ದೆಹಲಿಯಲ್ಲಿ ದೇಶವೇ ತಲೆ ತಗ್ಗಿಸುವ ಘಟನೆ: 3 ವರ್ಷದ ಬಾಲಕಿ ಮೇಲೆ ಶಾಲೆ ಸಿಬ್ಬಂದಿ ಅತ್ಯಾಚಾರ; ಆರೋಪಿಗೆ ಜಾಮೀನು!
ಮೇ 1 ರಂದು ಸಂತ್ರಸ್ತೆಯ ತಾಯಿ ಜನಕ್‌ಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಶಾಲಾ ಸಮಯದಲ್ಲಿ ತನ್ನ ಮಗಳ ಮೇಲೆ ಶಾಲೆಯ ಅಪರಿಚಿತ ಸಿಬ್ಬಂದಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ದೆಹಲಿ: ಪಶ್ಚಿಮ ದೆಹಲಿಯ ಜನಕ್‌ಪುರಿಯಲ್ಲಿರುವ ಖಾಸಗಿ ಶಾಲೆಯೊಳಗೆ ಮೂರು ವರ್ಷದ ಬಾಲಕಿಯ ಮೇಲೆ ಸಿಬ್ಬಂದಿಯೊಬ್ಬರು ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ.
ಮೇ 1 ರಂದು ಸಂತ್ರಸ್ತೆಯ ತಾಯಿ ಜನಕ್‌ಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಶಾಲಾ ಸಮಯದಲ್ಲಿ ತನ್ನ ಮಗಳ ಮೇಲೆ ಶಾಲೆಯ ಅಪರಿಚಿತ ಸಿಬ್ಬಂದಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.
"ದೂರಿನ ಆಧಾರದ ಮೇಲೆ, ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 64(1) (ಅತ್ಯಾಚಾರಕ್ಕೆ ಶಿಕ್ಷೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಸೆಕ್ಷನ್ 6 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪೊಲೀಸರ ಪ್ರಕಾರ, ಮಗು ಆರೋಪಿಯನ್ನು ಗುರುತಿಸುವಲ್ಲಿ ಯಶಸ್ವಿಯಾದ ಪರಿಣಾಮ ಆತನನ್ನು ಶೀಘ್ರವಾಗಿ ಬಂಧಿಸಲಾಗಿದೆ. ನಂತರ ಆತನನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು.
ದ್ವಾರಕಾದ ನ್ಯಾಯಾಲಯ ಮೇ 7 ರಂದು ಆರೋಪಿಗೆ ಜಾಮೀನು ನೀಡಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. "ಪ್ರಾಸಿಕ್ಯೂಷನ್‌ನ ತೀವ್ರ ವಿರೋಧದ ಹೊರತಾಗಿಯೂ ಜಾಮೀನು ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
"ನ್ಯಾಯಾಲಯದ ಆದೇಶವನ್ನು ಸ್ವೀಕರಿಸಿ ಪರಿಶೀಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು, ಆದೇಶವನ್ನು ಇನ್ನೂ ಕಾಯುತ್ತಿದ್ದೇವೆ" ಎಂದು ಹೇಳಿಕೆಯಲ್ಲಿ ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



