Kerala Election: ನಾಳೆ ಮತ ಎಣಿಕೆ; 1 ಕೋಟಿ ರೂ ಬೆಟ್ಟಿಂಗ್ ಗೆ ಬಿಜೆಪಿ ನಾಯಕ ಮುಂದು!
ಕೇರಳದ ಪೂಂಜಾರ್ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪಿ.ಸಿ. ಜಾರ್ಜ್, ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವುದಾಗಿ ಭಾನುವಾರ ಹೇಳಿದ್ದು, ತನ್ನ ಮಾತಿನಂತೆ 1 ಕೋಟಿ ರೂ. ಬೆಟ್ಟಿಂಗ್ ಕಟ್ಟುವುದಾಗಿ ಹೇಳಿದ್ದಾರೆ.

ಕೇರಳ: ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ಮತ ಎಣಿಕೆ ನಾಳೆ ನಡೆಯಲಿದ್ದು, ಫಲಿತಾಂಶದತ್ತ ಜನರ ಚಿತ್ತ ನೆಟ್ಟಿದೆ. ಈ ಮಧ್ಯೆ ಮತ ಎಣಿಕೆಗೂ ಮುನ್ನಾ ಬೆಟ್ಟಿಂಗ್ ಭರಾಟೆಯೂ ಜೋರಾಗಿ ನಡೆಯುತ್ತಿದೆ. ಕೇರಳದ ಹಿರಿಯ ರಾಜಕಾರಣಿಯೊಬ್ಬರು ಚುನಾವಣೆಯಲ್ಲಿ ತಾನು ಗೆಲ್ಲುವುದಾಗಿ 1 ಕೋಟಿ ರೂ. ಬೆಟ್ಟಿಂಗ್ ಕಟ್ಟುವುದಾಗಿ ಹೇಳಿದ್ದಾರೆ.
ಹೌದು. ಕೇರಳದ ಪೂಂಜಾರ್ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪಿ.ಸಿ. ಜಾರ್ಜ್, ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವುದಾಗಿ ಭಾನುವಾರ ಹೇಳಿದ್ದು, ತನ್ನ ಮಾತಿಗೆ ತಕ್ಕಂತೆ 1 ಕೋಟಿ ರೂ. ಬೆಟ್ಟಿಂಗ್ ಕಟ್ಟುವುದಾಗಿ ಹೇಳಿದ್ದಾರೆ.
ಚುನಾವಣೆಯಲ್ಲಿ ಭಾರಿ ಬಹುಮತದಿಂದ ಗೆಲ್ಲುತ್ತೇನೆ. ಇದರಲ್ಲಿ ಯಾರಿಗಾದರೂ ಯಾವುದೇ ಸಂದೇಹವಿದ್ದರೆ, ಮುಂದೆ ಬಂದು 1 ಕೋಟಿ ರೂ. ಬೆಟ್ಟಿಂಗ್ ಕಟ್ಟಬಹುದು ಎಂದರು.
ನೆರೆಯ ಪಾಲಾ ಕ್ಷೇತ್ರದಲ್ಲಿ ತಮ್ಮ ಮಗ ಶೋನ್ ಜಾರ್ಜ್ ಗೆಲುವಿನ ಭವಿಷ್ಯ ನುಡಿದ ಜಾರ್ಜ್, ಈ ಬಾರಿಯ ಚುನಾವೆಯಲ್ಲಿ ಇಬ್ಬರು ಗೆದ್ದು ತಂದೆ-ಮಗ ಜೋಡಿ ಒಟ್ಟಾಗಿ ಸದನ ಪ್ರವೇಶಿಸಲಿದೆ ಎಂದು ಹೇಳಿದರು.
ರಾಜೀವ್ ಚಂದ್ರಶೇಖರ್ ನೇತೃತ್ವದಲ್ಲಿ ಕೇರಳದಲ್ಲಿ ಬಿಜೆಪಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದೆ. ರಾಜ್ಯದಲ್ಲಿ ಅತಂತ್ರ ವಿಧಾನಸಭೆ ರಚನೆಯಾಗಲಿದ್ದು, ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವುದಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಜಾರ್ಜ್ ಅವರ ಪ್ರಕಾರ, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ, ಆದರೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ಕೂಡಾ ಅಂತಹ ಕಳಪೆ ಸಾಧನೆ ಮಾಡಲ್ಲ. ರಾಜ್ಯದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸುಮಾರು 11 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಅವರು ಭವಿಷ್ಯ ನುಡಿದರು. 140 ಸದಸ್ಯರ ಕೇರಳ ವಿಧಾನಸಭೆಗೆ ಏಪ್ರಿಲ್ 9 ರಂದು ಮತದಾನ ನಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



