ದೇಶ

ಮಣಿಪುರದಲ್ಲಿ ನಿಷೇಧಿತ ಸಂಘಟನೆಯ ನಾಲ್ವರಿಗೆ ಗುಂಡಿಕ್ಕಿ ಹತ್ಯೆ

ನಿಷೇಧಿತ ಎನ್‌ಎಸ್‌ಸಿಎನ್ ಈಸ್ಟರ್ನ್ ಫ್ಲಾಂಕ್‌ನ ನಾಲ್ವರು ಸದಸ್ಯರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಣಿಪುರದಲ್ಲಿ ನಿಷೇಧಿತ ಸಂಘಟನೆಯ ನಾಲ್ವರಿಗೆ ಗುಂಡಿಕ್ಕಿ ಹತ್ಯೆ
ಮಣಿಪುರ
Published On :

ಮಣಿಪುರ: ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ನಿಷೇಧಿತ ಸಂಘಟನೆಯ ನಾಲ್ವರು ಸದಸ್ಯರಿಗೆ ವಿರೋಧಿ ಗುಂಪಿನ ಸದಸ್ಯರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಟ್ಟದ ಜಿಲ್ಲೆಯ ಹಾಂಗ್‌ಬೈ ಗ್ರಾಮದಲ್ಲಿ ಶನಿವಾರ ರಾತ್ರಿ 9 ಗಂಟೆಗೆ ಈ ಗುಂಡಿನ ದಾಳಿ ನಡೆದಿದ್ದು, ನಿಷೇಧಿತ ಎನ್‌ಎಸ್‌ಸಿಎನ್ ಈಸ್ಟರ್ನ್ ಫ್ಲಾಂಕ್‌ನ ನಾಲ್ವರು ಸದಸ್ಯರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ಭಾನುವಾರ ಬೆಳಗ್ಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಶವಗಳನ್ನು ವಶಪಡಿಸಿಕೊಂಡರು" ಎಂದು ಅವರು ಹೇಳಿದ್ದಾರೆ.

ನಿಷೇಧಿತ ಎನ್‌ಎಸ್‌ಸಿಎನ್ ಈಸ್ಟರ್ನ್ ಫ್ಲಾಂಕ್ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ವಿರೋಧಿ ಗುಂಪಿನ ಸದಸ್ಯರು ತನ್ನ ಆರು ಕಾರ್ಯಕರ್ತರಿದ್ದ ವಾಹನವನ್ನು ತಡೆದು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ ನಾಲ್ವರು ಕಾರ್ಯಕರ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಸ್ಥಳದಿಂದ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ನಿಷೇಧಿತ ಸಂಘಟನೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.