದ ನಾಲ್ಕು ಪ್ರಯಾಣಿಕರ ವಾಹನಗಳು ಹಿಮಪಾತದಲ್ಲಿ ಸಿಲುಕಿಕೊಂಡಿವೆ. ವಾಹನಗಳು ಹಿಮದ ಅಡಿಯಲ್ಲಿ ಹೂತುಹೋಗಿದ್ದರಿಂದ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಭಾರಿ ಹಿಮಪಾತದ ಅವಶೇಷಗಳಿಂದ ಸಂತ್ರಸ್ತರನ್ನು ಹೊರತೆಗೆಯಲು ಕಾರ್ಯಾಚರಣೆ ಆರಂಭಿಸಿದ್ದು, ಏಳು ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ.
ಗಾಯಗೊಂಡಿದ್ದ ಐವರನ್ನು ದ್ರಾಸ್ನಲ್ಲಿರುವ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಇಬ್ಬರು ವ್ಯಕ್ತಿಗಳು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಅವರು ದ್ರಾಸ್ ಸೈಡ್ ದಾಟಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯ ಮೇಲ್ವಿಚಾರಣೆ ಮಾಡುವಂತೆ ಕಾರ್ಗಿಲ್ ನ ಡೆಪ್ಯುಟಿ ಕಮಿಷನರ್ ಮತ್ತು ಎಸ್ಎಸ್ಪಿ ಅವರಿಗೆ ಸೂಚಿಸಿದ್ದೇನೆ ಎಂದು ಲೆಫ್ಟಿನೆಂಟ್ ಗವರ್ನರ್ ಲಡಾಖ್ ವಿನಯ್ ಕುಮಾರ್ ಸಕ್ಸೇನಾ ಹೇಳಿದ್ದಾರೆ.
ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದು, ವಿಪತ್ತು ಪರಿಹಾರ ಪಡೆಗಳು ಮತ್ತು BRO ಸೇರಿದಂತೆ ಎಲ್ಲಾ ಸರ್ಕಾರಿ ಏಜೆನ್ಸಿಗಳಿಗೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



