Tamilnadu: ಆತಂತ್ರ ಫಲಿತಾಂಶ ಸಾಧ್ಯತೆ; TVK ಜೊತೆ ಮೈತ್ರಿಗೆ ಕಾಂಗ್ರೆಸ್ ಗೆ ವಿಜಯ್ ತಂದೆ ಆಹ್ವಾನ?
ಸರ್ಕಾರ ರಚನೆಗೆ ಅಗತ್ಯವಾದಷ್ಟು ಬಹುಮತ ದೊರೆಯುವ ಸಾಧ್ಯತೆ ಕಡಿಮೆ ಇದೆ. ಹೀಗಾಗಿ ವಿಟಿಕೆ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವಂತೆ ವಿಜಯ್ ಅವರ ತಂದೆ ಆಹ್ವಾನ ನೀಡಿದ್ದಾರೆ.

ಚೆನ್ನೈ: ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ಹಾಗೂ ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ( ಟಿವಿಕೆ) ಕಮಲ್ ಮಾಡಿದ್ದು, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಆದಾಗ್ಯೂ, ಸರ್ಕಾರ ರಚನೆಗೆ ಅಗತ್ಯವಾದಷ್ಟು ಬಹುಮತ ದೊರೆಯುವ ಸಾಧ್ಯತೆ ಕಡಿಮೆ ಇದೆ. ಹೀಗಾಗಿ ವಿಟಿಕೆ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವಂತೆ ವಿಜಯ್ ಅವರ ತಂದೆ ಆಹ್ವಾನ ನೀಡಿದ್ದಾರೆ.
234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಗೆ ಸರ್ಕಾರ ರಚಿಸಲು 117 ಮ್ಯಾಜಿಕ್ ನಂಬರ್ ಆಗಿದೆ. ಆದರೆ ಟಿವಿಕೆ ಪಕ್ಷ ಸುಮಾರು 111 ಸ್ಥಾನಗಳನ್ನು ಗಳಿಸಿರುವುದರಿಂದ ಸರ್ಕಾರ ರಚಿಸಲು ಮೈತ್ರಿ ಪಕ್ಷಗಳ ಅಗತ್ಯವಿದೆ.
ಹೀಗಾಗಿ ಟಿವಿಕೆ ಜೊತೆ ಸೇರಿ ಸರ್ಕಾರ ರಚನೆಗೆ ಅಗತ್ಯ ಬೆಂಬಲ ನೀಡುವಂತೆ ವಿಜಯ್ ಅವರ ತಂದೆ ಎಸ್ ಎ ಚಂದ್ರಶೇಖರ್ ಮುಕ್ತ ಆಹ್ವಾನವನ್ನು ನೀಡಿದ್ದಾರೆ. ಅಗತ್ಯ ಸಂಖ್ಯೆಗಳನ್ನು ಪಡೆಯಲು ಟಿವಿಕೆ ಕಾಂಗ್ರೆಸ್ನೊಂದಿಗೆ ಅಧಿಕಾರವನ್ನು ಹಂಚಿಕೊಳ್ಳಲು ಸಿದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಈ ಹಿಂದೆ ಇತರ ಪಕ್ಷಗಳನ್ನು ಬೆಂಬಲಿಸುವ ಮೂಲಕ ತನ್ನ ಪ್ರಭಾವವನ್ನು ಕಳೆದುಕೊಂಡಿದೆ. ಈಗ ಈ ಹೊಸ ಮೈತ್ರಿ ಮೂಲಕ ಅಧಿಕಾರವನ್ನು ಮರಳಿ ಪಡೆಯುವ ಅವಕಾಶವನ್ನು ಹೊಂದಿದೆ ಎಂದು ಅವರು ಹೇಳಿರುವುದಾಗಿ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



