ರಾಹುಲ್ ಗಾಂಧಿಗೆ ಅಲಹಾಬಾದ್ ಹೈಕೋರ್ಟ್ ಬಿಗ್ ರಿಲೀಫ್!
ಈ ಆದೇಶ ಪ್ರಶ್ನಿಸಿ ಸಿಮ್ರಾನ್ ಗುಪ್ತಾ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನಂತರ ನ್ಯಾಯಮೂರ್ತಿ ವಿಕ್ರಮ್ ಡಿ ಚೌಹಾಣ್ ಈ ಆದೇಶ ನೀಡಿದ್ದಾರೆ.

ಅಲಹಾಬಾದ್: 2025 ರಲ್ಲಿ ನೀಡಿದ್ದ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸಂಭಾಲ್ ನ್ಯಾಯಾಲಯ ತಿರಸ್ಕರಿಸಿತ್ತು.
ಈ ಆದೇಶ ಪ್ರಶ್ನಿಸಿ ಸಿಮ್ರಾನ್ ಗುಪ್ತಾ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನಂತರ ನ್ಯಾಯಮೂರ್ತಿ ವಿಕ್ರಮ್ ಡಿ ಚೌಹಾಣ್ ಈ ಆದೇಶ ನೀಡಿದ್ದಾರೆ.
2025 ರಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಚೇರಿಯ ಉದ್ಘಾಟನೆಯ ಸಂದರ್ಭದಲ್ಲಿ 'ನಾವು ಈಗ ಬಿಜೆಪಿ, ಆರ್‌ಎಸ್‌ಎಸ್ ಮತ್ತು ಭಾರತ ರಾಷ್ಟ್ರದ ವಿರುದ್ಧವೇ ಹೋರಾಡುತ್ತಿದ್ದೇವೆ' ಎಂದು ರಾಹುಲ್ ಗಾಂಧಿ ಹೇಳಿದ್ದರು ಎಂದು ಅರ್ಜಿದಾರರು ಆರೋಪಿಸಿದ್ದರು.
ಈ ಹೇಳಿಕೆಯು ಸಾರ್ವಜನಿಕ ಭಾವನೆಗಳಿಗೆ ನೋವುಂಟು ಮಾಡಿದೆ. ದೇಶವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಮಾಡಲಾದ ದೇಶದ್ರೋಹ ಮತ್ತು ರಾಷ್ಟ್ರವಿರೋಧಿ ಹೇಳಿಕೆಯಾಗಿದೆ ಎಂದು ಅರ್ಜಿದಾರರು ದೂರಿನಲ್ಲಿ ಉಲ್ಲೇಖಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



