TCS ಕಾರ್ಪೋರೇಟ್ ಜಿಹಾದ್ ಪ್ರಕರಣ: ಪರಾರಿಯಲ್ಲಿದ್ದ ಆರೋಪಿ Nida Khan ಕೊನೆಗೂ ಬಂಧನ; ರೋಚಕ ಕಾರ್ಯಾಚರಣೆ
TCS ಕಾರ್ಪೋರೇಟ್ ಜಿಹಾದ್ ಪ್ರಕರಣದಲ್ಲಿ ಸಂಸ್ಥೆಯಿಂದ ಅಮಾನತುಗೊಂಡು ಪರಾರಿಯಲ್ಲಿದ್ದ ನಿದಾ ಖಾನ್ ಅವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ

ಪುಣೆ: ಮಹಾರಾಷ್ಟ್ರದ ಟಿಸಿಎಸ್ Tata Consultancy Services (TCS) ಸಂಸ್ಥೆಯಲ್ಲಿ ನಡೆದಿದ್ದ ಕಾರ್ಪೋರೇಟ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡು ಪರಾರಿಯಲ್ಲಿದ್ದ ಪ್ರಮುಖ ಆರೋಪಿ ನಿದಾಖಾನ್ (Nida Khan)ಳನ್ನು ವಶಕ್ಕೆ ಪಡೆಯುವಲ್ಲಿ ಕೊನೆಗೂ ಮಹಾರಾಷ್ಟ್ರ ಪೊಲೀಸರು ಯಶಸ್ವಿಯಾಗಿದ್ದಾರೆ.
ನಾಸಿಕ್‌ನ ಟಿಸಿಎಸ್ ಕಚೇರಿಯಲ್ಲಿನ ಕಿರುಕುಳ ಮತ್ತು ಧಾರ್ಮಿಕ ಮತಾಂತರ ಆರೋಪಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನ ನಡೆದಿದೆ. ಹಲವು ವಾರಗಳಿಂದ ಪರಾರಿಯಾಗಿದ್ದ ನಿದಾ ಖಾನ್ ಅವರನ್ನು ಛತ್ರಪತಿ ಸಂಭಾಜಿನಗರದಲ್ಲಿ ಪತ್ತೆಹಚ್ಚಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ನಾಶಿಕ್‌ನ ಟಿಸಿಎಸ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ, ಕಚೇರಿ ದುರುಳತನ ಹಾಗೂ ಧಾರ್ಮಿಕ ಮತಾಂತರಕ್ಕೆ ಒತ್ತಾಯಿಸಿದ ಆರೋಪಗಳು ಹೊರಬಂದ ನಂತರ ಟಿಸಿಎಸ್ ಸಂಸ್ಥೆ ನಿದಾ ಖಾನ್ ಅವರನ್ನು ಅಮಾನತುಗೊಳಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಎಫ್‌ಐಆರ್‌ಗಳು ದಾಖಲಾಗಿದ್ದು, ಇತರ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ರೋಚಕ ಕಾರ್ಯಾಚರಣೆ
ತಾಂತ್ರಿಕ ನಿಗಾವಳಿ ಮೂಲಕ ನಿದಾ ಖಾನ್ ಅವರ ಸ್ಥಳವನ್ನು ಪತ್ತೆಹಚ್ಚಿದ ಪೊಲೀಸರು, ನರೇಗಾಂವ್ ಪ್ರದೇಶದ ಬಾಡಿಗೆ ಮನೆಯಲ್ಲಿ ಹಲವು ದಿನಗಳ ನಿಗಾವಳಿಯ ಬಳಿಕ ಬಂಧಿಸಿದ್ದಾರೆ. ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ತನಿಖೆಗಾಗಿ ನಾಶಿಕ್‌ಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಈ ಹಗರಣದಲ್ಲಿ ನಿದಾ ಖಾನ್ ಳನ್ನು "ಪ್ರಮುಖ ಆರೋಪಿ" ಮತ್ತು ಸಂಚು ರೂಪಿಸಿದ ಮಾಸ್ಟರ್‌ಮೈಂಡ್ ಎಂದು ಪರಿಗಣಿಸಲಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವುದು ಮತ್ತು ಮಹಿಳಾ ಉದ್ಯೋಗಿಗಳ ಬಲವಂತದ ಮತಾಂತರಕ್ಕೆ ಪ್ರಚೋದನೆ ನೀಡಿದ ಆರೋಪ ಆಕೆಯ ಮೇಲಿದೆ. ಸಂತ್ರಸ್ಥೆಯರು ದೂರು ನೀಡದಂತೆ ಆಕೆ ತಡೆದಿದ್ದರು ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ.
ನ್ಯಾಯಾಲಯವು ಆಕೆಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಈ ಬಂಧನ ನಡೆದಿದೆ. ಈ ಪ್ರಕರಣದಲ್ಲಿ ಬಂಧನಕ್ಕೊಳಗಾದ ಎಂಟನೇ ವ್ಯಕ್ತಿ ಈಕೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



