ದೇಶ

ಬಿಹಾರ: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಇಂದು ರಾಜೀನಾಮೆ?

ಚುನಾಯಿತ ಸದಸ್ಯರು ರಾಜ್ಯಸಭೆಗೆ ಆಯ್ಕೆಯಾದ 14 ದಿನಗಳೊಳಗೆ ರಾಜ್ಯ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು ಎಂದು ನಿಯಮವಿದೆ. ಇದರ ಪ್ರಕಾರ ನಿತೀಶ್ ಕುಮಾರ್ ಇಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಬಹುದು.

ಬಿಹಾರ: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಇಂದು ರಾಜೀನಾಮೆ?
ಬಿಹಾರ ಸಿಎಂ ನಿತೀಶ್ ಕುಮಾರ್
Published On :

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ.

ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಮರಳಲು ಸಜ್ಜಾಗಿರುವ ನಿತೀಶ್ ಕುಮಾರ್ ಅವರು ಎಷ್ಟು ದಿನಗಳವರೆಗೆ ಮುಂದುವರೆಯಲಿದ್ದಾರೆ ಎಂಬ ಬಗ್ಗೆ ಅನುಮಾನಗಳು ಮುಂದುವರೆದಿವೆ. ಈ ಮಧ್ಯೆ ಅವರು ಇಂದು ತಮ್ಮ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚುನಾಯಿತ ಸದಸ್ಯರು ರಾಜ್ಯಸಭೆಗೆ ಆಯ್ಕೆಯಾದ 14 ದಿನಗಳೊಳಗೆ ರಾಜ್ಯ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು ಎಂದು ನಿಯಮವಿದೆ. ಇದರ ಪ್ರಕಾರ ನಿತೀಶ್ ಕುಮಾರ್ ಇಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಬಹುದು.

ಅವರು ಮಾರ್ಚ್ 16 ರಂದು ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ ಎಂದು ಮುಖ್ಯಮಂತ್ರಿಯವರ ಆಪ್ತ ಮೂಲಗಳು ತಿಳಿಸಿವೆ. ಆದರೆ, ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ನಿತೀಶ್ ಕುಮಾರ್ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಅವರು ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇಲ್ಲ. ಸಂಸತ್ತಿನಲ್ಲಿ ಯಾವುದಾದರೊಂದ ಸದನದ ಸದಸ್ಯರಾದರೂ ಮುಂದಿನ ಆರು ತಿಂಗಳ ಕಾಲ ಸಿಎಂ ಆಗಿ ಉಳಿಯಬಹುದು ಎಂದು ಕಾನೂನಿನಲ್ಲಿ ಸ್ಪಷ್ಪಪಡಿಸಲಾಗಿದೆ.

ಯಾವಾಗ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ನಿರ್ಧಾರವನ್ನು ನಿತೀಶ್ ಕುಮಾರ್ ಕೈಗೊಳ್ಳಲಿದ್ದಾರೆ ಎಂದು ಅವರ ಆಪ್ತ ಸಚಿವ ಶ್ರವಣ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.