ಆಪರೇಷನ್ ಸಿಂದೂರ್‌ಗೆ ಒಂದು ವರ್ಷ; ಪ್ರಧಾನಿ ಮೋದಿಯ ಸಾಮಾಜಿಕ ಮಾಧ್ಯಮ ಖಾತೆಯ DP ಚೇಂಜ್
ಪ್ರಧಾನಿ ಮೋದಿ ಅವರು ತಮ್ಮ X, Facebook, Instagram ಮತ್ತು WhatsApp ಪ್ರೊಫೈಲ್ ನಲ್ಲಿ 'ಆಪರೇಷನ್ ಸಿಂಧೂರ್' ಎಂಬ ಪಠ್ಯವಿರುವ ಫೋಟೋ ಹಾಕಿದ್ದಾರೆ.

ನವದೆಹಲಿ: ಭಾರತದ ಅತ್ಯಂತ ಯಶಸ್ವಿ ಸೇನಾ ಕಾರ್ಯಾಚರಣೆಯಾದ ಆಪರೇಷನ್ ಸಿಂದೂರ್ ಗುರುವಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಎಲ್ಲಾ ಡಿಪಿಗಳನ್ನು ಬದಲಾಯಿಸಿದ್ದಾರೆ ಮತ್ತು ಸಶಸ್ತ್ರ ಪಡೆಗಳು ಹಾಗೂ ಅದರ ಯಶಸ್ಸಿಗೆ ಗೌರವದ ಸಂಕೇತವಾಗಿ ಎಲ್ಲರೂ ಡಿಪಿ ಚೇಂಜ್ ಮಾಡುವಂತೆ ಕರೆ ನೀಡಿದ್ದಾರೆ.
ಪ್ರಧಾನಿ ಮೋದಿ ಅವರು ತಮ್ಮ X, Facebook, Instagram ಮತ್ತು WhatsApp ಪ್ರೊಫೈಲ್ ನಲ್ಲಿ 'ಆಪರೇಷನ್ ಸಿಂಧೂರ್' ಎಂಬ ಪಠ್ಯವಿರುವ ಫೋಟೋ ಹಾಕಿದ್ದಾರೆ.
X ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ, ಒಂದು ವರ್ಷದ ಹಿಂದೆ, ಆಪರೇಷನ್ ಸಿಂಧೂರ್ ಸಮಯದಲ್ಲಿ, ಭಾರತೀಯ ಸಶಸ್ತ್ರ ಪಡೆಗಳು ತಮ್ಮ ಶೌರ್ಯವನ್ನು ಪ್ರದರ್ಶಿಸಿದವು ಮತ್ತು ನಮ್ಮ ಜನರ ಮೇಲೆ ದಾಳಿ ಮಾಡಿದವರಿಗೆ ತಕ್ಕ ಪ್ರತಿಕ್ರಿಯೆ ನೀಡಿತು. ಪ್ರತಿಯೊಬ್ಬ ಭಾರತೀಯನು ದೇಶದ ಸಶಸ್ತ್ರ ಪಡೆಗಳ ಬಗ್ಗೆ ಹೆಮ್ಮೆಪಡುತ್ತಾನೆ ಎಂದು ಬರೆದುಕೊಂಡಿದ್ದಾರೆ.
ಆಪರೇಷನ್ ಸಿಂಧೂರ್ ಸಮಯದಲ್ಲಿ ನಮ್ಮ ಸೇನಾ ಪಡೆಗಳು ಮತ್ತು ಅವರ ಯಶಸ್ಸಿಗೆ ಗೌರವದ ಸಂಕೇತವಾಗಿ, ನಾವೆಲ್ಲರೂ X, Facebook, Instagram ಮತ್ತು WhatsApp ಸೇರಿದಂತೆ ಸಾಮಾಜಿಕ ಮಾಧ್ಯಮಗಳ ಡಿಪಿಯನ್ನು 'ಆಪರೇಷನ್ ಸಿಂಧೂರ್' ಫೋಟೋದೊಂದಿಗೆ ಬದಲಾಯಿಸೋಣ" ಎಂದು ಕರೆ ನೀಡಿದ್ದಾರೆ.
ಮೇ 7 ರಂದು ಭಾರತ ಪಾಕಿಸ್ತಾನದಲ್ಲಿ ಭಯೋತ್ಪಾದಕರ ವಿರುದ್ಧ ಆಪರೇಷನ್ ಸಿಂದೂರ್ ಅನ್ನು ಪ್ರಾರಂಭಿಸಿತು. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂದೂರ್ ಕಾರ್ಯಾಚರಣೆ ನಡೆಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



