ದೇಶ

Assembly Elections 2026: ತಮಿಳುನಾಡಿನಲ್ಲಿ ಟಿವಿಕೆ ಶಾಕ್; ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸ್ವೀಪ್; ಕೇರಳದಲ್ಲಿ UDF ಗೆಲುವು!

ತಮಿಳುನಾಡಿನಲ್ಲಿ, ನಟ-ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) 100 ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುವ ಮೂಲಕ ಆಘಾತಕಾರಿ ಫಲಿತಾಂಶವನ್ನು ನೀಡಿದೆ.

Assembly Elections 2026: ತಮಿಳುನಾಡಿನಲ್ಲಿ ಟಿವಿಕೆ ಶಾಕ್; ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸ್ವೀಪ್; ಕೇರಳದಲ್ಲಿ UDF ಗೆಲುವು!
ಅಭಿಮಾನಿಗಳ ಸಂಭ್ರಮದ ಚಿತ್ರ
Published On :

ನವದೆಹಲಿ: ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಗಿಯುತ್ತಿದ್ದಂತೆ ಹೊರಬಂದ ಟ್ರೆಂಡಿಂಗ್ ಶಾಕಿಂಗ್ ಫಲಿತಾಂಶ ತೋರಿಸಿದೆ.

ಚುನಾವಣಾ ಆಯೋಗದ ವಿವಾದಾತ್ಮಕ ವಿಶೇಷ ತೀವ್ರ ಪರಿಷ್ಕರಣೆ (SIR) ನೆರಳಿನಲ್ಲಿ ವಿಧಾನಸಭಾ ಚುನಾವಣೆ ನಡೆದ ಪಶ್ಚಿಮ ಬಂಗಾಳದಲ್ಲಿ, ಬಿಜೆಪಿ ಸುಮಾರು 200 ಸ್ಥಾನಗಳೊಂದಿಗೆ ಐತಿಹಾಸಿಕ ಗೆಲುವು ಸಾಧಿಸಿದೆ. 2021 ರ ಚುನಾವಣೆಯಲ್ಲಿ 294 ಸ್ಥಾನಗಳ ಪೈಕಿ 215 ಸ್ಥಾನಗಳನ್ನು ಗೆದಿದ್ದ ಆಡಳಿತಾರೂಢ ಟಿಎಂಸಿ ಕೇವಲ 88 ಸ್ಥಾನಗಳಿಗೆ ಕುಸಿದಿದೆ.

ತಮಿಳುನಾಡಿನಲ್ಲಿ, ನಟ-ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) 100 ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುವ ಮೂಲಕ ಆಘಾತಕಾರಿ ಫಲಿತಾಂಶವನ್ನು ನೀಡಿದೆ. ತಮಿಳುನಾಡಿನಲ್ಲಿ ಯಾವಾಗಲೂ ಡಿಎಂಕೆ ಹಾಗೂ ಎಐಎಡಿಎಂಕೆಯೊಂದಿಗೆ ಪೈಪೋಟಿ ಇರುತಿತ್ತು.

ಡಿಎಂಕೆ ನಾಯಕ, ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಭದ್ರಕೋಟೆ ಕೊಳತ್ತೂರಿನಲ್ಲಿ ಸೋತಿದ್ದಾರೆ. ಆದರೆ ಪಕ್ಷವು ಕೇವಲ ಮೂರು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, 55 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಪೆರಂಬೂರು ಮತ್ತು ತಿರುಚ್ಚಿ ಪೂರ್ವ ಎರಡೂ ಕ್ಷೇತ್ರಗಳಲ್ಲಿ ವಿಜಯ್ ಮುಂದಿದ್ದರೆ, ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ಎಡಪ್ಪಾಡಿಯಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಅಸ್ಸಾಂನಲ್ಲಿ, ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಆರು ಸ್ಥಾನಗಳನ್ನು ಗೆದ್ದು 94 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರವನ್ನು ಉಳಿಸಿಕೊಂಡಿದೆ. ಬಿಜೆಪಿ ಐದು ಸ್ಥಾನಗಳಲ್ಲಿ ಗೆದ್ದಿದ್ದು, 76 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆದರೆ ಅದರ ಮಿತ್ರಪಕ್ಷಗಳಾದ ಅಸ್ಸಾಂ ಗಣ ಪರಿಷತ್ (ಎಜಿಪಿ) ಮತ್ತು ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (BPF) 18 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಕಾಂಗ್ರೆಸ್ 20 ಸ್ಥಾನಗಳಲ್ಲಿ ಮತ್ತು ಅದರ ಮಿತ್ರಪಕ್ಷ ರೈಜೋರ್ ದಳ ಒಂದರಲ್ಲಿ ಮುನ್ನಡೆ ಸಾಧಿಸಿದ್ದರೆ, ಎಐಯುಡಿಎಫ್ (AIUDF) ಎರಡು ಸ್ಥಾನಗಳಲ್ಲಿ ಮುಂದಿದೆ.

ಕೇರಳದಲ್ಲಿ ಸತತ ಎರಡು ವರ್ಷಗಳ ಕಾಲ ಅಧಿಕಾರದಿಂದ ಹೊರಗುಳಿದಿದ್ದ UDF ಮತ್ತೆ ಕಂಬ್ಯಾಕ್ ಮಾಡಿದೆ. ಹಿಂದಿನ ವಿಧಾನಸಭಾ ಚುನಾವಣೆಗಳಲ್ಲಿ 41 ಸ್ಥಾನಗಳನ್ನು ಗೆದಿದ್ದ ಯುಡಿಎಫ್ ಈ ಬಾರಿ 100 ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಿದೆ. ಹಲವಾರು ಸಚಿವರು ತಮ್ಮ ಸ್ಥಾನಗಳನ್ನು ಕಳೆದುಕೊಂಡಿದ್ದು, ಸಿಪಿಐ(ಎಂ) ತನ್ನ ಸಾಂಪ್ರದಾಯಿಕ ಭದ್ರಕೋಟೆಗಳಲ್ಲಿ ಸೋತಿದ್ದರಿಂದ ಎಲ್‌ಡಿಎಫ್ ಪ್ರಮುಖ ಹಿನ್ನಡೆಯನ್ನು ಅನುಭವಿಸಿತು. ಈ ಮಧ್ಯೆ ಬಿಜೆಪಿ ಕೇರಳದಲ್ಲಿ ತನ್ನ ಖಾತೆಯನ್ನು ತೆರೆದಿದ್ದು,, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.