ಕೋಲ್ಕತ್ತಾ: ನಾಳೆ ಬಿಜೆಪಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಿಗಿ ಭದ್ರತೆ!
ಲಕ್ಷಾಂತರ ಜನರು ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದ್ದು, ಕೋಲ್ಕತ್ತಾ ಪೊಲೀಸರು ಶುಕ್ರವಾರ ನಗರ ಮತ್ತು ಸುತ್ತಮುತ್ತಲಿನ ಸರಕು ವಾಹನಗಳ ಸಂಚಾರವನ್ನು ನಿರ್ಬಂಧಗೊಳಿಸಿದ್ದಾರೆ.

ಕೋಲ್ಕತ್ತಾ: ನಾಳೆ ಇಲ್ಲಿನ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನೂತನ ಬಿಜೆಪಿ ಸರ್ಕಾರದ ಪದಗ್ರಹಣ ಸಮಾರಂಭ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಎಲ್ಲಾ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಕ್ಷಾಂತರ ಜನರು ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದ್ದು, ಕೋಲ್ಕತ್ತಾ ಪೊಲೀಸರು ಶುಕ್ರವಾರ ನಗರ ಮತ್ತು ಸುತ್ತಮುತ್ತಲಿನ ಸರಕು ವಾಹನಗಳ ಸಂಚಾರವನ್ನು ನಿರ್ಬಂಧಗೊಳಿಸಿದ್ದಾರೆ. ಶನಿವಾರ ಮುಂಜಾನೆಯಿಂದ ಎಸ್ಪ್ಲನೇಡ್ ರ‍್ಯಾಂಪ್, ಖಿದ್ದೀರ್‌ಪೋರ್ ರಸ್ತೆ, ಆಸ್ಪತ್ರೆ ರಸ್ತೆ, ಕ್ಯಾಸುವಾರಿನಾ ಅವೆನ್ಯೂ ಮತ್ತು ಕ್ವೀನ್ಸ್ ವೇನಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಬ್ರಿಗೇಡ್ ಪೆರೇಡ್ ಮೈದಾನ ಮತ್ತು ಪ್ರಮುಖ ಮಾರ್ಗಗಳ ಸುತ್ತಲೂ ಬಹು-ಹಂತದ ಭದ್ರತಾ ವ್ಯವಸ್ಥೆಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿವಿಐಪಿ ಬೆಂಗಾವಲು ವಾಹನಗಳ ಸುಗಮ ಸಂಚಾರ ಖಾತ್ರಿ ಮತ್ತು ಕೇಂದ್ರ ಕೋಲ್ಕತ್ತಾದಲ್ಲಿ ದಟ್ಟಣೆಯನ್ನು ತಪ್ಪಿಸಲು ವಿಶೇಷ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಸಂಚಾರ ನಿಯಮ ಪಾಲಿಸಲು ಪ್ರಯಾಣಿಕರಿಗೆ ಸೂಚಿಸಲಾಗಿದೆ" ಎಂದು ಅಧಿಕಾರಿ
ಶನಿವಾರ ಬೆಳಿಗ್ಗೆ 4 ರಿಂದ ರಾತ್ರಿ 8 ರವರೆಗೆ ಕೋಲ್ಕತ್ತಾದಲ್ಲಿ ಸರಕು ವಾಹನಗಳ ಸಂಚಾರವನ್ನು ನಿಷೇಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



