ಕ್ಷುಲ್ಲಕ ಕಾರಣಕ್ಕೆ ತಂದೆಯೊಂದಿಗೆ ಜಗಳ: ಆಟೋದಲ್ಲಿ ಕುಳಿತಿದ್ದ 4 ವರ್ಷದ ಮಗುವಿನ ಕಾಲಿಡಿದು ರಸ್ತೆಗೆ ಬಡಿದ ಕಿರಾತಕ!
ಹುಡುಗನ ತಂದೆಯೊಂದಿಗಿನ ಜಗಳಕ್ಕೆ ಸೇಡು ತೀರಿಸಿಕೊಳ್ಳಲು ಪವಾರ್ ಬಾಲಕನನ್ನು ನೆಲಕ್ಕೆ ಬಡಿದಿದ್ದಾನೆ. ನಂತರ ಕಬ್ಬಿಣದ ರಾಡ್ನಿಂದ ತಲೆ ಮೇಲೆ ಹಲ್ಲೆ ನಡೆಸಿದ್ದಾನೆ.

ಮುಂಬೈ: ಮಹಾರಾಷ್ಟ್ರದ ಮುಂಬೈಗೆ ಹೊಂದಿಕೊಂಡ ಪ್ರದೇಶವಾದ ಇಲ್ಲಿ ವಸೈನಲ್ಲಿ ಕ್ಷುಲ್ಲಕ ವಿಷಯಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿದೆ. ವ್ಯಕ್ತಿಯೊಬ್ಬ ಮತ್ತೊಬ್ಬ ವ್ಯಕ್ತಿಯೊಂದಿಗೆ ಜಗಳವಾಡಿದ ನಂತರ ಆತನ ನಾಲ್ಕು ವರ್ಷದ ಮಗನನ್ನು ಕಾಲಿಡಿದು ಬಟ್ಟೆ ಹೊಗೆದಂತೆ ನೆಲಕ್ಕೆ ಬಡಿದಿರುವ ಆಘಾತಕಾರಿ ಘಟನೆ ನಡೆದಿದೆ.
ಈ ಕ್ರೂರ ಘಟನೆ ಹೌಸಿಂಗ್ ಸೊಸೈಟಿಯಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಿಡಿಯೋದಲ್ಲಿ ಹಳದಿ ಟೀ ಶರ್ಟ್ ಧರಿಸಿದ ವಿಘ್ನೇಶ್ ಎಂದು ಗುರುತಿಸಲಾದ ಬಾಲಕ ನಿಲ್ಲಿಸಿದ್ದ ಆಟೋರಿಕ್ಷಾದಲ್ಲಿ ಕುಳಿತು ಇತರ ಮಕ್ಕಳೊಂದಿಗೆ ಆಟವಾಡುತ್ತಿರುವುದನ್ನು ಕಾಣಬಹುದು. ಆ ಮಗುವಿನ ತಂದೆಯೊಂದಿಗೆ ಸಣ್ಣ ವಿಷಯಕ್ಕೆ ಜಗಳವಾಡಿದ ಆರೋಪಿ ಸಂದೀಪ್ ಪವಾರ್, ವಿಘ್ನೇಶ್ ಬಳಿಗೆ ನಡೆದು ಅವನ ಕಾಲುಗಳನ್ನು ಹಿಡಿದು ವಾಹನದಿಂದ ಹೊರಗೆಳೆದಿದ್ದಾನೆ.
ಆ ಹುಡುಗನ ತಂದೆಯೊಂದಿಗಿನ ಜಗಳಕ್ಕೆ ಸೇಡು ತೀರಿಸಿಕೊಳ್ಳಲು ನಂತರ ಪವಾರ್ ಬಾಲಕನನ್ನು ನೆಲಕ್ಕೆ ಅಪ್ಪಳಿಸಿದ್ದಾನೆ. ನಂತರ ಕಬ್ಬಿಣದ ರಾಡ್ನಿಂದ ತಲೆ ಮೇಲೆ ಹಲ್ಲೆ ನಡೆಸಿದ್ದಾನೆ. ಮತ್ತೊಮ್ಮೆ ಬಾಲಕನನ್ನು ರಸ್ತೆ ಮೇಲೆ ಎಸೆದಿದ್ದಾನೆ.
ಬಾಲಕನನ್ನು ಮೀರಾ ರಸ್ತೆಯಲ್ಲಿರುವ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸದ್ಯ ಆತನಿಗೆ ತೀವ್ರ ನಿಗಾ ಘಟಕದಲ್ಲಿಟ್ಟು (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ. ಆತನ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಂತರ ಆರೋಪಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯು ಪ್ರದೇಶದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ನಿವಾಸಿಗಳು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



