ಪಶ್ಚಿಮ ಬಂಗಾಳ ಮತ ಎಣಿಕೆಗೆ ಕೇಂದ್ರ ಸಿಬ್ಬಂದಿ ನಿಯೋಜನೆ: EC ಕ್ರಮ ಮಾನ್ಯ ಎಂದ ಸುಪ್ರೀಂ ಕೋರ್ಟ್; TMCಗೆ ಹಿನ್ನಡೆ
ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಚುನಾವಣಾ ಆಯೋಗದ ಮಾರ್ಗಸೂಚಿಗಳು ನಿಯಮಗಳಿಗೆ ವಿರುದ್ಧವಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಮತ ಎಣಿಕೆ ಸಿಬ್ಬಂದಿ ನಿಯೋಜನೆ ಕುರಿತು ಉದ್ಭವಿಸಿದ್ದ ವಿವಾದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಚುನಾವಣಾ ಆಯೋಗದ ಮಾರ್ಗಸೂಚಿಗಳು ನಿಯಮಗಳಿಗೆ ವಿರುದ್ಧವಾಗಿಲ್ಲ ಎಂದು ಸ್ಪಷ್ಟಪಡಿಸಿದೆ.
ಮತ ಎಣಿಕೆಗಾಗಿ ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ವಲಯದ (PSU) ಸಿಬ್ಬಂದಿಯನ್ನು ನಿಯೋಜಿಸುವ ಕ್ರಮ ಸರಿಯಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ನ್ಯಾಯಮೂರ್ತಿಗಳಾದ ಪಿ. ಎಸ್. ನರಸಿಂಹ ಮತ್ತು ಜಾಯ್ಮಲ್ಯ ಬಾಗ್ಚಿ ಅವರಿದ್ದ ಪೀಠ, ರಾಜ್ಯ ಸರ್ಕಾರಿ ಉದ್ಯೋಗಿಯಾಗಿರುವ ರಿಟರ್ನಿಂಗ್ ಅಧಿಕಾರಿಗೆ ಎಣಿಕೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಅಧಿಕಾರವಿದೆ. ಕೇಂದ್ರ ಸರ್ಕಾರಿ ಸಿಬ್ಬಂದಿಯ ಪಾತ್ರದ ಬಗ್ಗೆ ಟಿಎಂಸಿಯ ಆತಂಕಗಳು ತಪ್ಪಾಗಿವೆ ಎಂದು ತಿಳಿಸಿದೆ.
ಮತ ಎಣಿಕೆ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿರುತ್ತಾರೆ ಎಂಬುದರಿಂದ ಪಾರದರ್ಶಕತೆ ಕಾಪಾಡಲು ಹೆಚ್ಚುವರಿ ಮೇಲ್ವಿಚಾರಣೆಯೂ ಇರುತ್ತದೆ. ಎಲ್ಲ ಸಿಬ್ಬಂದಿಯೂ ಸರ್ಕಾರದ ಉದ್ಯೋಗಿಗಳೇ ಆಗಿರುವುದರಿಂದ ಯಾವುದೇ ಪಕ್ಷಪಾತದ ಆತಂಕ ಬೇಡ ಎಂದು ಹೇಳಿದೆ.
ಟಿಎಂಸಿ ಪರ ವಕೀಲ ಕಪಿಲ್ ಸಿಬಲ್ ಅವರು ವಾದ ಮಂಡಿಸಿ, ರಾಜ್ಯ ಸರ್ಕಾರದ ಸಿಬ್ಬಂದಿಗೆ ಅವಕಾಶ ನೀಡಿಲ್ಲ ಮತ್ತು ನಿರ್ಧಾರದ ಬಗ್ಗೆ ತಡವಾಗಿ ಮಾಹಿತಿ ನೀಡಿದರು ವಾದಿಸಿದರು. ಆದರೆ ಚುನಾವಣಾ ಆಯೋಗದ ಪರ ವಕೀಲ ಡಿ.ಡಿ ಎಸ್ ನಾಯ್ಡು, ಅವರು, ಪ್ರಕ್ರಿಯೆ ನ್ಯಾಯಸಮ್ಮತವಾಗಿದ್ದು ನಿಯಮಾನುಸಾರವೇ ನಡೆಯುತ್ತಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಈ ಹಿಂದೆ ಕೋಲ್ಕತ್ತಾ ಹೈಕೋರ್ಟ್ ಕೂಡ ಟಿಎಂಸಿ ಅರ್ಜಿಯನ್ನು ತಿರಸ್ಕರಿಸಿ, ಚುನಾವಣಾ ಆಯೋಗಕ್ಕೆ ಸಿಬ್ಬಂದಿ ಆಯ್ಕೆ ಮಾಡುವ ಪೂರ್ಣಾಧಿಕಾರವಿದೆ ಎಂದು ಹೇಳಿತ್ತು.
ಇದೀಗ ಸುಪ್ರೀಂ ಕೋರ್ಟ್ ಕೂಡ ಇದೇ ನಿಲುವನ್ನು ವ್ಯಕ್ತಪಡಿಸಿದೆ, ಈ ಹಿನ್ನೆಲೆಯಲ್ಲಿ ಮೇ 4ರಂದು ನಡೆಯಲಿರುವ ಮತ ಎಣಿಕೆ ಪ್ರಕ್ರಿಯೆಯು ಚುನಾವಣಾ ಆಯೋಗದ ಮಾರ್ಗಸೂಚಿಗಳು ಮುಂದುವರಿಯಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



