Sex Video ಪ್ರಕರಣ: ಸ್ವಯಂ ಘೋಷಿತ 'ದೇವಮಾನವ' ಅಶೋಕ್ ಪೊಲೀಸ್ ಕಸ್ಟಡಿ ಏಪ್ರಿಲ್ 1 ರವರೆಗೆ ವಿಸ್ತರಣೆ
ಆರೋಪಿ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ನಾಸಿಕ್: ನಾಸಿಕ್ನಲ್ಲಿ ಜ್ಯೋತಿಷ್ಯದ ಹೆಸರಿನಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ವಿಡಿಯೋ ಮಾಡಿ ಜೈಲು ಪಾಲಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯ ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿದೆ.
ಆರೋಪಿ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ವಿಚಾರಣೆಯ ಸಮಯದಲ್ಲಿ, ಪಬ್ಲಿಕ್ ಪ್ರಾಸಿಕ್ಯೂಟರ್ ಶೈಲೇಂದ್ರ ಬಾಗ್ಡೆ ಅವರು ಪ್ರಕರಣದ ತನಿಖೆ ಇನ್ನೂ ಮುಂದುವರೆದಿದ್ದು, ಆರೋಪಿ ಸಹಕರಿಸುತ್ತಿಲ್ಲ. ಹೀಗಾಗಿ ಪೊಲೀಸ್ ಕಸ್ಟಡಿ ಅವಧಿ ವಿಸ್ತರಿಸಬೇಕು ಎಂದು ಮನವಿ ಮಾಡಿದರು. ಪಬ್ಲಿಕ್ ಪ್ರಾಸಿಕ್ಯೂಟರ್ ಮನವಿ ಪುರಸ್ಕರಿಸಿದ ಕೋರ್ಟ್, ಆರೋಪಿಯ ಪೊಲೀಸ್ ಕಸ್ಟಡಿ ಅವಧಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದೆ.
ಈ ಮಧ್ಯೆ, ಅಶೋಕ್ ಖರತ್ ವಿರುದ್ಧದ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ ವಿಶೇಷ ತನಿಖಾ ತಂಡ(ಎಸ್ಐಟಿ), ದೂರವಾಣಿ ಮೂಲಕ 100ಕ್ಕೂ ಹೆಚ್ಚು ಮಹಿಳೆಯರಿಂದ ದೂರುಗಳನ್ನು ಸ್ವೀಕರಿಸಿದೆ ಎಂದು ಪಲೀಸರು ಹೇಳಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಎರಡು ಕೇಸ್ ದಾಖಲಿಸಲಾಗಿದ್ದು, ಇದರೊಂದಿಗೆ, ನಗರದ ಸರ್ಕಾರವಾಡಾ ಪೊಲೀಸ್ ಠಾಣೆಯಲ್ಲಿ ಖರತ್ ವಿರುದ್ಧ ಎಂಟು ಲೈಂಗಿಕ ದೌರ್ಜನ್ಯ ಮತ್ತು ಎರಡು ವಂಚನೆ ಆರೋಪ ಸೇರಿದಂತೆ ಒಟ್ಟು ಹತ್ತು ಎಫ್ಐಆರ್ಗಳು ದಾಖಲಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



