ಜಲ ಜೀವನ್ ಮಿಷನ್ ಹಗರಣ: ರಾಜಸ್ಥಾನ ಮಾಜಿ ಸಚಿವ ಮಹೇಶ್ ಜೋಶಿ ACB ವಶಕ್ಕೆ..!
ಜೈಪುರ ರೈಲು ನಿಲ್ದಾಣದ ಸಮೀಪದ ಸ್ಯಾನ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ಗುರುವಾರ ಬೆಳಗ್ಗೆ ಸುಮಾರು 5 ಗಂಟೆ ಸುಮಾರಿಗೆ ವಿಶೇಷ ತನಿಖಾ ತಂಡ (SIT) ದಾಳಿ ನಡೆಸಿ ಮಹೇಶ್ ಜೋಶಿ ಅವರನ್ನು ಬಂಧಿಸಿದೆ.

ಜಲ ಜೀವನ್ ಮಿಷನ್ (JJM) ಸಂಬಂಧಿಸಿದ 900 ಕೋಟಿ ರೂ. ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ಮಹೇಶ್ ಜೋಶಿ ಅವರನ್ನು ರಾಜಸ್ಥಾನ ಭ್ರಷ್ಟಾಚಾರ ನಿಗ್ರಹ ದಳ (ACB) ಅಧಿಕಾರಿಗಳು ಜೈಪುರದಲ್ಲಿ ಬಂಧನಕ್ಕೊಳಪಡಿಸಿದ್ದಾರೆ.
ಜೈಪುರ ರೈಲು ನಿಲ್ದಾಣದ ಸಮೀಪದ ಸ್ಯಾನ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ಗುರುವಾರ ಬೆಳಗ್ಗೆ ಸುಮಾರು 5 ಗಂಟೆ ಸುಮಾರಿಗೆ ವಿಶೇಷ ತನಿಖಾ ತಂಡ (SIT) ದಾಳಿ ನಡೆಸಿ ಮಹೇಶ್ ಜೋಶಿ ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹೇಶ್ ಜೋಶಿ ಅವರು ಅಂದಿನ PHED ಸಚಿವರಾಗಿದ್ದ ವೇಳೆ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ಟೆಂಡರ್ ಹಂಚಿಕೆಯಲ್ಲಿ ಲಂಚ ಪಡೆದಿದ್ದಾರೆ ಎಂಬ ಆರೋಪ ಇದ್ದು,. ಈ ಸಂಬಂಧ 2024ರ ಅಂತ್ಯದಲ್ಲಿ ಎಸಿಬಿ ಎಫ್ಐಆರ್ ದಾಖಲಿಸಿಕೊಂಡಿತ್ತು.
ಈ ಪ್ರಕರಣದಲ್ಲಿ ಹಲವಾರು ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ಈಗಾಗಲೇ ಬಂಧಿಸಲಾಗಿದೆ. ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ತನಿಖಾ ಸಂಸ್ಥೆ ತಿಳಿಸಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿ ಜೋಶಿ ಅವರನ್ನು 2025 ಏಪ್ರಿಲ್‌ನಲ್ಲಿ ಇಡಿ (ಜಾರಿ ನಿರ್ದೇಶನಾಲಯ) ಕೂಡ ಬಂಧಿಸಿತ್ತು. ಸುಮಾರು ಏಳು ತಿಂಗಳು ಜೈಲಿನಲ್ಲಿ ಇದ್ದ ಬಳಿಕ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದರು. ಈಗ ಎಸಿಬಿ ಮತ್ತೆ ಮಹೇಶ್ ಜೋಶಿ ಅವರನ್ನು ಬಂಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



