ದೇಶ

ಬಿಹಾರ: ನಳಂದ ದೇವಸ್ಥಾನದಲ್ಲಿ ಕಾಲ್ತುಳಿತ; 9 ಮಹಿಳಾ ಭಕ್ತರು ಸಾವು; 6 ಲಕ್ಷ ರೂ ಪರಿಹಾರ ಘೋಷಣೆ! Video

ಘಟನೆ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ದು:ಖ ವ್ಯಕ್ತಪಡಿಸಿದ್ದಾರೆ. ಮೃತ ಕುಟುಂಬಸ್ಥರಿಗೆ 6 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಬಿಹಾರ: ನಳಂದ ದೇವಸ್ಥಾನದಲ್ಲಿ ಕಾಲ್ತುಳಿತ; 9 ಮಹಿಳಾ ಭಕ್ತರು ಸಾವು; 6 ಲಕ್ಷ ರೂ ಪರಿಹಾರ ಘೋಷಣೆ! Video
ಕಾಲ್ತುಳಿತ ಸಂಭವಿಸಿದ ಸ್ಥಳ
Published On :

ನಳಂದ: ಬಿಹಾರದ ನಳಂದ ಜಿಲ್ಲೆಯ ಶೀತಲ ದೇವಸ್ಥಾನದಲ್ಲಿ ಭಕ್ತರ ವಿಪರೀತ ದಟ್ಟಣೆಯಿಂದ ಉಂಟಾದ ಮಂಗಳವಾರ ಉಂಟಾದ ಕಾಲ್ತುಳಿತದಲ್ಲಿ ಕನಿಷ್ಠ 9 ಮಹಿಳಾ ಭಕ್ತರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ.

ಧಾರ್ಮಿಕ ಸಭೆಯ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಅತಿಯಾದ ಜನಸಂದಣಿ ಮತ್ತು ಕಾಲ್ತುಳಿತದಂತಹ ಪರಿಸ್ಥಿತಿಯಿಂದ 9 ಮಹಿಳೆಯರು ನೆಲಕ್ಕೆ ಬಿದ್ದು ಅಪಚ್ಚಿಯಾಗಿದ್ದಾರೆ. ಸ್ಥಳೀಯ ಆಡಳಿತದಿಂದ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಮಹಾವೀರ ಜಯಂತಿ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. ಇದರಿಂದಾಗಿ ಜನದಟ್ಟಣೆ ಉಂಟಾಗಿದ್ದು, ಬ್ಯಾರಿಕೇಡ್ ಗಳು ಮುರಿದ್ದು, ಒಬ್ಬರ ಮೇಲೆ ಒಬ್ಬರಂತೆ ಭಕ್ತರು ಕೆಳಗೆ ಬಿದ್ದಿದ್ದಾರೆ. ಇದರಿಂದ ಕಾಲ್ತುಳಿತ ಉಂಟಾಗಿದೆ. ಅಲ್ಲಿ ಯಾವುದೇ ಪೊಲೀಸರು ಇರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.

ಘಟನೆ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ದು:ಖ ವ್ಯಕ್ತಪಡಿಸಿದ್ದಾರೆ. ಮೃತ ಕುಟುಂಬಸ್ಥರಿಗೆ 6 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಪರಿಹಾರ ಮೇಲ್ವಿಚಾರಣೆ ನಡೆಸುತ್ತಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.