ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ!
ದಕ್ಷಿಣ 24 ಪರಗಣದಲ್ಲಿರುವ ಮಗ್ರಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರದ 11 ಮತಗಟ್ಟೆಗಳು ಮತ್ತು ಡೈಮಂಡ್ ಹಾರ್ಬರ್ ವಿಧಾನಸಭಾ ಕ್ಷೇತ್ರದ 4 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮೇ 2 ರಂದು ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ ನೀಡಿದೆ.
ದಕ್ಷಿಣ 24 ಪರಗಣದಲ್ಲಿರುವ ಮಗ್ರಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರದ 11 ಮತಗಟ್ಟೆಗಳು ಮತ್ತು ಡೈಮಂಡ್ ಹಾರ್ಬರ್ ವಿಧಾನಸಭಾ ಕ್ಷೇತ್ರದ 4 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಏಪ್ರಿಲ್ 29 ರಂದು ನಡೆದ ಎರಡನೇ ಹಂತದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅನೇಕ ದೂರುಗಳ ಬಂದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಾದ್ಯಂತ 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಭಾರತ ಚುನಾವಣಾ ಆಯೋಗ ಆದೇಶಿಸಿದೆ.
ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ವರದಿ ಆಧಾರದ ಮೇಲೆ ಈ ಆದೇಶ ನೀಡಲಾಗಿದ್ದು, ಮೇ 2 ರಂದು ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ಹೊಸ ಮತದಾನ ನಡೆಯಲಿದೆ.
ದಕ್ಷಿಣ 24 ಪರಗಣದಲ್ಲಿರುವ ಮಗ್ರಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರದ 11 ಮತಗಟ್ಟೆಗಳು ಮತ್ತು ಡೈಮಂಡ್ ಹಾರ್ಬರ್ ವಿಧಾನಸಭಾ ಕ್ಷೇತ್ರದ 4 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶಿಸಿದೆ. ಫಾಲ್ಟಾ ಕ್ಷೇತ್ರದಿಂದ ಅಕ್ರಮಗಳ ಬಗ್ಗೆ ವಿವರವಾದ ವರದಿಗಾಗಿ ಚುನಾವಣಾ ಆಯೋಗ ಕಾಯುತ್ತಿದೆ. ಅಲ್ಲಿಯೂ ಗಮನಾರ್ಹ ಸಂಖ್ಯೆಯ ದೂರುಗಳು ಬಂದಿವೆ.
ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಚುನಾವಣೆ ನಡೆದಿತ್ತು. ಆದರೆ ಪಶ್ಚಿಮ ಬಂಗಾಳದಲ್ಲಿ ಮಾತ್ರ ಮರು ಮತದಾನ ನಡೆಯಲಿದೆ. ಏಪ್ರಿಲ್ 23 ರಂದು ನಡೆದ ಮೊದಲ ಹಂತದ ಮತದಾನದ ನಂತರ ಮರು ಮತದಾನಕ್ಕೆ ಶಿಫಾರಸು ಮಾಡಿರಲಿಲ್ಲ.
ದಕ್ಷಿಣ 24 ಪರಗಣ ಜಿಲ್ಲೆಯ ಎರಡರಿಂದ ಮೂರು ಸ್ಥಳಗಳಲ್ಲಿ ಮರು ಮತದಾನ ಅಗತ್ಯವಾಗಬಹುದು. ಆದರೆ ಅಂತಿಮ ನಿರ್ಧಾರವು ವೀಕ್ಷಕರ ವರದಿಯನ್ನು ಅವಲಂಬಿಸಿರುತ್ತದೆ ಎಂದು ನಿನ್ನೆ ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಹೇಳಿದ್ದರು. ಅದರಂತೆ ಈಗ ಚುನಾವಣಾ ಆಯೋಗ ಮರು ಮತದಾನಕ್ಕೆ ಆದೇಶ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




