ಗ್ರಾಹಕರಿಗೆ ಗುಡ್ ನ್ಯೂಸ್: ಹಾರ್ಮುಜ್ ಮೂಲಕ ಗುಜರಾತ್ ತಲುಪಿದ LPG ಹೊತ್ತ ಮತ್ತೊಂದು ಹಡಗು
ಕುವೈತ್‌ನ ಮಿನಾ ಅಲ್ ಅಹ್ಮದಿ ಬಂದರಿನಿಂದ ಲೋಡ್ ಮಾಡಲಾದ ಎಂಟಿ ಜಗ್ ವಸಂತ್ ಶುಕ್ರವಾರ ರಾತ್ರಿ 8.30ಕ್ಕೆ ಆಗಮಿಸಿದೆ ಎಂದು ವದಿನಾರ್ ಬಂದರಿಗೆ ಆಗಮಿಸಿದೆ.

ಜಾಮ್‌ನಗರ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆ ಸುರಕ್ಷಿತವಾಗಿ ಹಾರ್ಮುಜ್ ಜಲಸಂಧಿಯನ್ನು ದಾಟಿ 47,000 ಮೆಟ್ರಿಕ್ ಟನ್ (MT) ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಹೊತ್ತ ಭಾರತೀಯ ಹಡಗು 'ಜಗ್ ವಸಂತ್' ಗುಜರಾತ್‌ನ ಜಾಮ್‌ನಗರದ ವದಿನಾರ್ ಬಂದರಿಗೆ ಆಗಮಿಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಕುವೈತ್‌ನ ಮಿನಾ ಅಲ್ ಅಹ್ಮದಿ ಬಂದರಿನಿಂದ ಲೋಡ್ ಮಾಡಲಾದ ಎಂಟಿ ಜಗ್ ವಸಂತ್ ಶುಕ್ರವಾರ ರಾತ್ರಿ 8.30ಕ್ಕೆ ಆಗಮಿಸಿದೆ ಎಂದು ವದಿನಾರ್ ಬಂದರಿನ ಒಂದು ಭಾಗವಾಗಿರುವ ದೀನ್‌ದಯಾಳ್ ಬಂದರು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ಹಡಗು ಲಂಗರು ಹಾಕುವ ಸ್ಥಳದಲ್ಲಿ ಹಡಗಿನಿಂದ ಹಡಗಿಗೆ(STS) ವರ್ಗಾವಣೆಗೆ ಇದು ಸಿದ್ಧವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
"230 ಮೀಟರ್ ಉದ್ದದ ಈ ಹಡಗು ಪ್ರಸ್ತುತ 17,600 ಮೆಟ್ರಿಕ್ ಟನ್ ಎಲ್‌ಪಿಜಿಯನ್ನು ಮತ್ತೊಂದು ಹಡಗಿನ ಎಂಟಿ ರೋಸ್ ಗ್ಯಾಸ್‌ಗೆ ವರ್ಗಾಯಿಸುತ್ತಿದೆ. ಈ ಪ್ರಕ್ರಿಯೆಯು ಸುಮಾರು 15 ಗಂಟೆಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ" ಎಂದು ಬಂದರು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹಡಗಿನಲ್ಲಿದ್ದ 14 ಸಿಬ್ಬಂದಿ ಸುರಕ್ಷಿತರಾಗಿದ್ದು, ವೈದ್ಯಕೀಯವಾಗಿ ಸದೃಢರಾಗಿದ್ದಾರೆ ಎಂದು ಕಡಲಾಚೆಯ ಟರ್ಮಿನಲ್ ಅನ್ನು ನಿರ್ವಹಿಸುವ ದೀನದಯಾಳ್ ಬಂದರಿನ ವಕ್ತಾರ ಓಂಪ್ರಕಾಶ್ ದದ್ಲಾನಿ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



