Tamilnadu: ರಾಜಕೀಯ ದ್ವೇಷ; ಟಿವಿಕೆ ಪ್ರಚಾರ ಕಚೇರಿಗೆ ದುಷ್ಕರ್ಮಿಗಳಿಂದ ಬೆಂಕಿ!
ಶ್ರೀರಂಗಂ ಬಳಿಯ ಕಾಮನಾಯಕನ್ ಪಾಳ್ಯಂ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ನಟ ವಿಜಯ್ ನೇತೃತ್ವದ ತಮಿಳುಕ ವೆಟ್ರಿ ಕಳಗಂ (TVK) ಪಕ್ಷದ ಪ್ರಚಾರ ಕಚೇರಿಯನ್ನು ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟುಹಾಕಿದ್ದಾರೆ.

ಶ್ರೀರಂಗಂ: ತಮಿಳುನಾಡು ವಿಧಾನಸಭಾ ಚುನಾವಣೆ ಮುಗಿದಿದ್ದರೂ ರಾಜಕೀಯ ದ್ವೇಷ ಹೊಗೆಯಾಡುತ್ತಲೇ ಇದೆ.
ಶ್ರೀರಂಗಂ ಬಳಿಯ ಕಾಮನಾಯಕನ್ ಪಾಳ್ಯಂ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ನಟ ವಿಜಯ್ ನೇತೃತ್ವದ ತಮಿಳುಕ ವೆಟ್ರಿ ಕಳಗಂ (TVK) ಪಕ್ಷದ ಪ್ರಚಾರ ಕಚೇರಿಯನ್ನು ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟುಹಾಕಿದ್ದಾರೆ.
ಶ್ರೀರಂಗಂ ಕ್ಷೇತ್ರದ ಪಕ್ಷದ ಚುನಾವಣಾ ಕಚೇರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕಟ್ಟಡದ ಪ್ರವೇಶದ್ವಾರದಲ್ಲಿ ನೆರಳು ನೀಡುವ ಹುಲ್ಲಿನ ಛಾವಣಿಗೆ ಬೆಂಕಿ ತಗುಲಿದೆ. ಹೆಚ್ಚಿನ ಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಏಪ್ರಿಲ್ 23 ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮೇ 4 ರಂದು ನಡೆಯಲಿದೆ. ಇದರ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ.
ಸಾಮಾಜಿಕ ಮಾಧ್ಯಮದಲ್ಲಿ, ಇಬ್ಬರು ಅಪರಿಚಿತ ವ್ಯಕ್ತಿಗಳು ಮೋಟಾರ್ ಸೈಕಲ್‌ನಲ್ಲಿ ಪರಾರಿಯಾಗುತ್ತಿರುವ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ. ಇವರೇ ಅಪರಾಧಿಗಳು ಎನ್ನಲಾಗುತ್ತಿದೆ. ಆದಾಗ್ಯೂ, ವೀಡಿಯೊ ದೃಶ್ಯಾವಳಿಯನ್ನು ಇನ್ನೂ ಪರಿಶೀಲಿಸಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಿವಿಕೆ ನೀಡಿದ ದೂರಿನ ಆಧಾರದ ಮೇಲೆ, ಪೆಟ್ಟೈವೈತಲೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



