ಪ್ರತಿಯೊಂದು ಮತವೂ ಅತ್ಯಮೂಲ್ಯ: ಒಂದೇ ಒಂದು ವೋಟಿನಿಂದ DMK ಸಚಿವನನ್ನು ಸೋಲಿಸಿದ TVK ಅಭ್ಯರ್ಥಿ!
ಮತ ಎಣಿಕೆಯ ಆರಂಭದಿಂದಲೂ ಪೆರಿಯಕರುಪ್ಪನ್ ಮತ್ತು ಸೀನಿವಾಸ ಸೇತುಪತಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಪ್ರತಿ ಸುತ್ತಿನಲ್ಲೂ ಮುನ್ನಡೆಯು ಕ್ಷಣಕ್ಷಣಕ್ಕೂ ಬದಲಾಗುತ್ತಿತ್ತು. ಅಂತಿಮ ಸುತ್ತಿನ ಎಣಿಕೆ ಮುಗಿದಾಗ ಇಬ್ಬರ ನಡುವಿನ ವ್ಯತ್ಯಾಸ ಕೇವಲ ಒಂದು ಮತವಾಗಿತ್ತು.

ಚೆನ್ನೈ: ತಮಿಳುನಾಡು ಚುನಾವಣೆಯಲ್ಲಿ ತಿರುಪ್ಪತ್ತೂರು ವಿಧಾನಸಭಾ ಕ್ಷೇತ್ರದ ಡಿಎಂಕೆಯ ಹಿರಿಯ ನಾಯಕ, ರಾಜ್ಯ ಸಹಕಾರ ಸಚಿವ ಕೆ.ಆರ್. ಪೆರಿಯಕರುಪ್ಪನ್ ಒಂದೇ ಒಂದು ಮತದಿಂದ ಸೋತಿದ್ದಾರೆ.
ಚುನಾವಣಾ ಆಯೋಗದ ಮಾಹಿತಿಯ ಪ್ರಕಾರ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸೀನಿವಾಸ ಸೇತುಪತಿ ಆರ್ 83,375 ಮತಗಳಿಂದ ಗೆಲುವು ಸಾಧಿಸಿದರೆ, ಪೆರಿಯಕರುಪ್ಪನ್ 83,374 ಮತಗಳೊಂದಿಗೆ ಪರಾಭವಗೊಂಡಿದ್ದಾರೆ.
ಮತ ಎಣಿಕೆಯ ಆರಂಭದಿಂದಲೂ ಪೆರಿಯಕರುಪ್ಪನ್ ಮತ್ತು ಸೀನಿವಾಸ ಸೇತುಪತಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಪ್ರತಿ ಸುತ್ತಿನಲ್ಲೂ ಮುನ್ನಡೆಯು ಕ್ಷಣಕ್ಷಣಕ್ಕೂ ಬದಲಾಗುತ್ತಿತ್ತು. ಅಂತಿಮ ಸುತ್ತಿನ ಎಣಿಕೆ ಮುಗಿದಾಗ ಇಬ್ಬರ ನಡುವಿನ ವ್ಯತ್ಯಾಸ ಕೇವಲ ಒಂದು ಮತವಾಗಿತ್ತು.
ಮರು ಎಣಿಕೆಯ ನಂತರವೂ ಫಲಿತಾಂಶದಲ್ಲಿ ಯಾವುದೇ ಬದಲಾವಣೆಯಾಗದ ಕಾರಣ, ಸೀನಿವಾಸ ಸೇತುಪತಿ ಅವರನ್ನು ವಿಜೇತರೆಂದು ಘೋಷಿಸಲಾಯಿತು. ಹಾಲಿ ಸಚಿವರ ಸೋಲು ನಟ ವಿಜಯ್ ಅವರ ಟಿವಿಕೆ ಪಕ್ಷವು ಐತಿಹಾಸಿಕ ಚೊಚ್ಚಲ ಚುನಾವಣೆಯಲ್ಲಿ 108 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂಬುದನ್ನು ಎತ್ತಿ ತೋರಿಸುತ್ತದೆ. ಹೊಸ ರಾಜಕೀಯ ಸಮೀಕರಣಗಳಿಗೆ ನಾಂದಿ ಹಾಡಿದೆ.
ಬಿಜೆಪಿಯ ಕೆ.ಸಿ. ತಿರುಮಾರನ್ 29,054 ಮತಗಳೊಂದಿಗೆ ಕ್ಷೇತ್ರದಲ್ಲಿ ಮೂರನೇ ಸ್ಥಾನ ಪಡೆದರು. ತಿರುಪ್ಪತ್ತೂರಿನ ಫಲಿತಾಂಶವು ಭಾರತದ ಚುನಾವಣಾ ಇತಿಹಾಸದಲ್ಲಿ ಅತ್ಯಂತ ಹತ್ತಿರದ ಫಲಿತಾಂಶಗಳಲ್ಲಿ ಒಂದಾಗಿದ್ದು, ಪ್ರತಿಯೊಂದು ಮತಗಳ ಮೌಲ್ಯವನ್ನು ತೋರಿಸುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



