ದಳಪತಿ ವಿಜಯ್ ಸಂಪುಟದಲ್ಲಿ VCKಗೆ ಒಂದು, CPIಗೆ ಎರಡು ಸಚಿವ ಸ್ಥಾನ; ಕಾಂಗ್ರೆಸ್ ಗೆ ಎಷ್ಟು?
ಬಹುಮತದ ಕೊರತೆ ಎದುರಿಸುತ್ತಿದ್ದ ಟಿವಿಕೆ ಮುಖ್ಯಸ್ಥ ವಿಜಯ್ ಅವರಿಗೆ ಕೊನೆಗೂ ಮ್ಯಾಜಿಕ್ ನಂಬರ್ ಸಿಕ್ಕಿದ್ದು, ಕಾಂಗ್ರೆಸ್ ನಂತರ ಸಿಪಿಐ ಮತ್ತು ವಿಸಿಕೆ ಸಹ ಬೆಂಬಲ ಘೋಷಿಸಿವೆ.

ಚೆನ್ನೈ: ಇತ್ತೀಚಿಗೆ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆಯುವ ಮೂಲಕ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಸೂಪರ್ಸ್ಟಾರ್ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷವು ಸಣ್ಣ ಸಣ್ಣ ಪಕ್ಷಗಳ ಬೆಂಬಲದೊಂದಿಗೆ ಸಮ್ಮಿಶ್ರ ಸರ್ಕಾರ ರಚನೆಗೆ ಭರ್ಜರಿ ಸಿದ್ಧತೆ ನಡೆಸಿದೆ.
ಬಹುಮತದ ಕೊರತೆ ಎದುರಿಸುತ್ತಿದ್ದ ಟಿವಿಕೆ ಮುಖ್ಯಸ್ಥ ವಿಜಯ್ ಅವರಿಗೆ ಕೊನೆಗೂ ಮ್ಯಾಜಿಕ್ ನಂಬರ್ ಸಿಕ್ಕಿದ್ದು, ಕಾಂಗ್ರೆಸ್ ನಂತರ ಸಿಪಿಐ ಮತ್ತು ವಿಸಿಕೆ ಸಹ ಬೆಂಬಲ ಘೋಷಿಸಿವೆ. ಹೀಗಾಗಿ ದಳಪತಿ ವಿಜಯ್ ಅವರು ಶೀಘ್ರದಲ್ಲೇ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ವಿಜಯ್ ನೇತೃತ್ವದ ಸಂಪುಟದಲ್ಲಿ ಸಣ್ಣ ಮಿತ್ರಪಕ್ಷಗಳು ಸಹ ಪ್ರಾತಿನಿಧ್ಯವನ್ನು ಹೊಂದಿರುತ್ತವೆ. ವಿಸಿಕೆ ಒಂದು ಸಚಿವ ಸ್ಥಾನವನ್ನು ಪಡೆಯುತ್ತದೆ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಸಿಪಿಐ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್(ಸಿಪಿಎಂ)ಗೆ ಎರಡು ಸಚಿವ ಸ್ಥಾನ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.
ವಿಸಿಕೆ ಮುಖ್ಯಸ್ಥ ಥೋಲ್ ತಿರುಮಾವಲವನ್ ಅವರೇ ವಿಜಯ್ ಸಂಪುಟ ಸೇರುವ ಸಾಧ್ಯತೆ ಇದೆ.
ಇನ್ನು ಡಿಎಂಕೆಯನ್ನು ತೊರೆದು ಟಿವಿಕೆಗೆ ಷರತ್ತುಬದ್ಧ ಬೆಂಬಲ ನೀಡಿದ ಕಾಂಗ್ರೆಸ್ ಸಹ ಎರಡು ಸಚಿವ ಸ್ಥಾನಗಳನ್ನು ನಿರೀಕ್ಷಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ತಲಾ ಇಬ್ಬರು ಶಾಸಕರನ್ನು ಹೊಂದಿರುವ ವಿಸಿಕೆ, ಸಿಪಿಐ ಮತ್ತು ಸಿಪಿಎಂಗಳು ಉನ್ನತ ಮಟ್ಟದ ಚರ್ಚೆ ನಡೆಸಿದ ನಂತರ ಇಂದು ಟಿವಿಕೆಗೆ ತಮ್ಮ ಬೆಂಬಲ ನೀಡುವುದಾಗಿ ಘೋಷಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



